ಶಿರಾ ಕ್ಷೇತ್ರದಲ್ಲಿ ಇತಿಹಾಸದಲ್ಲೇ ಮೊದಲ ಬಾರಿಗೆ ಬಿಜೆಪಿಗೆ ಗೆಲುವು

0
319

ತುಮಕೂರು ನ.10:  ಉಪಚುನಾವಣೆಯಲ್ಲಿ ಬಿಜೆಪಿ ಪ್ರಚಂಡ ಜಯಭೇರಿ ಭಾರಿಸಿದೆ. ತನ್ನದಲ್ಲದ ಕ್ಷೇತ್ರಗಳನ್ನು ಬಿಜೆಪಿ ತನ್ನ ವಶಕ್ಕೆ ಪಡೆದಿದೆ. ಆರ್ ಆರ್ ನಗರದಲ್ಲಿ ಮುನಿರತ್ನ ಹಾಗೂ ಶಿರಾದಲ್ಲಿ ಡಾ.ರಾಜೇಶ ಗೌಡ ಗೆಲುವು ಸಾಧಿಸಿದ್ದಾರೆ. ಮುನಿರತ್ನ ಕ್ಷೇತ್ರದ ಹಾಲಿ ಶಾಸಕರಾಗಿದ್ದು, 3ನೇ ಬಾರಿಗೆ ಗೆಲುವುದು ಸಾಧಿಸಿದ್ದಾರೆ. ಮೊದಲ ಚುನಾವಣೆಯಲ್ಲಿ ಅವರು 17 ಸಾವಿರ, 2ನೇ ಚುನಾವಣೆಯಲ್ಲಿ 26 ಸಾವಿರ ಹಾಗೂ 3ನೇ ಚುನಾವಣೆಯಲ್ಲಿ 57 ಸಾವಿರ ಮತಗಳ ಅಂತರದಿಂದ ಗೆದ್ದಿದ್ದಾರೆ.

ಶಿರಾ ಕ್ಷೇತ್ರದಲ್ಲಿ ಇತಿಹಾಸದಲ್ಲೇ ಮೊದಲ ಬಾರಿಗೆ ಬಿಜೆಪಿ ಗೆಲುವು ಸಾಧಿಸಿದೆ. ಯಡಿಯೂರಪ್ಪ ಅವರ ಪುತ್ರ, ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಚುನಾವಣೆಯ ಉಸ್ತುವಾರಿ ವಹಿಸಿಕೊಂಡಿದ್ದರು. ಕೆ.ಆರ್ ಪೇಟೆಯಲ್ಲೂ ವಿಜಯೇಂದ್ರ ಉಸ್ತುವಾರಿಯಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು ಸಾಧಿಸಿತ್ತು.

ಉಪಚುನಾವಣೆಯಲ್ಲಿ ಆರ್.ಆರ್.ನಗರ ಹಾಗೂ ಶಿರಾ ಎರಡೂ ಕ್ಷೇತ್ರಗಳಲ್ಲೂ ಬಿಜೆಪಿ ಜಯಭೇರಿ ಭಾರಿಸಿದೆ. ಶಿರಾದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವಿನ ಮೂಲಕ ಇತಿಹಾಸ ಸೃಷ್ಟಿಸಿದೆ.

ಶಿರಾದಲ್ಲಿ ಬಿಜೆಪಿ ಅಭ್ಯರ್ಥಿ ರಾಜೇಶ್ ಗೌಡ 10 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ.ಜಯಚಂದ್ರ ಹಾಗೂ ಜೆಡಿಎಸ್ ಅಭ್ಯರ್ಥಿ ಅಮ್ಮಾಜಮ್ಮಾ ಸೋಲನುಭವಿಸಿದ್ದಾರೆ.

ಬಿಜೆಪಿ ಅಭ್ಯರ್ಥಿ ರಾಜೇಶ್ ಗೌಡ 66,599 ಮತಗಳನ್ನು ಪಡೆದಿದ್ದರೆ, ಕಾಂಗ್ರೆಸ್ ನ ಟಿ.ಬಿ.ಜಯಚಂದ್ರ 55,825 ಮತಗಳನ್ನು ಪಡೆದುಕೊಂಡಿದ್ದಾರೆ. ಇನ್ನು ಜೆಡಿಎಸ್ ನ ಅಮ್ಮಾಜಮ್ಮಾ 30,507 ಮತಗಳನ್ನು ಪಡೆದಿದ್ದಾರೆ.


 

ambedkar image

LEAVE A REPLY

Please enter your comment!
Please enter your name here