ವಿಜಯಪುರ: ಬಸವಣ್ಣನವರ ಸಪ್ತಸೂತ್ರ ವಚನಗಳು ಜಗತ್ತಿಗೆ ಮಾದರಿ -ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ

0
239

ವಿಜಯಪುರ ಎ.26: ಜಗಜ್ಯೋತಿ, ವಿಶ್ವಗುರು ಬಸವಣ್ಣನವರ ಸಪ್ತಸೂತ್ರ ವಚನಗಳು ಇಂದಿನ ಸಮಾಜಕ್ಕೆ ಮಾದರಿಯಾಗಿವೆ . ವಿಶ್ವಗುರು ಜಗಜ್ಯೋತಿ ಬಸವಣ್ಣನವರ ಜಯಂತಿ ಅಂಗವಾಗಿ ಬಸವಣ್ಣನವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಪಾರ್ಚನೆ ಮಾಡಿ, ಗೌರವ ಅರ್ಪಿಸಿ ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ್ ಅವರು ಮಾತನಾಡಿದರು.

ಮಹಿಳೆಯರ ಸಮಾನತೆ ಹಾಗೂ ಹಕ್ಕುಗಳಿಗಾಗಿ ದ್ವನಿ ಎತ್ತಿದವರು, ಲಿಂಗ, ಬೇಧ ಮರೆತು ಮಾನವರ ಏಕತೆಗಾಗಿ ಹೋರಾಟ ಮಾಡಿ ದುಡಿಯುವ ವರ್ಗಕ್ಕಾಗಿ, ಕಾಯಕ ಜೀವಿಗಳಿಗಾಗಿ, ನೊಂದವರ ಏಳಿಗೆಗಾಗಿ ಅವಿರತ ಶ್ರಮಿಸಿದ ಅವರು ಧರ್ಮವನ್ನು ಉಳಿಸಿ ಬೆಳೆಸಬೇಕು ಎಂದು ಪ್ರತಿಪಾದಿಸಿದರು ಬಸವಣ್ಣನವರ ಆದರ್ಶ, ತತ್ವಗಳು, ಚಿಂತನೆಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಅವರು ಹೇಳಿ ಕೋವಿಡ್-19 ಸಂಕಷ್ಟದ ಪರಿಸ್ಥಿತಿಯಲ್ಲಿ ಉಳ್ಳವರು ಬಡಜನರಿಗೆ ನೆರವಾಗುವಂತೆ ಮನವಿ ಮಾಡಿದರು.

ಕಾರ್ಯಕ್ರಮಕ್ಕೂ ಮೊದಲು ನಗರದ ಬಸವೇಶ್ವರ ವೃತ್ತದಲ್ಲಿ ಶ್ರೀ ಬಸವೇಶ್ವರರ ಅಶ್ವಾರೂಢ ಮೂರ್ತಿಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಲಾಯಿತು. ಕಾರ್ಯಕ್ರಮದಲ್ಲಿ ಪೋಲಿಸ್ ವರಿಷ್ಠಾಧಿಕಾರಿ ಅನುಪಮ್ ಅಗರವಾಲ, ಜಿಲ್ಲಾ ಪಂಚಾಯತ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಗೋವಿಂದ ರೆಡ್ಡಿ, ಅಪರ ಜಿಲ್ಲಾಧಿಕಾರಿ ಡಾ. ಔದ್ರಾಮ್, ಉಪವಿಭಾಗಾಧಿಕಾರಿ ಸೋಮಲಿಂಗ್ ಗೆಣ್ಣೂರ, ತಹಶೀಲ್ಧಾರ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ರಾಮ್ ಅರಸಿದ್ದಿ, ಡಿ.ಎಸ್.ಪಿ ಲಕ್ಷ್ಮೀ ನಾರಾಯಣ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಮಹೇಶ ಪೊದ್ದಾರ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಪೂಜಾರಿ ಹಾಗೂ ಇತರರು ಉಪಸ್ಥಿತರಿದ್ದರು.


 

ambedkar image

LEAVE A REPLY

Please enter your comment!
Please enter your name here