ಮೇಘನಾ ಕ್ಷಮೆ ಕೇಳಿದ ಇಂದ್ರಜಿತ್ ಲಂಕೇಶ್

0
59
ಇಂದ್ರಜಿತ್ ಲಂಕೇಶ್

ಬೆಂಗಳೂರು: ನಿರ್ದೇಶಕ ಇಂದ್ರಜಿತ್ ಲಂಕೇಶ್, ನಟ ಚಿರಂಜೀವಿ ಸರ್ಜಾ ಕುರಿತ ಹೇಳಿಕೆಗೆ ಮೇಘನಾ ರಾಜ್ ರನ್ನು ಕ್ಷಮೆಯಾಚಿಸಿದ್ದಾರೆ.

ಇಂದ್ರಜಿತ್ ಲಂಕೇಶ್ ಹೇಳಿಕೆಯಿಂದ ನನಗೆ ನೋವಾಗಿದ್ದು, ಅವರು ಬಹಿರಂಗ ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿ ನಟಿ ಮೇಘನಾ ರಾಜ್ ಅವರು ಚಲನಚಿತ್ರ ವಾಣಿಜ್ಯ ಮಂಡಳಿಗೆ ಪತ್ರ ಬರೆದಿದ್ದರು. ಇದರ ಬೆನ್ನಲ್ಲೇ ಇಂದ್ರಜಿತ್ ಲಂಕೇಶ್ ಕ್ಷಮೆಯಾಚಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಇಂದ್ರಜಿತ್, ಚಿರು ಬಗ್ಗೆ ನಾನು ನೀಡಿದ್ದ ಹೇಳಿಕೆಯನ್ನು ವಾಪಸ್ ಪಡೆದಿದ್ದೇನೆ. ನನ್ನ ಹೇಳಿಕೆಯಿಂದ ಅವರ ಕುಟುಂಬಕ್ಕೆ ನೋವಾಗಿದ್ದರೆ ಕ್ಷಮೆಯಿರಲಿ. ಈ ಬಗ್ಗೆ ನಾನು ಅವರ ಕುಟುಂಬವನ್ನು ಭೇಟಿಯಾಗಿ ಕ್ಷಮೆ ಕೇಳಲು ಸಿದ್ಧನಿದ್ದೇನೆ ಎಂದಿದ್ದಾರೆ.

ಡ್ರಗ್ಸ್ ವಿಚಾರವಾಗಿ ಮಾತನಾಡಿದ್ದ ಇಂದ್ರಜಿತ್ ಲಂಕೇಶ್, ಇತ್ತೀಚೆಗೆ ಸಾವನ್ನಪ್ಪಿದ್ದ ನಟನ ಪೋಸ್ಟ್ ಮಾರ್ಟಮ್ ಯಾಕೇ ಮಾಡಿಲ್ಲ ಎಂದು ಪ್ರಶ್ನಿಸಿದ್ದರು. ಈ ಹಿನ್ನಲೆಯಲ್ಲಿ ನಟಿ ಮೇಘನಾ ರಾಜ್ ಚಲನಚಿತ್ರ ವಾಣಿಜ್ಯ ಮಂಡಳಿಗೆ ದೂರು ನೀಡಿದ್ದರು.


 

LEAVE A REPLY

Please enter your comment!
Please enter your name here