Vijayapura News | ಅಕ್ಕಮಹಾದೇವಿ ಮಹಿಳಾ ವಿವಿಯಲ್ಲಿ ಸ್ನಾತಕೋತ್ತರ ಪ್ರವೇಶಾತಿ ಆರಂಭ | ಅರ್ಜಿ ಆಹ್ವಾನ

ವಿವಿಧ ಸ್ನಾತಕೋತ್ತರ, ಪಿಜಿ ಡಿಪ್ಲೋಮಾ, ವ್ಯಾಲ್ಯು ಆಡೆಡ್ ಡಿಪ್ಲೋಮಾ, ವ್ಯಾಲ್ಯು ಆಡೆಡ್ ಅಡ್ವಾನ್ಸ್ ಡಿಪ್ಲೋಮಾ ಮತ್ತು ಸರ್ಟಿಫೀಕೇಟ್ ಕೋರ್ಸ್ಗಳಿಗೆ ಪ್ರವೇಶ ಪ್ರಾರಂಭವಾಗಿವೆ.

0
39
PG Admission Counselling image

ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ವಿವಿಧ ಸ್ನಾತಕೋತ್ತರ, ಪಿಜಿ ಡಿಪ್ಲೋಮಾ, ವ್ಯಾಲ್ಯು ಆಡೆಡ್ ಡಿಪ್ಲೋಮಾ, ವ್ಯಾಲ್ಯು ಆಡೆಡ್ ಅಡ್ವಾನ್ಸ್ ಡಿಪ್ಲೋಮಾ ಮತ್ತು ಸರ್ಟಿಫೀಕೇಟ್ ಕೋರ್ಸ್ಗಳಿಗೆ ಪ್ರವೇಶ ಪಡೆಯಲು PG Admission Counselling ಇದೇ ಅಕ್ಟೋಬರ್ 28ರಂದು ಬೆಳಿಗ್ಗೆ 10.30ರಿಂದ ಕೌನ್ಸೆಲಿಂಗ್ ಆರಂಭವಾಗಲಿದೆ ಎಂದು ಕುಲಸಚಿವ ಶಂಕರಗೌಡ ಸೋಮನಾಳ ತಿಳಿಸಿದ್ದಾರೆ.

ಇದನ್ನೂ ಓದಿ: Vijayapura News | ಕನ್ನಡದ ಕುಲ ಗುರು ಡಾ: ಸಿದ್ದಲಿಂಗ ಸ್ವಾಮಿಜಿ | ಹಾಸಿಂಪೀರ ವಾಲಿಕಾರ ಅಭಿಪ್ರಾಯ

PG Admission Counselling ಮಹಿಳಾ ವಿವಿಯ ವಿವಿಧ ಕೋರ್ಸ್ಗಳಿಗೆ ಈಗಾಗಲೇ ಯುಯುಸಿಎಂಎಸ್ ಮೂಲಕ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿನಿಯರು ದಿನಾಂಕ 28ರಂದು ಅಗತ್ಯ ಮೂಲ ದಾಖಲೆಗಳೊಂದಿಗೆ ಕಡ್ಡಾಯವಾಗಿ ಹಾಜರಿದ್ದು ಪ್ರವೇಶ ಪಡೆದುಕೊಳ್ಳಬಹುದಾಗಿದೆ. ದಿನಾಂಕ 29 ರಂದು ಸೂಪರ್ ನ್ಯೂಮರಿ ಕೋಟಾದ ಅಡಿಯಲ್ಲಿ ಪ್ರವೇಶ ಪಡೆದುಕೊಳ್ಳಬಹುದಾಗಿದ್ದು ದಿನಾಂಕ 30ರಂದು ಸೆಲ್ಪ್ ಸಪೋರ್ಟಿಂಗ್ ಯೋಜನೆ ಅನ್ವಯ ಪ್ರವೇಶ ಪಡೆದುಕೊಳ್ಳಬಹುದಾಗಿದೆ ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: Vijayapura News | ಶಿಕ್ಷಕರ ಯಶಸ್ಸು ಅವರು ಮಾಡುವ ಕಾರ್ಯಗಳಲ್ಲಿ ಇರುತ್ತದೆ – ಡಾ ಶ್ರೀಮತಿ ಎಸ್ ಟಿ ಬೋಳರೆಡ್ಡಿ

ಹೆಚ್ಚಿನ ಮಾಹಿತಿಗಾಗಿ ಶಂಕರಗೌಡ ಸೋಮನಾಳ, ಕುಲಸಚಿವರು, ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯ, ವಿಜಯಪುರ- 586108. ದೂರವಾಣಿ ಸಂಖ್ಯೆ: 08352-297062, 7795122960, 7204889855 ಮತ್ತು 9901827696; website: www.kswu.ac.in ಸಂಪರ್ಕಿಸಬಹುದಾಗಿದೆ.


LEAVE A REPLY

Please enter your comment!
Please enter your name here