Vijayapura News | ವಿಶ್ವ ದೃಷ್ಟಿ ದಿನಾಚರಣೆ ಅಂಗವಾಗಿ ಜಾಥಾ ಕಾರ್ಯಕ್ರಮ

ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನದ ಆವರಣದಲ್ಲಿ ವಿಶ್ವ ದೃಷ್ಟಿ ದಿನಾಚರಣೆ ಅಂಗವಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಜಾಥಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

0
53
World Sight Day image

ವಿಜಯಪುರ: World Sight Day ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನದ ಆವರಣದಲ್ಲಿ ವಿಶ್ವ ದೃಷ್ಟಿ ದಿನಾಚರಣೆ ಅಂಗವಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಜಾಥಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸಂಪತ್ತ ಗುಣಾರಿ ಜಾಥಾಕೆ ಚಾಲನೆ ನೀಡಿದರು. ಜಾಥಾವು ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ನಗರದ ಮಾರುಕಟ್ಟೆ ರಸ್ತೆ ಮಾರ್ಗವಾಗಿ, ಗಾಂಧಿ ವೃತ್ತ, ಶಿವಾಜಿ ವೃತ್ತದ ಮೂಲಕ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳ ಕಚೇರಿಯವರೆಗೆ ನಡೆಯಿತು.

ಇದನ್ನೂ ಓದಿ: Vijayapura News | ಅಪಘಾತಕ್ಕೆ ಸಂಬಂಧಿಸಿದಂತೆ ಎಲ್ಲಾ ಆಸ್ಪತ್ರೆಗಳು e-DAR ತಂತ್ರಾಂಶದಲ್ಲಿ ವರದಿ ಮಾಡುವುದು ಕಡ್ಡಾಯ

World Sight Day ಈ ವೇಳೆ ತಾಲೂಕಾ ಆರೋಗ್ಯಾಧಿಕಾರಿ ಡಾ. ಪರಶುರಾಮ ಹಿಟ್ನಳ್ಳಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿಗಳಾದ ಜಿ.ಎಂ.ಕೊಲುರ, ಸುರೇಶ ಹೊಸಮನಿ ಸೇರಿದಂತೆ ಜಿಲ್ಲಾ ಮಾನಸಿಕ ಆರೋಗ್ಯ, ಜಿಲ್ಲಾ ಕುಷ್ಠರೋಗ ನಿರ್ಮೂಲನಾ ಅಧಿಕಾರಿ ಸಿಬ್ಬಂದಿ, ಆಶಾಕಾರ್ಯಕರ್ತೆಯರು ಸೇರಿದಂತೆ ತುಳಜಾಭವಾನಿ ನರ್ಸಿಂಗ್ ಕಾಲೇಜ, ಅಶ್ವಿನಿ ನರ್ಸಿಂಗ ಕಾಲೇಜ, ಬಾಂಗಿ ನರ್ಸಿಂಗ್ ಕಾಲೇಜು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.


LEAVE A REPLY

Please enter your comment!
Please enter your name here