ಅಂಬೇಡ್ಕರ್ ಜಯಂತಿಯನ್ನು ಸರಳ ರೀತಿಯಲ್ಲಿ ಆಚರಿಸುವುದಾಗಿ ದಲಿತ ಸಂಘಟನೆಗಳಿಂದ ಭರವಸೆ

0
77

ವಿಜಯಪುರ ಎ.11: ಕೋವಿಡ್-19 ಸಾಂಕ್ರಾಮಿಕ ರೋಗವನ್ನು ತಡೆಗಟ್ಟುವ ಹಿನ್ನಲೆಯಲ್ಲಿ ಡಾ. ಬಾಬಾಸಾಹೇಬ ಅಂಬೇಡ್ಕರ ರವರ ಜಯಂತಿಯನ್ನು ಸರಳ ರೀತಿಯಲ್ಲಿ ಆಚರಿಸುವುದಾಗಿ ಜಿಲ್ಲಾಧಿಕಾರಿಗಳಿಗೆ ವಿವಿಧ ಸಂಘಟನೆಗಳು ಭರವಸೆ ನೀಡಿದ್ದಾರೆ ಎಂದು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಮಹೇಶ ಪೋತದಾರ ಅವರು ತಿಳಿಸಿದ್ದಾರೆ.
ಕೋವಿಡ್-19 ನಿಯಂತ್ರಣಕ್ಕಾಗಿ ದೇಶಾದ್ಯಂತ ಲಾಕ್‍ಡೌನ್ ಮಾಡಿರುವ ಹಿನ್ನಲೆಯಲ್ಲಿ ಯಾವುದೇ ಸಭೆ, ಸಮಾರಂಭವನ್ನು ಏರ್ಪಡಿಸದಿರಲು ನಿಷೇದಾಜ್ಞೆ ಇರುವುದರಿಂದ ದಿನಾಂಕ 14-04-2020 ರಂದು ಇರುವ ಭಾರತರತ್ನ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ ಜನ್ಮದಿನಾಚರಣೆಯನ್ನು ಸರ್ಕಾರದ ನಿಯಮಾವಳಿಗಳ ಅನ್ವಯ ಅಂದು ಬೆಳಿಗ್ಗೆ 9.30 ಗಂಟೆಗೆ ಡಾ.ಬಿ.ಆರ್ ಅಂಬೇಡ್ಕರ್ ವೃತ್ತದಲ್ಲಿರುವ ಪ್ರತಿಮೆಗೆ ಮಾಲಾರ್ಪಣೆ ಹಾಗೂ ಬೆಳಿಗ್ಗೆ 10.00 ಗಂಟೆಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಹಾನುಭಾವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವುದರ ಮೂಲಕ ಸರಳ ರೀತಿಯಲ್ಲಿ ಜಯಂತಿ ಆಚರಿಸಲಾಗುವುದು.
ಜಿಲ್ಲೆಯ ಎಲ್ಲ ದಲಿತ ಸಮುದಾಯ, ಸಮಾನ ಮನಸ್ಕರು, ಡಾ.ಬಿ.ಆರ್ ಅಂಬೇಡ್ಕರ ಅಭಿಮಾನಿಗಳು ಕೋವಿಡ್-19 ಮುನ್ನೆಚ್ಚರಿಕೆಯಾಗಿ ಸರ್ಕಾರ ಕೈಗೊಳ್ಳುತ್ತಿರುವ ಮುಂಜಾಗೃತಾ ಕ್ರಮಗಳಿಗೆ ಬೆಂಬಲಿಸುವುದಾಗಿ ಮತ್ತು ಜಿಲ್ಲೆಯ ಎಲ್ಲ ದಲಿತ ಬಾಂಧವರು ತಮ್ಮ ತಮ್ಮ ಮನೆಗಳಲ್ಲಿ, ಗ್ರಾಮಗಳಲ್ಲಿ ಅತ್ಯಂತ ಸರಳ, 3-5 ಜನರು ಕೂಡಿ, ಮಾಸ್ಕ್ ಧರಿಸಿ ಸಾಮಾಜಿಕ ಅಂತರ ಕಾಯ್ದುಕೊಂಡು ಜಯಂತಿ ಆಚರಿಸುವಂತೆ  ಸಮಾಜದ ದಲಿತಪರ ಸಂಘಟನೆಗಳು ಜಿಲ್ಲಾಧಿಕಾರಿಗಳಿಗೆ ಭರವಸೆ ನೀಡಿದ್ದಾರೆ.

LEAVE A REPLY

Please enter your comment!
Please enter your name here