ಬೆಳಗಾವಿ: ಅಪಘಾತದಲ್ಲಿ ಮೃತಪಟ್ಟ ಪಿಎಸ್‍ಐ ಗಣಾಚಾರಿ ಪಾರ್ಥಿವ ಶರೀರಕ್ಕೆ ಸಚಿವ ಜಗದೀಶ್ ಶೆಟ್ಟರ್ ಅವರಿಂದ ಅಂತಿಮ ನಮನ

0
260

ಬೆಳಗಾವಿ, ಏ.18 : ಕೊರೋನಾ ಸೊಂಕು ಹಿನ್ನೆಲೆಯಲ್ಲಿ ಲಾಕ್ ಡೌನ್ ಬಂದೋಬಸ್ತ್ ಗಾಗಿ ನಿಯೋಜಿಸಲಾಗಿದ್ದ ಸಂದರ್ಭದಲ್ಲಿ ಅಪಘಾತದಲ್ಲಿ ಮೃತಪಟ್ಟಿರುವ ಬೆಳಗಾವಿ ಖಡೇಬಜಾರ್ ಪೊಲೀಸ್ ಠಾಣೆಯ ಪಿಎಸ್‍ಐ ಮನೋಹರ ಗಣಾಚಾರಿ ಅವರ ಪಾರ್ಥಿವ ಶರೀರದ ದರ್ಶನ ಪಡೆದುಕೊಂಡ ಜಿಲ್ಲಾ ಉಸ್ತುವಾರಿ ಸಚಿವರಾದ ಜಗದೀಶ್ ಶೆಟ್ಟರ್ ಹಾಗೂ ರೈಲ್ವೆ ಇಲಾಖೆಯ ರಾಜ್ಯ ಸಚಿವರಾದ ಸುರೇಶ್ ಅಂಗಡಿ ಅವರು ಶ್ರದ್ಧಾಂಜಲಿ ಸಲ್ಲಿಸಿದರು.

ಇಲ್ಲಿನ ಪೊಲೀಸ್ ಹುತಾತ್ಮ ಮೈದಾನದಲ್ಲಿ ಇರಿಸಲಾಗಿದ್ದ ಪಾರ್ಥಿವ ದರ್ಶನ ಪಡೆದ ಗಣ್ಯರು ಹಾಗೂ ಹಿರಿಯ ಅಧಿಕಾರಿಗಳು ಕೂಡ ಶ್ರದ್ಧಾಂಜಲಿ ಸಲ್ಲಿಸಿದರು. ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುಖ್ತಾರ್ ಪಠಾಣ, ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ, ಪೊಲಿಸ್ ಆಯುಕ್ತರಾದ ಬಿ.ಎಸ್.ಲೋಕೇಶ್ ಕುಮಾರ್, ಡಿಸಿಪಿ ಸೀಮಾ ಲಾಟ್ಕರ್ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಇದೇ ವೇಳೆ ಪೊಲೀಸ್ ಗೌರವವನ್ನು ಕೂಡ ಸಲ್ಲಿಸಲಾಯಿತು


 

LEAVE A REPLY

Please enter your comment!
Please enter your name here