ವಿಜಯಪುರ: ನಿವೇಶನ ಹಕ್ಕುಪತ್ರ ಪರಿಶೀಲಿಸುವಂತೆ ಜಿಲ್ಲಾಧಿಕಾರಿ ಸೂಚನೆ

0
251

ವಿಜಯಪುರ ಸೆ.16: ಆಲಮಟ್ಟಿ ಹಿನ್ನೀರಿನಿಂದ ಮುಳುಗಡೆಯಾದ ಕೋಲಾರ ವ್ಯಾಪ್ತಿಯ ಅರ್ಹ ಫಲಾನುಭವಿಗಳಿಗೆ ಪುನರ್ ವಸತಿ ಅಂಗವಾಗಿ ನಿವೇಶನ, ಹಕ್ಕುಪತ್ರ ನೀಡಿರುವ ಬಗ್ಗೆ ಪರಿಶೀಲನೆ ನಡೆಸುವಂತೆ ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಕೋಲಾರ ಪಟ್ಟಣ ಪಂಚಾಯತಿಯ ಅಧಿಕಾರಿ ಮತ್ತು ಸಿಬ್ಬಂದಿಗಳು, ತಹಶೀಲ್ದಾರ, ಉಪವಿಭಾಗಾಧಿಕಾರಿಗಳೊಂದಿಗೆ ಕೋಲಾರ ಪಟ್ಟಣ ಪಂಚಾಯತಿ ಕಛೇರಿಯಲ್ಲಿ ಸಭೆ ನಡೆಸಿದ ಅವರು ಆಲಮಟ್ಟಿ ಹಿನ್ನೀರಿನಿಂದ ಬಾಧಿತವಾದ ಜನರ ಅನುಕೂಲಕ್ಕಾಗಿ ಕೃಷ್ಣಾ ಭಾಗ್ಯ ಜಲನಿಗಮ ಪುನರ್ ವಸತಿ ಯೋಜನೆಯಡಿ ಅರ್ಹ ಸಂತ್ರಸ್ತತರಿಗೆ ನಿವೇಶನ, ಹಕ್ಕುಪತ್ರ ನೀಡದೆ ಇರುವ ಬಗ್ಗೆ ದೂರುಗಳು ಬಂದಿದ್ದು, ಈ ಹಿನ್ನೆಲೆಯಲ್ಲಿ ಈ ಹಕ್ಕುಪತ್ರ ವಿತರಣೆಗೆ ಸಂಬಂಧಪಟ್ಟಂತೆ ಆಗಿರುವ ಲೋಪಗಳ ಬಗ್ಗೆ ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಅವರು ಸೂಚನೆ ನೀಡಿದರು.

ಕೋಲಾರ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಸಾರ್ವಜನಿಕರು ಯಾವುದೇ ನಿವೇಶನ ಖರೀದಿಸುವಾಗ ಆಸ್ತಿಯ ನೈಜತೆಯನ್ನು ಪರಿಶೀಲಿಸಿ ಖರೀದಿ ಮಾಡುವಂತೆ, ಆಸ್ತಿಯ ಸಂಬಂಧಪಟ್ಟ ಸೂಕ್ತ ದಾಖಲಾತಿಗಳನ್ನು ಮುಖ್ಯಾಧಿಕಾರಿಗಳಿಗೆ ನೀಡುವಂತೆ ಸೂಚಿಸಿದ್ದಾರೆ.

ಅದರಂತೆ ಕೋಲಾರ ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿ ಹಕ್ಕುಪತ್ರ ವಿತರಣೆಗೆ ಸಂಬಂಧಪಟ್ಟಂತೆ ಆಗಿರುವ ಲೋಪಗಳ ಬಗ್ಗೆ ಕೂಲಂಕೂಷವಾಗಿ ಪರಿಶೀಲಿಸಿ ಅರ್ಹ ಸಂತ್ರಸ್ತರಿಗೆ ಹಕ್ಕುಪತ್ರ ವಿತರಿಸಲಾಗಿದೆಯೆ ಎಂಬುದರ ಬಗ್ಗೆ ಪರಿಶೀಲನೆಗೆ ಇಬ್ಬರು ಅಧಿಕಾರಿಗಳನ್ನು ನೇಮಿಸಿದ್ದು, ಈ ಕುರಿತು ವರದಿ ಸಲ್ಲಿಸುವಂತೆ ಅವರು ಸೂಚನೆ ನೀಡಿದ್ದಾರೆ.

ಸಭೆಯಲ್ಲಿ ಉಪವಿಭಾಗಾಧಿಕಾರಿ ಬಲರಾಮ ಲಮಾಣಿ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಶ್ರೀ ವಿಜಯ ಮೆಕ್ಕಲಕಿ, ಎಇಇ ಶ್ರೀ ಜುಮನಾಳ ಸೇರಿದಂತೆ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.


 

LEAVE A REPLY

Please enter your comment!
Please enter your name here