ವಿಜಯಪುರ: ಜಿಲ್ಲೆಯ ತಿಕೋಟಾ ತಾಲೂಕಿನಲ್ಲಿ 76 ಎಂಎಂ, ಇಂಡಿ ತಾಲೂಕಿನಲ್ಲಿ ಕನಿಷ್ಠ 7ಎಂಎಂ, ವಿಜಯಪುರ ನಗರ ಸೇರಿದಂತೆ ವಿಜಯಪುರ Rainfall in Vijayapura ತಾಲೂಕಿನಲ್ಲಿ 40ಎಂಎಂ ಮಳೆಯಾಗಿದ್ದು, ವಿಜಯಪುರ ನಗರದಲ್ಲಿ ವಿವಿಧೆಡೆ ನೀರು ನಿಂತಿರುವ ಪ್ರದೇಶಗಳಲ್ಲಿ ಮಹಾನಗರಪಾಲಿಕೆ ವತಿಯಿಂದ ಯಂತ್ರಗಳಿಂದ ನೀರು ಹೊರ ಹಾಕುವ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ತಿಳಿಸಿದ್ದಾರೆ.
ಇದನ್ನೂ ಓದಿ: ಹೊರಗುತ್ತಿಗೆ ನೌಕರರ ವೇತನದಲ್ಲಿ ಲೋಪವಾದಲ್ಲಿ ಶಿಸ್ತು ಕ್ರಮ : ತಿಮ್ಮಾಪೂರ
ಮನೆಹಾನಿ: ಜಿಲ್ಲೆಯಲ್ಲಿ 57 ಮನೆಗಳು ಭಾಗಶಃ ಹಾನಿಯಾಗಿವೆ. ಸಂಪೂರ್ಣ ಮನೆಹಾನಿ ಯಾವುದು ಇಲ್ಲ. ಯಾವುದೇ ಜನ-ಜಾನುವಾರ ಸಂಭವಿಸಿರುವುದಿಲ್ಲ. 2000 ಹೆಕ್ಟೆರಷ್ಟು ಅಂದಾಜು ಬೆಳೆ ಹಾನಿಯಾಗಿದೆ. ಸಮೀಕ್ಷೆ ಕೈಗೊಂಡಿದ್ದು, ಸಮೀಕ್ಷೆ ಮುಗಿದ ನಂತರ ನಿಖರ ಮಾಹಿತಿ ದೊರೆಯಲಿದೆ ಎಂದು ಹೇಳಿದರು.
ಸೆಪ್ಟೆಂಬರ್ 25ರಂದು ಜಿಲ್ಲಾ ಉಸ್ತುವಾರಿ ಸಚಿವರು ಮಳೆಯಿಂದ Rainfall in Vijayapura ಹಾನಿಯಾದ ಪ್ರದೇಶಗಳಿಗೆ ಭೇಟಿ ನೀಡಿ, ಸಾರ್ವಜನಿಕರ ಮನವಿ ಹಾಗೂ ಜಿಲ್ಲಾ ಪಂಚಾಯತ್ ಕಾರ್ಯಾಲಯದಲ್ಲಿ ಪ್ರಗತಿ ಪರಿಶೀಲನೆ ಸಭೆ ನಡೆಸಲಿದ್ದಾರೆ, ಸಚಿವರ ನಿರ್ದೇಶನದಂತೆ ಎಲ್ಲಾ ಮುಂಜಾಗ್ರತ ಕ್ರಮಗಳನ್ನು ಜಿಲ್ಲಾಡಳಿತ ಕೈಗೊಂಡಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ: ಸಿಎಂ ಸಿದ್ದರಾಮಯ್ಯ ರಾಜಿನಾಮೆಗೆ ಆಗ್ರಹಿಸಿ ಬಿಜೆಪಿಯಿಂದ ಪ್ರತಿಭಟನೆ : ರಾಜಿನಾಮೇ ನೀಡುವರೆಗೂ ಹೋರಾಟ


















