ವಿಜಯಪುರ: ಎಸ್.ಎಸ್.ಎಲ್.ಸಿ ಪರೀಕ್ಷೆ ವಿದ್ಯಾರ್ಥಿಗಳಿಗೆ ಮೂಲ ಸ್ಥಾನದಲ್ಲಿ ಬರೆಯಲು ಅವಕಾಶ

0
152
ಸಾಂದರ್ಭಿಕ ಚಿತ್ರ

ವಿಜಯಪುರ ಮೇ. 20 : ಕೊರೋನಾ ಹಿನ್ನೆಲೆಯಲ್ಲಿ ಮಾನ್ಯ ನಿರ್ದೇಶಕರು, ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ, ಬೆಂಗಳೂರು ರವರ ದಿನಾಂಕ : 03-07-2020ರ ಸುತ್ತೋಲೆಯಲ್ಲಿ ಮಾರ್ಚ್/ಏಪ್ರೀಲ್ -2020 ರ ಎಸ್.ಎಸ್.ಎಲ್.ಸಿ ಪರೀಕ್ಷೆಯ ಶಾಲಾ ವಿದ್ಯಾರ್ಥಿಗಳು, ವಲಸೆ ಕಾರ್ಮಿಕರ ಮಕ್ಕಳು ತಮ್ಮ ಮೂಲ ಸ್ಥಾನದಲ್ಲಿ  ಪರೀಕ್ಷೆ ಬರೆಯಲು ಅವಕಾಶ ನೀಡಿರುವುದಾಗಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.

ಮಾರ್ಚ್/ಏಪ್ರೀಲ್ -2020 ರ ಎಸ್.ಎಸ್.ಎಲ್.ಸಿ ಪರೀಕ್ಷೆಯ ಶಾಲಾ ವಿದ್ಯಾರ್ಥಿಗಳು, ವಲಸೆ ಕಾರ್ಮಿಕರ ಮಕ್ಕಳು ಕೊರೋನಾ ಹಿನ್ನೆಲೆಯಲ್ಲಿ ತಾವು ವ್ಯಾಸಂಗ ಮಾಡಿರುವ ಶಾಲೆಗಳಿಗೆ ಮರಳುವ ಹಾಗೂ ಈಗಾಗಲೇ ಪ್ರವೇಶ ಪತ್ರದಲ್ಲಿ ನಮೂದಾದ ಕೇಂದ್ರದಲ್ಲಿ ಪರೀಕ್ಷೆ ಬರೆಯಲು ಸಾಧ್ಯವಾಗದಿರುವ ಕಾರಣ ಹಾಗೂ ವಸತಿ ಶಾಲೆಗಳು ಹಾಗೂ ಹಾಸ್ಟೇಲ್‍ಗಳನ್ನು ಜಿಲ್ಲೆಗಳಲ್ಲಿ ಕ್ವಾರಂಟೈನ್ ಕೇಂದ್ರಗಳನ್ನಾಗಿ ಬಳಸಲಾಗುತ್ತಿರುವುದರಿಂದ ವಿದ್ಯಾರ್ಥಿಗಳಿಗೂ ಸಹ ತಮ್ಮ ಮೂಲ ಸ್ಥಾನದಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡಿರುವುದಾಗಿ ತಿಳಿಸಿರುತ್ತಾರೆ.

ಆದ್ದರಿಂದ ಶಾಲಾ ಮುಖ್ಯ ಶಿಕ್ಷಕರು ಅವರ ಶಾಲೆಯಲ್ಲಿನ ವಲಸೆ ಕಾರ್ಮಿಕರ ಮಕ್ಕಳು ಹಾಗೂ ವಸತಿ ಶಾಲೆಗಳ ಹಾಗೂ ಹಾಸ್ಟೇಲ್‍ಗಳ ವಿದ್ಯಾರ್ಥಿಗಳನ್ನು ದೂರವಾಣಿ ಮೂಲಕ ಸಂಪರ್ಕಿಸಿ ಅವರ ಮೂಲ ಕೇಂದ್ರಗಳಲ್ಲಿ ಪರೀಕ್ಷೆ ಬರೆಯುವ ಬದಲಾಗಿ ತಮ್ಮ ಮೂಲ ಜಿಲ್ಲೆ, ತಾಲೂಕಿನ ಯಾವ ಕೇಂದ್ರದಲ್ಲಿ ಪರೀಕ್ಷೆ ಬರೆಯಲು ಇಚ್ಛಿಸುತ್ತಾರೆ ಎಂಬ ಮಾಹಿತಿ ಪಡೆದು ದಿನಾಂಕ 25-05-2020ರೊಳಗೆ ಮಂಡಳಿಯ ಜಾಲತಾಣವಾದ (Kseeb.kar.nic.in) ಶಾಲಾ ಲಾಗ್ ಇನ್‍ನಲ್ಲಿ ನಮೂದಿಸುವಂತೆ ತಿಳಿಸಲಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Advertisement

LEAVE A REPLY

Please enter your comment!
Please enter your name here