ವಿಜಯಪುರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕಂತಿ ಇಲಾಖೆಯಿಂದ ಸೆಪ್ಟೆಂಬರ್ 17ರಂದು ವಿಶ್ವಕರ್ಮ ಜಯಂತಿ Vishwakarma Jayanti ಕಾರ್ಯಕ್ರಮವನ್ನು ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ.
ಬೆಳಿಗ್ಗೆ 9:30 ಗಂಟೆಗೆ ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರವರೆಗೆ ವಿಶ್ವಕರ್ಮರ ಭಾವಚಿತ್ರದ ಮೆರವಣಿಗೆ ನಡೆಯಲಿದೆ. ಬೆಳಿಗ್ಗೆ 10:30ಕ್ಕೆ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ನಡೆಯುವ ಜಯಂತಿ ಕಾರ್ಯಕ್ರಮವನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಂ. ಬಿ. ಪಾಟೀಲ ಅವರು ಉದ್ಘಾಟಿಸುವರು. ವಿಜಯಪುರ ನಗರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಅವರು ಅಧ್ಯಕ್ಷತೆ ವಹಿಸಲಿದ್ದಾರೆ.
ಇದನ್ನೂ ಓದಿ: A S Patil College : ಅನುವಾದ ಸಂಪದʼ – ವಿಚಾರ ಸಂಕಿರಣ ಮತ್ತು ಕಾರ್ಯಾಗಾರ
Vishwakarma Jayanti ಮುಖ್ಯ ಅತಿಥಿಗಳಾಗಿ ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಎಸ್ ಪಾಟೀಲ, ಕರ್ನಾಟಕ ಸರ್ಕಾರದ ನವದೆಹಲಿಯ ವಿಶೇಷ ಪ್ರತಿನಿಧಿ ಹಾಗೂ ವಿಧಾನ ಪರಿಷತ್ತಿನ ಶಾಸಕರಾದ ಪ್ರಕಾಶ ಹುಕ್ಕೇರಿ, ಕರ್ನಾಟಕ ಸೋಪ್ಸ್ ಮತ್ತು ಡಿಟಜೆರ್ಂಟ್ ನಿಯಮಿತದ ಅಧ್ಯಕ್ಷರು ಹಾಗೂ ಶಾಸಕರಾದ ಅಪ್ಪಾಜಿ ಸಿ.ಎಸ್.ನಾಡಗೌಡ, ಸಂಸದರಾದ ರಮೇಶ ಜಿಗಜಿಣಗಿ, ಶ್ರೀಮತಿ ಸುಧಾ ಮೂರ್ತಿ, ಶಾಸಕರಾದ ಯಶವಂತರಾಯಗೌಡ ಪಾಟೀಲ, ಹಣಮಂತ ನಿರಾಣಿ, ಪ್ರಕಾಶ ರಾಠೋಡ, ಸುನೀಲಗೌಡ ಪಾಟೀಲ, ಪಿ.ಎಚ್.ಪೂಜಾರಿ, ವಿಠ್ಠಲ ಕಟಕಧೋಂಡ, ರಾಜುಗೌಡ ಪಾಟೀಲ,ಅಶೋಕ ಮನಗೂಳಿ,
ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮ ದ ಅಧ್ಯಕ್ಷರಾದ ಕಾಂತ ನಾಯ್ಕ, ಕರ್ನಾಟಕ ಬಾಲವಿಕಾಸ ಅಕಾಡೆಮಿ ಅಧ್ಯಕ್ಷರಾದ ಸಂಗಮೇಶ ಬಬಲೇಶ್ವರ, ಮಹಾನಗರ ಪಾಲಿಕೆಯ ಮೇಯರ್ ಮಹೇಜಬಿನ ಹೊರ್ತಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಕನ್ನಾನ್ ಮುಶ್ರೀಫ್ ಭಾಗವಹಿಸಲಿದ್ದಾರೆ. ಹಾರೊಗೇರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಉಪನ್ಯಾಸಕರಾದ ರಾವಸಾಬ ಬಡಿಗೇರ ಉಪನ್ಯಾಸ ನೀಡಲಿದ್ದಾರೆ, ಶ್ರೀಮತಿ ಭಾರತಿ ಕುಂದನಗಾರ ತಂಡದಿಂದ ಸಂಗೀತ ಕಾರ್ಯಕ್ರಮ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.
ಇದನ್ನೂ ಓದಿ: International Democracy Day : ಮಾನವ ಸರಪಳಿ ಕಾರ್ಯಕ್ರಮ ಯಶಸ್ಸಿಗೆ ಶ್ರಮಿಸಿ – ಜಿಲ್ಲಾಧಿಕಾರಿ ಟಿ.ಭೂಬಾಲನ್
ಲೋಕವೆಂಬುದೊಂದು ಸಂತೆ, ಬೇಕು ಬೇಡಗಳ ಕಂತೆ, ಸಾಕು ನಮಗಾ ಚಿಂತೆ. –ಡಿ.ವಿ.ಗುಂಡಪ್ಪ