Bagalkote News | ಕನ್ನಡ ಉಳಿಸಿ, ಬೆಳೆಸುವ ಕೆಲಸವಾಗಲಿ : ಡಿಸಿ ಜಾನಕಿ

ಕನ್ನಡ ನಮಗೆಲ್ಲ ಕೊಟ್ಟಿದೆ. ನಾವು ಏನು ಕೊಟ್ಟಿದ್ದೇವೆ ಎಂದು ಕನ್ನಡಿಗರು ಅರ್ಥ ಮಾಡಿಕೊಂಡು ಕನ್ನಡ ಭಾಷೆ, ಸಾಹಿತ್ಯ, ಸಂಸ್ಕøತಿ, ಪರಂಪರೆ ಬೆಳವಣಿಗೆಗೆ ಎಲ್ಲರೂ ಕೈಜೋಡಿಸುವ ಕಾರ್ಯವಾಗಬೇಕು ಎಂದರು.

0
100
Kannada Jyoti Rath Yatra image

ಬಾಗಲಕೋಟೆ: Kannada Jyoti Rath Yatra ಹುಟ್ಟಿನಿಂದಲೂ ನಾವು ಕನ್ನಡಿಗರಾಗಿದ್ದು, ನಮ್ಮ ಉಸಿರು ಇರುವವರೆಗೂ ಕನ್ನಡ ಭಾಷೆಯನ್ನು ಉಳಿಸಿ, ಬೆಳೆಸುವ ಕೆಲಸವಾಗಬೇಕು ಎಂದು ಜಿಲ್ಲಾಧಿಕಾರಿ ಜಾನಕಿ ಕೆ.ಎಂ ಹೇಳಿದರು.

ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಜಿಲ್ಲೆಗೆ ಆಗಮಿಸಿರುವ ಕನ್ನಡ ಜ್ಯೊತಿ ರಥಯಾತ್ರೆ ಸೋಮವಾರ ಜಿಲ್ಲಾಡಳಿತಕ್ಕೆ ಆಗಮಿಸಿದ ಹಿನ್ನಲೆಯಲ್ಲಿ ಅದ್ದೂರಿಯಾಗಿ ಸ್ವಾಗತಿಸುವ ಮೂಲಕ ಕನ್ನಡ ಜ್ಯೋತಿಯನ್ನು ಬೆಳೆಗಿಸಿ ಮಾತನಾಡಿದ ಅವರು ಕನ್ನಡ ನಮಗೆಲ್ಲ ಕೊಟ್ಟಿದೆ. ನಾವು ಏನು ಕೊಟ್ಟಿದ್ದೇವೆ ಎಂದು ಕನ್ನಡಿಗರು ಅರ್ಥ ಮಾಡಿಕೊಂಡು ಕನ್ನಡ ಭಾಷೆ, ಸಾಹಿತ್ಯ, ಸಂಸ್ಕøತಿ, ಪರಂಪರೆ ಬೆಳವಣಿಗೆಗೆ ಎಲ್ಲರೂ ಕೈಜೋಡಿಸುವ ಕಾರ್ಯವಾಗಬೇಕು ಎಂದರು.

ಇದನ್ನೂ ಓದಿ: Vijayapura News | ಗಾಂಧೀಜಿಯವರ ತತ್ವಗಳು ಸಾರ್ವಕಾಲಿಕ : ಬಾಪುಗೌಡ ಪಾಟೀಲ ಅಭಿಮತ

Kannada Jyoti Rath Yatra ಕನ್ನಡ ಭಾಷೆಯ ಸೊಗಡು, ಸೊಬಗು ನಮ್ಮ ಜೊತೆಯಲ್ಲಿ ಇರಬೇಕು. ಕನ್ನಡ ಸಾಹಿತ್ಯ ಸಮ್ಮೇಳದಲ್ಲಿ ಎಲ್ಲರೂ ಪಾಲ್ಗೊಂಡು ಕನ್ನಡದ ಕಂಪನ್ನು ಬೀರುವ ಕೆಲಸವಾಗಬೇಕು. ಈ ಕನ್ನಡ ಜ್ಯೋತಿ ರಥಯಾತ್ರೆ ಸಂಚಾರದಲ್ಲಿ ಸಂಭ್ರಮದಿಂದ ಸ್ವಾಗತಿಸುವ ಕಾರ್ಯ ನಡೆಯಲಿ ಎಂದರು. ಜಿ.ಪಂ ಸಿಇಓ ಶಶಿಧರ ಕುರೇರ ಮಾತನಾಡಿ ಪ್ರತಿಯೊಬ್ಬರೂ ನಮ್ಮ ಸಂಸ್ಕøತಿ, ಕನ್ನಡ ನಾಡು-ನುಡಿಯನ್ನು ಸಂರಕ್ಷಿಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕು. ಕನ್ನಡ ಭಾಷೆಯನ್ನು ಉನ್ನತ ಸ್ಥಾನದಲ್ಲಿ ತಂದು ಅದರ ಉಳಿವಿಗಾಗಿ, ಏಳಿಗೆಗಾಗಿ ಶ್ರಮಿಸುವ ಕೆಲಸವಾಗಬೇಕು ಎಂದು ತಿಳಿಸಿದರು.

ಕನ್ನಡ ಜ್ಯೋತಿ ರಥಯಾತ್ರೆ ಜಿಲ್ಲಾಡಳಿತ ಭವನಕ್ಕೆ ಆಗಮಿಸುತ್ತಿದ್ದಂತೆ ವಿವಿಧ ಜಾನಪದ ಕಲಾತಂಡಗಳ ಮೂಲಕ ಅದ್ದೂರಿಯಾಗಿ ಸ್ವಾಗತ ಕೋರಲಾಯಿತು. ಜಿಲ್ಲಾಧಿಕಾರಿ ಜಾನಕಿ ಕೆ.ಎಂ ಹಾಗೂ ನಗರಸಭೆ ಅಧ್ಯಕ್ಷೆ ಸವಿತಾ ಲೆಂಕಣ್ಣವರ ರಥದಲ್ಲಿರುವ ಕನ್ನಡಾಂಬೆಗೆ ಹೂ ಮಾಲಾರ್ಪಣೆ ಮಾಡಿ ಕನ್ನಡ ಜ್ಯೋತಿಯನ್ನು ಬೆಳೆಗಿಸಿದರು. ಕಾರ್ಯಕ್ರಮದಲ್ಲಿ ನಗರಸಭೆ ಉಪಾಧ್ಯಕ್ಷೆ ಶೋಭಾ ರಾವ್, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಶಿವಾನಂದ ಶೇಲ್ಲಿಕೇರಿ, ಜಿ.ಪಂ ಉಪ ಕಾರ್ಯದರ್ಶಿ ಎನ್.ವಾಯ್.ಬಸರಿಗಿಡದ, ಮುಖ್ಯ ಲೆಕ್ಕಾಧಿಕಾರಿ ಸಿದ್ದರಾಮೇಶ್ವರ ಉಕ್ಕಲಿ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಕರ್ಣಕುಮಾರ ಸೇರದಂತೆ ಇತರರು ಉಪಸ್ಥಿತರಿದ್ದರು.


LEAVE A REPLY

Please enter your comment!
Please enter your name here