ಮಾಸ್ಕ್ ಧರಿಸದಿದ್ದರೆ ದಂಡ -ಜಿಲ್ಲಾಧಿಕಾರಿ ಪಿ.ಸುನೀಲ ಕುಮಾರ್

0
233

ವಿಜಯಪುರ ಅ.02: ಸರ್ಕಾರದ ತೆರವು -5 (ಅನ್‍ಲಾಕ್-5)ರ ಮಾರ್ಗಸೂಚಿ ಮತ್ತು ಸರ್ಕಾರದ ಆದೇಶದಂತೆ ಮಾಸ್ಕ್ ಧರಿಸದೆ ಇರುವ ಮತ್ತು ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳದೇ ಇರುವವರಿಂದ ದಂಡ ವಸೂಲಾತಿ ಮಾಡಲಾಗುತ್ತದೆ ಎಂದು ಜಿಲ್ಲಾಧಿಕಾರಿ ಪಿ.ಸುನೀಲ ಕುಮಾರ್ ಅವರು ತಿಳಿಸಿದ್ದಾರೆ.

ಮಹಾನಗರ ಪಾಲಿಕೆ ವ್ಯಾಪ್ತಿಯ ಪ್ರದೇಶದಲ್ಲಿ 1000 ರೂ. ಹಾಗೂ ಮಹಾನಗರ ಪಾಲಿಕೆ ವ್ಯಾಪ್ತಿ ಪ್ರದೇಶವನ್ನು ಹೊರತುಪಡಿಸಿ (ನಗರ ಮತ್ತು ಗ್ರಾಮೀಣ ಪ್ರದೇಶ)ಗಳಲ್ಲಿ 500 ರೂ. ದಂಡವನ್ನು ತಪ್ಪಿತಸ್ಥರಿಂದ ವಸೂಲಿ ಮಾಡಲಾಗುತ್ತದೆ.

ಸಾರ್ವಜನಿಕ ಪ್ರದೇಶಗಳಲ್ಲಿ ಕನಿಷ್ಠ 6 ಅಡಿಗಳ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳದ, ಅಂಗಡಿ, ಮುಂಗಟ್ಟುಗಳ ಮುಂದೆ ಗ್ರಾಹಕರಲ್ಲಿ ದೈಹಿಕ ಅಂತರವನ್ನು ಕಾಯ್ದುಕೊಳ್ಳದ, ಸಾರ್ವಜನಿಕ ಸ್ಥಳಗಳಲ್ಲಿ ಉಗಿಯುವವರ ಹಾಗೂ ಕಡ್ಡಾಯವಾಗಿ ಮಾಸ್ಕ್ ಧರಿಸದೆ ಇರುವವರಿಂದ ಈ ದಂಡವನ್ನು ವಸೂಲಿ ಮಾಡಲಾಗುತ್ತಿದ್ದು, ಸಾರ್ವಜನಿಕರು, ವ್ಯಾಪಾರಸ್ಥರು ಸಾಮಾಜಿಕ ಅಂತರ ಮತ್ತು ಮಾಸ್ಕ್ ಧರಿಸುವದರೊಂದಿಗೆ ಕೊರೋನಾ-19 ಸೋಂಕನ್ನು ನಿಯಂತ್ರಿಸಲು ಸಹಕರಿಸುವಂತೆ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


 

LEAVE A REPLY

Please enter your comment!
Please enter your name here