ಸುಪ್ರೀಂ ಕೋರ್ಟ್ ಗೆ ಸುಳ್ಳು ಹೇಳಿದ ಕೇಂದ್ರ ಸರಕಾರ #ModiGovtLied ಹ್ಯಾಷ್‌ ಟ್ಯಾಗ್

0
130

“ಕೇಂದ್ರ ಸರ್ಕಾರ ಸುಪ್ರಿಂಕೋರ್ಟ್‌ಗೆ ಸುಳ್ಳು ಹೇಳಿದೆ” ಎಂದು #ModiGovtLied ಎಂಬ ಹ್ಯಾಷ್ ಟ್ಯಾಗ್‌ ಟ್ವಿಟರ್‌ನಲ್ಲಿ ಟ್ರೆಂಡ್ ಆಗಿದೆ.

ದೆಹಲಿ ಮತ್ತು ಉತ್ತರದ ಭಾರತದ ರಾಜ್ಯಗಳಲ್ಲಿ ಗಾಳಿಯ ಗುಣಮಟ್ಟ ಹದಗೆಡಲು ಕೃಷಿ ತ್ಯಾಜ್ಯ ಸುಡುವಿಕೆ ಪ್ರಮುಖ ಕಾರಣವಲ್ಲ ಎಂದಿರುವ ಕೇಂದ್ರ ಸರ್ಕಾರ, ಒಟ್ಟು ವಾಯು ಮಾಲಿನ್ಯದಲ್ಲಿ ಶೇಕಡಾ 10ರಷ್ಟು ಮಾಲಿನ್ಯ ಮಾತ್ರ ಕೃಷಿ ತ್ಯಾಜ್ಯ ಸುಡುವುದರಿಂದ ಆಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. ಇದು ಅಪ್ಪಟ ಸುಳ್ಳಿನ ಸಂಗತಿ ಎಂದು ಜನರು ವಾದಿಸಿದ್ದಾರೆ.

ವಾಯು ಮಾಲಿನ್ಯಕ್ಕೆ ಸಾರಿಗೆ, ಕೈಗಾರಿಕೆಗಳು, ವಾಹನ ದಟ್ಟಣೆಯನ್ನು ಹೊರತುಪಡಿಸಿ ಕೆಲವು ಪ್ರದೇಶಗಳಲ್ಲಿ ಹುಲ್ಲು ಸುಡುತ್ತಿರುವುದು ಕಾರಣ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ.

ದೆಹಲಿ ಹಾಗೂ ಎನ್‌ಸಿಆರ್‌ನಲ್ಲಿ (ರಾಷ್ಟ್ರೀಯ ರಾಜಧಾನಿ ಪ್ರದೇಶದಲ್ಲಿ) ವಾಯುಮಾಲಿನ್ಯವನ್ನು ತಡೆಯಲು ನಿರ್ಮಾಣ ಕಾಮಗಾರಿಗಳನ್ನು ನಿಲ್ಲಿಸುವುದು, ಅನಿವಾರ್ಯವಲ್ಲದ ಸಾರಿಗೆ, ವಿದ್ಯುತ್ ಸ್ಥಾವರಗಳಿಗೆ ಕಡಿವಾಣ ಹಾಕುವುದು ಮತ್ತು ವರ್ಕ್‌ ಫ್ರಂ ಹೋಮ್‌ ಸೇರಿದಂತೆ ಹಲವು ವಿಷಯಗಳ ಕುರಿತು ತುರ್ತು ಸಭೆಯನ್ನು ಕರೆಯುವಂತೆ ನ್ಯಾಯಾಲಯವು ಕೇಂದ್ರಕ್ಕೆ ಸೂಚಿಸಿದೆ. ಈ ಕುರಿತು ಮಂಗಳವಾರ (ಇಂದು) ನಿರ್ಧಾರವಾಗಲಿದೆ.

ವಾಯು ಮಾಲಿನ್ಯಕ್ಕೆ ಸಂಬಂಧಿಸಿದಂತೆ ಮೋದಿ ಸರ್ಕಾರ ಸುಪ್ರೀಂಕೋರ್ಟ್‌ಗೆ ಸುಳ್ಳು ಹೇಳಿದೆ ಎಂದು ಜನರು ಆರೋಪಿದ್ದು, ಟ್ವಿಟ್ಟರ್‌ನಲ್ಲಿ #ModiGovtLied ಟ್ರೆಂಡ್ ಆಗಿದೆ. ಹುಲ್ಲು ಸುಡುವುದರಿಂದಾಗಿ ಆಗುತ್ತಿರುವ ಮಾಲಿನ್ಯಕ್ಕೆ ಸಂಬಂಧಿಸಿದಂತೆ ಆಗಿರುವ ವರದಿಯ ತುಣುಕುಗಳನ್ನು ಸಾಮಾಜಿಕ ಮಾಧ್ಯಮ ಬಳಕೆದಾರರು ಹಂಚಿಕೊಂಡಿದ್ದಾರೆ. ಕೇಂದ್ರ ಸರ್ಕಾರ ಈ ಹಿಂದೆ ಪ್ರತಿಪಾದಿಸಿರುವ ಸಂಗತಿಗಳನ್ನು ಹಂಚಿಕೊಂಡಿದ್ದಾರೆ.

https://twitter.com/search?q=%23ModiGovtLied&src=typeahead_click&f=top

ambedkar image

LEAVE A REPLY

Please enter your comment!
Please enter your name here