ವಿಜಯಪುರ: ಮುಂದುವರಿದ ಕೊರೋನಾ ಅಟ್ಟಹಾಸ; ಇಂದು ಐವರಲ್ಲಿ ಪಾಸಿಟಿವ್

0
303

ವಿಜಯಪುರ ಮೇ.26: ಮಹಾರಾಷ್ಟ್ರದಿಂದ ಆಗಮಿಸಿದ್ದ 5 ಜನರಲ್ಲಿ ಕೊರೋನಾ ಪಾಸಿಟಿವ್ ದೃಡಪಟ್ಟಿದ್ದು, ಜಿಲ್ಲೆಗೆ ಆಮಿಸಿರುವ 18 ವರ್ಷದ ವಯೋಮಾನದ ರೋಗಿ ಸಂಖ್ಯೆ 2203 (ಯುವಕ), 34 ವಯೋಮಾನದ ರೋಗಿಸಂಖ್ಯೆ 2204 (ಪುರುಷ), 30 ವರ್ಷ ವಯೋಮಾನದ ರೋಗಿ ಸಂಖ್ಯೆ 2205 (ಪುರುಷ), 60 ವರ್ಷ ವಯೋಮಾನದ ರೋಗಿಸಂಖ್ಯೆ 2206 (ವೃದ್ಧ), 17 ವರ್ಷ ವಯೋಮಾನದ ರೋಗಿಸಂಖ್ಯೆ 2207 (ಯುವಕ) ಈ 5 ಪಾಸಿಟಿವ್ ರೋಗಿಗಳ ಪೈಕಿ ನಾಲ್ವರು ಮಹಾರಾಷ್ಟ್ರದ ಮುಂಬೈಯಿಂದ ಆಮಿಸಿದ್ದು, ಓರ್ವ ಮಹಾರಾಷ್ಟ್ರದ ಸೊಲ್ಲಾಪೂರದಿಂದ ಆಗಮಿಸಿದ್ದಾರೆ.

ಈ 5 ಪಾಸಿಟಿವ್ ರೋಗಿಗಳನ್ನು ಸಾಂಸ್ಥಿಕ ಕ್ವಾರಂಟೈನ್ ಮಾಡಲಾಗಿತ್ತು, ಕೋವಿಡ್-19 ರೋಗ ಪಾಸಿಟಿವ್ ದೃಡಪಟ್ಟನಂತರ ನಗರದ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಕೈಗೊಳ್ಳಲಾಗುತ್ತಿದೆ. ನಗರದ ಕಂಟೇನ್ಮೆಂಟ್ ವಲಯ ವ್ಯಾಪ್ತಿಯಲ್ಲಿ ಸರ್ವೇಲನ್ಸ್ ಕಾರ್ಯ ಮುಂದುವರೆದಿದ್ದು, ಸಾರಿ, ಐಎಲ್‍ಐ ಪ್ರಕರಣಗಳು ಕಂಡುಬಂದಲ್ಲಿ ಜಿಲ್ಲೆಯ ತಜ್ಞವೈದ್ಯರ ಸಲಹೆ ಮೇರೆಗೆ ಅವರ ಗಂಟಲುದ್ರವ ಮಾದರಿಯನ್ನು ಪರೀಕ್ಷೆಗೆ ಕಳುಹಿಸಿಕೊಡಲಾಗುವುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಒಟ್ಟು 75 ಕೋವಿಡ್-19 ಪಾಸಿಟಿವ್ ಪ್ರಕರಣಗಳು ದೃಡಪಟ್ಟಿವೆ. ಸಧ್ಯಕ್ಕೆ 27 ರೋಗಿಗಳು ಮಾತ್ರ ಕೋವಿಡ್-19 ಪಾಸಿಟಿವ್ ಸಕ್ರಿಯ ರೋಗಿಗಳಾಗಿದ್ದು ಪರಿಣಾಮಕಾರಿಯಾದ ಚಿಕಿತ್ಸೆಯನ್ನು ಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ವೈ,ಎಸ್ ಪಾಟೀಲ ಅವರು ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಈವರೆಗೆ ವಿದೇಶ ಸೇರಿದಂತೆ ಇತರ ಪ್ರದೇಶಗಳಿಂದ 27,383 ಜನರು ಬಂದ ಬಗ್ಗೆ ವರದಿಯಾಗಿದ್ದು, ಇವರ ಮೇಲೆ ತೀವ್ರ ನಿಗಾ ಇಡಲಾಗಿದೆ. ಒಟ್ಟು 75 ಕೋವಿಡ್ -19 ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದ್ದು. 1925 ಜನರು 28 ದಿನಗಳ ಐಸೋಲೇಶನ್ ಅವಧಿ ಪೂರ್ಣಗೊಳಿಸಿದ್ದಾರೆ. 25410 ಜನರು (1 ರಿಂದ 28 ದಿನಗಳ) ರಿರ್ಪೋಟಿಂಗ್ ಅವಧಿಯಲ್ಲಿದ್ದು, ಈವರೆಗೆ ಒಟ್ಟು 4 ಜನ ಕೋವಿಡ್-19 ರೋಗಿಗಳು ಮೃತಪಟ್ಟಿದ್ದಾರೆ. ಈವರೆಗೆ 17,413 ಜನರ ಗಂಟಲು ದ್ರವ ಮಾದರಿಯನ್ನು ಸಂಗ್ರಹಿಸಿದ್ದು, 8,856 ಜನರ ನೆಗೆಟಿವ್ ವರದಿ ಬಂದಿದೆ. ಇನ್ನೂ 8,500 ಜನರ ಗಂಟಲು ದ್ರವ ಮಾದರಿ ಪರೀಕ್ಷಾ ವರದಿ ಬರಬೇಕಾಗಿದೆ ಎಂದು ಅವರು ತಿಳಿಸಿದ್ದಾರೆ.


LEAVE A REPLY

Please enter your comment!
Please enter your name here