ವಿಜಯಪುರ: ಡಾ.ಬಾಬಾಸಾಹೇಬ ಅಂಬೇಡ್ಕರ್ ಅವರು ನಮಗೆ ಒದಗಿಸಿದ ಸಂವಿಧಾನದಿಂದಲೇ ಇಂದು ನಾವು ಅತ್ಯಂತ ನೆಮ್ಮದಿಯಿಂದ ಬದುಕಲು ಸಾಧ್ಯವಾಗಿದೆ. ಪ್ರತಿಯೊಬ್ಬರಿಗೂ ತಮ್ಮ ಹಕ್ಕು ಪ್ರತಿಪಾದನೆಗೆ ಸಂವಿಧಾನ ಅವಕಾಶ ಒದಗಿಸಿದ್ದು, ವಕ್ಫ್ ಆಸ್ತಿ ಯಾವುದೇ ವೈಯಕ್ತಿಕ ಸ್ವತ್ತಲ್ಲ, ಇದು ದೇವರ ಆಸ್ತಿ ಇದರ ಸಂರಕ್ಷಣೆ ನಮ್ಮ ಹಕ್ಕು ಹಾಗೂ ಜವಾಬ್ದಾರಿಯಾಗಿದೆ ಎಂದು ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಚಿವರಾದ ಬಿ.ಜೆಡ್.ಜಮೀರ್‍ಅಹ್ಮದ ಖಾನ್ Zameera Ahmed Khan ಹೇಳಿದರು.
ಸೋಮವಾರ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ, ವಕ್ಫ್ ಇಲಾಖೆ ಹಾಗೂ ಕರ್ನಾಟಕ ರಾಜ್ಯ ವಕ್ಫ್ ಮಂಡಳಿ ಸಹಯೋಗದಲ್ಲಿ ಜಿಲ್ಲೆಯ ಮುತ್ತವಲ್ಲಿಗಳ ಸಮ್ಮೇಳನ ಹಾಗೂ ವಕ್ಫ್ ಅದಾಲತ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿ, ವಕ್ಫ ಆಸ್ತಿ ಸಂರಕ್ಷಣೆ ಹಾಗೂ ವಿವಿಧ ಸಮಸ್ಯೆಗಳ ಪರಿಹಾರಕ್ಕಾಗಿ ಈವರೆಗೆ ರಾಜ್ಯದಾದ್ಯಂತೆ 10 ಜಿಲ್ಲೆಗಳಲ್ಲಿ ವಕ್ಫ್ ಅದಾಲತ್ ಹಮ್ಮಿಕೊಳ್ಳಲಾಗಿದ್ದು, ಇಂದು ವಿಜಯಪುರದಲ್ಲಿ 11ನೇ ಅದಾಲತ್ ಹಮ್ಮಿಕೊಳ್ಳಲಾಗಿದೆ. ಕಳೆದ 10-15 ವರ್ಷಗಳಿಂದ ಬಾಕಿ ಉಳಿದ ವಖ್ಫ್ ಖಾತೆ ಬದಲಾವಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ನಾನು ಸಚಿವನಾದ ಮೇಲೆ 727 ಖಾತೆ ಬದಲಾವಣೆಗೆ ಕ್ರಮ ವಹಿಸಲಾಗಿದೆ ಎಂದು ಅವರು ಹೇಳಿದರು.
ಇದನ್ನೂ ಓದಿ: Vijayapura News | ಜಿಲ್ಲೆಯಲ್ಲಿ ಕನ್ನಡ ಜ್ಯೋತಿ ರಥಯಾತ್ರೆ ಸಂಚಾರ ಇಲ್ಲಿದೆ ಮಾಹಿತಿ
Zameera Ahmed Khan ವಿಜಯಪುರದಲ್ಲಿ ಇಂದು ಹಮ್ಮಿಕೊಂಡ ಅದಾಲತ್‍ನಲ್ಲಿ ವಕ್ಫ್ ಆಸ್ತಿಗಳ ಅತಿಕ್ರಮಣದ 17 ಅರ್ಜಿಗಳು, ಖಬರಸ್ಥಾನ (ಸ್ಮಶಾನ)ಕ್ಕೆ ಸಂಬಂಧಿಸಿದ್ದು, ಖಾತೆ ಬದಲಾವಣೆಯ 81 ಅರ್ಜಿಗಳು, ಸರ್ವೇ ಕಾರ್ಯಕ್ಕಾಗಿ 25 ಅರ್ಜಿಗಳು ಸೇರಿದಂತೆ ಒಟ್ಟು 330 ಅರ್ಜಿಗಳು ಸಲ್ಲಿಕೆಯಾಗಿವೆ. ಇಲ್ಲಿ ಸಲ್ಲಿಕೆಯಾದ ಅರ್ಜಿಗಳು ಯಾವುದೇ ಕಾರಣಕ್ಕೂ ವ್ಯರ್ಥವಾಗುವುದಿಲ್ಲ, ಪ್ರತಿಯೊಂದು ಅರ್ಜಿಗಳಿಗೂ ಸ್ಪಂದಿಸಲಾಗುವುದು. ಸ್ವೀಕರಿಸಲಾದ ಅರ್ಜಿಗಳಿಗೆ ಸಂಬಂಧಿಸಿದಂತೆ ನಾಳೆಯೇ ಸಭೆ ನಡೆಸಿ, ಅಧಿಕಾರಿಗಳಿಗೆ ಒಂದು ತಿಂಗಳ ಕಾಲಾವಕಾಶ ಒದಗಿಸಿ ನಿಗದಿತ ಅವಧಿಯಲ್ಲಿಯೇ ಈ ಅರ್ಜಿಗಳ ಪರಿಹಾರಕ್ಕೆ ಕ್ರಮ ವಹಿಸಲಾಗುವುದು ಎಂದು ಅವರು ಹೇಳಿದರು.
ರಾಜ್ಯದಲ್ಲಿಯೇ ವಿಜಯಪುರದಲ್ಲಿ ಅತಿ ಹೆಚ್ಚು ವಕ್ಫ್ ಆಸ್ತಿ ಹೊಂದಿದೆ. ವಕ್ಫ್ ಆಸ್ತಿಯ ಸದ್ಭಳಕೆ ಮಾಡಿಕೊಂಡು ಸಮಾಜದ ಕಟ್ಟಕಡೆಯ ವ್ಯಕ್ತಿಗೆ ಸೂರು ಕಲ್ಪಿಸುವ ಸದುದ್ದೇಶ ಹೊಂದಲಾಗಿದೆ. ರಾಜ್ಯದಲ್ಲಿ ಒಟ್ಟು 1.12 ಲಕ್ಷ ಎಕರೆ ವಕ್ಫ್ ಆಸ್ತಿಯಲ್ಲಿ 85 ಸಾವಿರ ಎಕರೆ ಅತಿಕ್ರಮಣವಾಗಿ ಕೇವಲ 23000 ಎಕರೆ ಮಾತ್ರ ಉಳಿದಿದೆ. ವಕ್ಫ್ ಆಸ್ತಿ ಕಬಳಿಕೆ- ಹಗರಣಕ್ಕೆ ಮುಂದಾಗಬಾರದು. ವಕ್ಫ್ ಆಸ್ತಿ ದೇವರ ಆಸ್ತಿ, ಇದರ ಸಂರಕ್ಷಣೆ ನಮ್ಮ ಜವಾಬ್ದಾರಿಯಾಗಿದ್ದು, ಪ್ರತಿಯೊಬ್ಬರು ವಕ್ಫ್ ಆಸ್ತಿ ಸಂರಕ್ಷಣೆಗೆ ಮುಂದಾಗಬೇಕು ಎಂದು ಅವರು ಕರೆ ನೀಡಿದರು.
ಇದನ್ನೂ ಓದಿ: Vijayapura News | ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ದಿವ್ಯಾಂಗರಿಂದ ಪ್ರತಿಭಟನೆ
ಹಣಕಾಸು ಇಲಾಖೆಗೆ ಮರಳಿ ಹೋದ ವಕ್ಫ್ ಅನುದಾನವನ್ನು ನಾನು ಸಚಿವನಾದ ಮೇಲೆ ಮತ್ತೇ ಮರಳಿ ಪಡೆಯಲಾಗಿದೆ. ಯಾವುದೇ ಸಮಾಜದ ಅಭಿವೃದ್ದಿಯಾಗಬೇಕಾದರೆ ಶಿಕ್ಷಣ ಅತ್ಯಂತ ಮುಖ್ಯವಾಗಿದೆ. ಈ ನಿಟ್ಟಿನಲ್ಲಿ ಈ ಅನುದಾನವನ್ನು ಬಳಸಿಕೊಂಡು ಅಲ್ಪಸಂಖ್ಯಾತ ಮಕ್ಕಳ ಶಿಕ್ಷಣಕ್ಕೆ ಒತ್ತು ನೀಡಿ, ರಾಜ್ಯದ 15 ಜಿಲ್ಲೆಗಳಲ್ಲಿ ವಕ್ಫ್ ಮಂಡಳಿಯಿಂದ ಪಿಯು ಕಾಲೇಜ್ ನಿರ್ಮಾಣ ಮಾಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ರಾಜ್ಯದಲ್ಲ ಪ್ರತಿಯೊಂದು ಜಿಲ್ಲೆಗಳಲ್ಲಿ ಕಾಲೇಜ್ ನಿರ್ಮಾಣದ ಉದ್ದೇಶ ಹೊಂದಲಾಗಿದೆ ಎಂದು ಹೇಳಿದರು.
ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮದಿಂದ ಅತಿ ಹೆಚ್ಚು ಶಿಕ್ಷಣಕ್ಕಾಗಿ ಒತ್ತು ನೀಡಲಾಗುತ್ತಿದೆ. ಕೇಂದ್ರ ಸರ್ಕಾರದಿಂದ ಸ್ಥಗಿತಗೊಂಡಿದ್ದ ವಿದ್ಯಾರ್ಥಿವೇತನ ಪುನ ಒದಗಿಸಲಾಗುತ್ತಿದೆ. ಇಡೀ ದೇಶದಲ್ಲಿಯೇ ಮಾದರಿಯಾದ ಹಜ್ ಭವನ ಕರ್ನಾಟಕದಲ್ಲಿ ನಿರ್ಮಿಸಲಾಗಿದೆ. ಸಮಾಜದ ಮಕ್ಕಳು ಉನ್ನತ ಶಿಕ್ಷಣ ಪಡೆದು, ಉನ್ನತ ಹುದ್ದೆ ಪಡೆಯಲು ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಕರ್ನಾಟಕ ಅಲ್ಪಸಂಖ್ಯಾತ ಅಭಿವೃದ್ದಿ ನಿಗಮದಿಂದ 1300 ವಿದ್ಯಾರ್ಥಿಗಳಿಗೆ ನೆರವು ಒದಗಿಸಲಾಗಿದೆ. ವಿದೇಶದಲ್ಲಿ ವ್ಯಾಸಂಗಕ್ಕಾಗಿ ನೆರವು ಒದಗಿಸಲಾಗುತ್ತಿದೆ. ನಿರುದ್ಯೋಗಿ ಯುವಕರಿಗೆ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ವಾಹನ ಖರೀದಿಗೆ ಸಬ್ಸಿಡಿ ಒದಗಿಸಲಾಗುತ್ತಿದೆ. ಮದರಸಾಗಳಲ್ಲಿ ಶಿಕ್ಷಕರನ್ನು ನೇಮಕ ಮಾಡಿ ಗುಣಮಟ್ಟದ ಶಿಕ್ಷಣ ಒದಗಿಸಲಾಗುತ್ತಿದೆ. ಹಜ್ ಭವನದಲ್ಲಿ 400 ವಿದ್ಯಾರ್ಥಿಗಳಿಗೆ ಐಎಎಸ್, ಐಪಿಎಸ್, ಕೆಎಎಸ್ ತರಬೇತಿ ನೀಡಲಾಗುತ್ತಿದೆ ಎಂದು ಅವರು ಹೇಳಿದರು.
ಇದನ್ನೂ ಓದಿ: Bagalkote News | ಬೆಳ್ಳಿ ಬೆಳಕು – ಅಕ್ಕಸಾಲಿಕೆ ಗ್ರಂಥ ಲೋಕಾರ್ಪಣೆ
ಕರ್ನಾಟಕ ಸಾಬೂನು-ಮಾರ್ಜಕ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಸಿ.ಎಸ್. ನಾಡಗೌಡ ಅವರು ಮಾತನಾಡಿ, ವಕ್ಫ್ ಅದಾಲತ್‍ಗಳನ್ನು ಹಮ್ಮಿಕೊಳ್ಳುವ ಮೂಲಕ ಗ್ರಾಮ, ತಾಲೂಕಾ ಮಟ್ಟದ ಹಾಗೂ ಜಿಲ್ಲಾ ಮಟ್ಟದಲ್ಲಿರುವ ವಿವಿಧ ವಕ್ಫ್ ಸಮಸ್ಯೆ, ಸ್ಮಶಾನ ಜಾಗದ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವ ಉದ್ದೇಶದಿಂದ ಅದಾಲತ್ ಹಮ್ಮಿಕೊಂಡು ಪರಿಹರಿಸಲಾಗುತ್ತಿರುವ ಅತ್ಯಂತ ಶ್ಲಾಘನೀಯವಾಗಿದೆ.
ಸಮಾಜದಲ್ಲಿನ ಪ್ರತಿಯೊಂದು ಸಮಸ್ಯೆಗೆ ಪರಿಹಾರ ಕಲ್ಪಿಸಿ, ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸರ್ಕಾರದ ಸರ್ಕಾರದ ಸೌಲಭ್ಯಗಳನ್ನು ಕಲ್ಪಿಸುವ ಅವಶ್ಯಕತೆ ಇದೆ. ಈ ನಿಟ್ಟಿನಲ್ಲಿ ಅಂಜುಮನ್ ಸಂಸ್ಥೆ ಸೇರಿದಂತೆ ಸಮಾಜದ ಮುಖಂಡರು, ಜನಪ್ರತಿನಿಧಿಗಳು ಮುಂದಾಗಬೇಕು. ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ದೊರಕಿಸಬೇಕು. ವಕ್ಫ್ ಆಸ್ತಿ ದೇವರ ಆಸ್ತಿ, ದೇವರ ಆಸ್ತಿಯಲ್ಲಿ ವೈಮನಸ್ಸು ಬರಬಾರದು. ಎಲ್ಲರೂ ಸಮನ್ವಯತೆಯಿಂದ, ಸಹೋದರಂತೆ ನ್ಯೂನ್ಯತೆಗಳನ್ನು ಸರಿಪಡಿಸಿಕೊಂಡು, ತಿದ್ದಿಕೊಂಡು ಮುನ್ನಡೆಯಬೇಕು ಎಂದು ಅವರು ಕರೆ ನೀಡಿದರು.
ಇದನ್ನೂ ಓದಿ: Vijayapura News | ಸಚಿವ ಜಮೀರ ಅಹಮದ ಖಾನ್‍ಗೆ ಅಭಿಮಾನಿಗಳಿಂದ ಸನ್ಮಾನ
ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಅಬ್ದುಲ ಜಬ್ಬಾರ, ಸಿಂದಗಿ ಶಾಸಕರಾದ ಅಶೋಕ ಮನಗೂಳಿ, ನಾಗಠಾಣ ಶಾಸಕ ವಿಠ್ಠಲ ಕಟಕದೊಂಡ, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮದ ಅಧ್ಯಕ್ಷರಾದ ಅನ್ವರಬಾಶಾ ಅವರು ಮಾತನಾಡಿದರು. ಮೌಲಾನಾ ತನ್ವೀರ ಪೀರಾ ಹಾಸ್ಮೀ ಕಾರ್ಯಕ್ರಮದ ಸಾನಿಧ್ಯ ವಹಿಸಿದ್ದರು. ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಕನ್ನಾನ್ ಮುಶ್ರೀಫ್ ಸೇರಿದಂತೆ ಇತರರು ಉಪಸ್ಥಿತರಿದ್ದರು.