ಡಾ.ಮಹಾಂತ ಶಿವಯೋಗಿ:ವ್ಯಸನ ಮುಕ್ತ ದಿನಾಚರಣೆ

ಡಾ.ಮಹಾಂತ ಶಿವಯೋಗಿಗಳ ಜನ್ಮದಿನಾಚರಣೆ ಪ್ರಯುಕ್ತ ವ್ಯಸನ ಮುಕ್ತ ದಿನಾಚರಣೆಯನ್ನು ಆಗಸ್ಟ್ 1ರಂದು ನಗರದ ಶ್ರೀ ಕಂದಗಲ್ ಹನಮಂತರಾಯ ರಂಗಮಂದಿರದಲ್ಲಿ ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದೆ.

0
88
vijayapur image

ವಿಜಯಪುರ: ಸಾರ್ವಜನಿಕ ಸಂಪರ್ಕ ಇಲಾಖೆ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆ, ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ, ಸಮಾಜ ಕಲ್ಯಾಣ ಇಲಾಖೆಯೊಂದಿಗೆ ಡಾ.ಮಹಾಂತ ಶಿವಯೋಗಿ ಗಳ ಜನ್ಮದಿನಾಚರಣೆ ಪ್ರಯುಕ್ತ ವ್ಯಸನ ಮುಕ್ತ ದಿನಾಚರಣೆಯನ್ನು ಆಗಸ್ಟ್ 1ರಂದು ನಗರದ ಶ್ರೀ ಕಂದಗಲ್ ಹನಮಂತರಾಯ ರಂಗಮಂದಿರದಲ್ಲಿ ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದೆ.

ಇದನ್ನೂ ಓದಿ: ಡೆಂಗ್ಯೂ): ಜಿಲ್ಲೆಯ ಜನತೆಯ ಸ್ಥಿತಿಯನ್ನು ಕಾಪಾಡಿ.

ಗುರುವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಟಿ. ಭೂಬಾಲನ್ ಅವರ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಅಂದು ಬೆಳಗ್ಗೆ 9 ಗಂಟೆಗೆ ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ಜನ ಜಾಗೃತಿ ಜಾಥಾಕ್ಕೆ ಚಾಲನೆ ದೊರೆಯಲಿದೆ. ಜಾಥಾವು ನಗರದ ಗಾಂಧಿ ವೃತ್ತ ಮಾರ್ಗವಾಗಿ, ಬಸವೇಶ್ವರ ವೃತ್ತ, ಡಾ.ಬಿ.ಆರ್. ಅಂಬೇಡ್ಕರ ವೃತ್ತ, ಕನಕದಾಸ ವೃತ್ತದ ಮೂಲಕ ಕಂದಗಲ್ ಹನುಮಂತರಾಯ ರಂಗ ಮಂದಿರಕ್ಕೆ ತಲುಪಲಿದೆ. ರಂಗ ಮಂದಿರದಲ್ಲಿ ಬೆಳಿಗ್ಗೆ 10.30ಕ್ಕೆ ವೇದಿಕೆ ಕಾರ್ಯಕ್ರಮ. ಕಾರ್ಯಕ್ರಮದಲ್ಲಿ ಮಾದಕ ವಸ್ತು ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಉಪನ್ಯಾಸ ಕಾರ್ಯಕ್ರಮ. ಶಾಲಾ, ಕಾಲೇಜು ವಿದ್ಯಾರ್ಥಿಗಳು, ಯುವಜನರಿಗೆ ಹಾಗೂ ಸಾರ್ವಜನಿಕರಿಗೆ ಈ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ತಮಗೆ ವಹಿಸಿದ ಜವಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸಿ ಅರ್ಥಪೂರ್ಣ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಸೂಚಿಸಿದರು.

ಸರ್ಕಾರದ ಆದೇಶದಂತೆ ಎಲ್ಲಾ ತಾಲೂಕಾ ಕೇಂದ್ರಗಳಲ್ಲಿ ಆ.1 ರಂದು ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆಯನ್ನು ವ್ಯಸನವನ್ನಾಗಿ ಆಚರಿಸಿ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪರಿಣಾಮಗಳ ಕುರಿತು ಜನರಲ್ಲಿ ಜಾಗೃತಿ ಮೂಡಿಸಲು ಜಾಗೃತಿ ಕಾರ್ಯಕ್ರಮ ಹಾಗೂ ಸೂಚನೆಗಳನ್ನು ನೀಡಲಾಗಿದೆ.

ಇದನ್ನೂ ಓದಿ: ವಿಜಯಪುರ: ಫಸಲ ಭೀಮಾ ಯೋಜನೆ ಅವ್ಯವಹಾರ

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ, ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ, ಜಿಲ್ಲಾ ಶಸ್ತ್ರ ಚಿಕಿತ್ಸಕರಾದ ಡಾ.ಶಿವಾನಂದ ಮಾಸ್ತಿಹೊಳಿ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪನಿರ್ದೇಶಕರಾದ ವಿನಯಕುಮಾರ ಪಾಟೀಲ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರಾದ ಪುಂಡಲೀಕ ಮಾನವರ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಉಪನಿರ್ದೇಶಕರಾದ ಆಶಾಪೂರದ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಡಾ. ಭೋವಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕರಾದ ಅಮರೇಶ ದೊಡಮನಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು.


LEAVE A REPLY

Please enter your comment!
Please enter your name here