ಬೆಂಗಳೂರು ಮೇ 10: ಐಪಿಎಸ್ ಅಧಿಕಾರಿ ರವಿ ಡಿ ಚನ್ನಣ್ಣನವರ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿಯಾಗಿರುವ ರವಿ ಡಿ. ಚನ್ನಣ್ಣನವರ್ ತಮಗೆ ಕೊರೋನಾ ತಗುಲಿರುವ ಬಗ್ಗೆ ಟ್ವೀಟ್ ಮಾಡಿ ಖಚಿತಪಡಿಸಿದ್ದಾರೆ. ನಿನ್ನೆ ರವಿ ಅವರು ಕೊರೋನಾ ಪರೀಕ್ಷೆ ಮಾಡಿಸಿಕೊಂಡಿದ್ದರು. ಇಂದು ಅವರ ವರದಿ ಬಂದಿದ್ದು ಅವರೊಡನೆ ಕಾರ್ಯನಿರ್ವಹಿಸಿದ್ದ ಅಧಿಕಾರಿಗಳೂ ಸಹ ಐಸೋಲೇಷನ್ ಆಗಿದ್ದಾರೆ.
https://twitter.com/DCPraviIPS/status/1391694578172919817





















