ವಿಜಯಪುರ: ಕಂಟೇನ್ಮೆಂಟ್ ಜೋನ್ ನಲ್ಲಿ ಮತ್ತೆ ಕೊರೋನಾ ಅಟ್ಟಹಾಸ;

0
281

ವಿಜಯಪುರ ಜೂ.13 : ಇಂದು ಮತ್ತೆ 6 ಕೋವಿಡ್-19 ಪಾಸಿಟಿವ್ ಪ್ರಕರಣಗಳು ದೃಢಪಟ್ಟಿವೆ. ಜಿಲ್ಲೆಯಲ್ಲಿ ಈವರೆಗೆ ಒಟ್ಟು 228 ಕೋವಿಡ್-19 ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದ್ದು, ಜಿಲ್ಲಾಸ್ಪತ್ರೆಯಲ್ಲಿ 70 ರೋಗಿಗಳು ಕೋವಿಡ್-19 ಪಾಸಿಟಿವ್ ಸಕ್ರಿಯ ರೋಗಿಗಳಾಗಿದ್ದಾರೆ  ಎಂದು ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ ಅವರು ತಿಳಿಸಿದ್ದಾರೆ.

ಜಿಲ್ಲೆಯ ಸೋಂಕಿತರಲ್ಲಿ ರೋಗಿ ಸಂಖ್ಯೆ 6584 (50 ವರ್ಷದ ಪುರುಷ) ರೋಗಿ ಸಂಖ್ಯೆ 6585 (21 ವರ್ಷದ ಪುರುಷ) ಇವರಿಗೆ ಮಹಾರಾಷ್ಟ್ರ ಸಂಪರ್ಕದಿಂದ, ರೋಗಿ ಸಂಖ್ಯೆ 6586 (46 ವರ್ಷದ ಪುರುಷ) ರೋಗಿ ಸಂಖ್ಯೆ 6587 (55 ವರ್ಷದ ಪುರುಷ) ರೋಗಿ ಸಂಖ್ಯೆ 6588 (58 ವರ್ಷದ ಪುರುಷ) ಇವರಿಗೆ ಕಂಟೇನ್ಮೆಂಟ್ ಜೋನ್ ಸಂಪರ್ಕದಿಂದ ಹಾಗೂ ರೋಗಿ ಸಂಖ್ಯೆ 6589 (9 ವರ್ಷದ ಬಾಲಕ) ಐಎಲ್‍ಐ ಸಂಪರ್ಕದಿಂದ ಸೋಂಕು ತಗುಲಿರುವುದು ದೃಢಪಟ್ಟಿದೆ ಎಂದು ಅವರು ತಿಳಿಸಿದ್ದಾರೆ.

ರೋಗಿ ಸಂಖ್ಯೆ 2844 (15 ವರ್ಷದ ಬಾಲಕ) ರೋಗಿ ಸಂಖ್ಯೆ 4827 (58 ವರ್ಷದ ಮಹಿಳೆ) ರೋಗಿ ಸಂಖ್ಯೆ 5980 (9 ವರ್ಷದ ಬಾಲಕ) ರೋಗಿ ಸಂಖ್ಯೆ 5982 (10 ವರ್ಷದ ಬಾಲಕ) ರೋಗಿ ಸಂಖ್ಯೆ 5983 (10 ವರ್ಷದ ಪುರುಷ ಬಾಲಕ) ಸೋಂಕಿನಿಂದ ಗುಣಮುಖರಾಗಿ ಜಿಲ್ಲಾಸ್ಪತೆಯಿಂದ ಬಿಡುಗಡೆ ಆಗಿದ್ದಾರೆ.

ಜಿಲ್ಲೆಯಲ್ಲಿ ಈವರೆಗೆ ವಿದೇಶ ಸೇರಿದಂತೆ ಇತರ ಪ್ರದೇಶಗಳಿಂದ 29,492 ಜನರು ಬಂದ ಬಗ್ಗೆ ವರದಿಯಾಗಿದ್ದು, ಇವರ ಮೇಲೆ ತೀವ್ರ ನಿಗಾ ಇಡಲಾಗಿದೆ. ಒಟ್ಟು 228 ಕೋವಿಡ್ -19 ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದ್ದಾರೆ. 8809 ಜನರು 28 ದಿನಗಳ ಐಸೋಲೇಶನ್ ಅವಧಿ ಪೂರ್ಣಗೊಳಿಸಿದ್ದಾರೆ. 20525 ಜನರು (1 ರಿಂದ 28 ದಿನಗಳ) ರಿಪೋರ್ಟಿಂಗ್ ಅವಧಿಯಲ್ಲಿದ್ದು, ಈವರೆಗೆ ಒಟ್ಟು 6 ಜನ ಕೋವಿಡ್-19 ರೋಗಿಗಳು ಮೃತಪಟ್ಟಿದ್ದಾರೆ. 152 ಜನರು ಕೋವಿಡ್-19 ರೋಗದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, 70 ಜನರು ಆಸ್ಪತ್ರೆಯಲ್ಲಿರುವ ಕೋವಿಡ್-19 ಸಕ್ರಿಯ ರೋಗಿಗಳಾಗಿದ್ದಾರೆ. ಈವರೆಗೆ 26887 ಜನರ ಗಂಟಲು ದ್ರವ ಮಾದರಿಯನ್ನು ಸಂಗ್ರಹಿಸಿದ್ದು, 26384 ಜನರ ನೆಗೆಟಿವ್ ವರದಿ ಬಂದಿದೆ. ಇನ್ನೂ 275 ಜನರ ಗಂಟಲು ದ್ರವ ಮಾದರಿ ಪರೀಕ್ಷಾ ವರದಿ ಬರಬೇಕಾಗಿದೆ ಎಂದು ಅವರು ತಿಳಿಸಿದ್ದಾರೆ.


 

LEAVE A REPLY

Please enter your comment!
Please enter your name here