Vijayapura News | ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಹಲ್ಮಿಡಿ ಶಾಸನ ಪ್ರತಿಕೃತಿ ಅನಾವರಣ

ಕನ್ನಡದ ಮೊದಲ ಶಾಸನವೆಂದು ಪರಿಗಣಿಸಲ್ಪಟ್ಟಿರುವ ಹಲ್ಮಿಡಿ ಶಾಸನದ ಪ್ರತಿಕೃತಿಯನ್ನು ಪ್ರತಿ ಜಿಲ್ಲಾ ಕೇಂದ್ರಗಳಲ್ಲಿ ಅಳವಡಿಸಲು ಉದ್ದೇಶಿಸಲಾಗಿದೆ.

0
28

ವಿಜಯಪುರ: ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಕನ್ನಡದ ಮೊಟ್ಟ ಮೊದಲ ಶಾಸನ ಹಲ್ಮಿಡಿ ಶಾಸನ ಪ್ರತಿಕೃತಿ ಯನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವರು ಹಾಗೂ ಮೂಲಸೌಕರ್ಯ ಅಭಿವೃದ್ಧಿ ಸಚಿವರು ಮತ್ತು ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಂ.ಬಿ.ಪಾಟೀಲ ಅವರು ಉದ್ಘಾಟಿಸಿದರು.

ಕರ್ನಾಟಕ ಸಂಭ್ರಮ-50 “ಹೆಸರಾಯಿತು ಕರ್ನಾಟಕ-ಉಸಿರಾಗಲಿ ಕನ್ನಡ” ಅಭಿಯಾನದಡಿ ನವ್ಹೆಂಬರ್-2023 ರಿಂದ ಇಲ್ಲಿಯವರೆಗೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಅದರಲ್ಲಿ ಕನ್ನಡದ ಮೊದಲ ಶಾಸನವೆಂದು ಪರಿಗಣಿಸಲ್ಪಟ್ಟಿರುವ ಹಲ್ಮಿಡಿ ಶಾಸನ ಪ್ರತಿಕೃತಿ ಯನ್ನು ಪ್ರತಿ ಜಿಲ್ಲಾ ಕೇಂದ್ರಗಳಲ್ಲಿ ಅಳವಡಿಸಲು ಉದ್ದೇಶಿಸಲಾಗಿದ್ದು, ಅದರಂತೆ ವಿಜಯಪುರ ಜಿಲ್ಲೆಯಲ್ಲಿ ಸಾರ್ವಜನಿಕರ ವೀಕ್ಷಣೆಗಾಗಿ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಹಲ್ಮಿಡಿ ಶಾಸನದ ಪ್ರತಿಕೃತಿಯನ್ನು ಅಳವಡಿಸಲಾಗಿದೆ ಎಂದು ಅವರು ಹೇಳಿದರು.

ನಗರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ, ಕರ್ನಾಟಕ ಬಾಲವಿಕಾಸ ಅಕಾಡೆಮಿಯ ಅಧ್ಯಕ್ಷ ಸಂಗಮೇಶ ಬಬಲೇಶ್ವರ, ಜಿಲ್ಲಾಧಿಕಾರಿ ಟಿ.ಭೂಬಾಲನ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರಸನ್ನ ದೇಸಾಯಿ, ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ, ವಿಜಯಪುರ ಉಪವಿಭಾಗಾಧಿಕಾರಿ ಗುರುನಾಥ ದಡ್ಡೆ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಸಂತೋಷ ಭೋವಿ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳು, ಕನ್ನಡಪರ ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.

ಇದನ್ನೂ ಓದಿ: Vijayapura News | ಕನ್ನಡ ಎಲ್ಲ ಭಾಷೆಗಳ ತಾಯಿ | ಶಂಕರ ಮಾರಿಹಾಳ


LEAVE A REPLY

Please enter your comment!
Please enter your name here