ವಿಜಯಪುರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ಮಕ್ಕಳ ರಕ್ಷಣಾ ಘಟಕದಡಿ ಕಾರ್ಯ ನಿರ್ವಹಿಸುತ್ತಿರುವ ಸರ್ಕಾರಿ ಬಾಲಕಿಯರ ಬಾಲ ಮಂದಿರ Childcare cleanliness ಹಾಗೂ ಸರ್ಕಾರಿ ಬಾಲಕರ ಬಾಲ ಮಂದಿರಕ್ಕೆ ಗುರುವಾರ ಸಂಜೆ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧ್ಯಕ್ಷರೂ ಆದ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಅನಿರೀಕ್ಷಿತ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಇದನ್ನೂ ಓದಿ: Bagalkote News | ಮಕ್ಕಳಲ್ಲಿನ ಅಪೌಷ್ಠಿಕತೆ ತಡೆಗೆ ಕ್ರಮ : ಸಿಇಒ ಕುರೇರ್
ಬಾಲ ಮಂದಿರಗಳ ಮೂಲಭೂತ ಸೌಕರ್ಯ ಪರಿಶೀಲಿಸಿದ ಅವರು, ಬಾಲ ಮಂದಿರದಲ್ಲಿರುವ ಮಕ್ಕಳ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿ,ಯಾವುದೇ ಕಾರಣಕ್ಕೂ ಮಕ್ಕಳಿಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು. Childcare cleanliness ಶೌಚಾಲಯಗಳಲ್ಲಿ ಸ್ವಚ್ಛತೆ, ಕುಡಿಯುವ ನೀರು, ಸ್ನಾನಕ್ಕೆ ಬಿಸಿ ನೀರು, ಉತ್ತಮ ಆಹಾರ ಸೇರಿದಂತೆ ಮೂಲ ಸೌಕರ್ಯಗಳನ್ನು ಸಮರ್ಪಕವಾಗಿ ಮಕ್ಕಳಿಗೆ ಒದಗಿಸಬೇಕು. ಕೌಶಲ್ಯತೆಯನ್ನು ಹೆಚ್ಚಿಸಲು ವಿದ್ಯಾಭ್ಯಾಸದ ಜೊತೆಗೆ ಪಠ್ಯೇತರ ಚಟುವಟಿಕೆಗಳನ್ನು ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು. ಬಾಲಮಂದಿರದ ಮಕ್ಕಳೊಂದಿಗೆ ಸಂವಾದ ನಡೆಸಿದ ಅವರು,ಮಕ್ಕಳಯೋಗ ಕ್ಷೇಮ ವಿಚಾರಿಸಿದರು.ಸತತ ಅಧ್ಯಯನಶೀಲತೆ ರೂಢಿಸಿಕೊಳ್ಳಬೇಕು.ಎಲ್ಲಾ ವಿಷಯಗಳನ್ನು ಕರಗತ ಮಾಡಿಕೊಳ್ಳಬೇಕು ಹೇಳಿದರು.
ಇದನ್ನೂ ಓದಿ: Bagalkote News | ಡಿ. 1 ರಂದು ಕ್ರೀಡೆ ಮತ್ತು ಸಾಂಸ್ಕøತಿಕ ಕಾರ್ಯಕ್ರಮಗಳಲ್ಲಿ ವಿಕಲಚೇತನರು ಭಾಗವಹಿಸಿ | ಮಹಾಂತೇಶ ಮನವಿ
ಸರ್ಕಾರಿ ಬಾಲಕಿಯರ ಬಾಲ ಮಂದಿರದ ಕಟ್ಟಡ ಪರಿಶೀಲನೆ ನಡೆಸಿದ ಅವರು, ಕಟ್ಟಡದ ಅಗತ್ಯ ದುರಸ್ತಿ ಕಾಮಗಾರಿ ಕೈಗೊಳ್ಳುವಂತೆಯೂ, ಬಾಲಕರ ಬಾಲಮಂದಿರದ ಆವರಣದಲ್ಲಿ ವಿದ್ಯುದ್ದೀಪ ಅಳವಡಿಸುವ ವ್ಯವಸ್ಥೆ ಮಾಡುವಂತೆ ಸೂಚಿಸಿದರು. ಮಕ್ಕಳ ಆಟಕ್ಕಾಗಿ ಆಟದ ಮೈದಾನದಲ್ಲಿ ಒಪನ್‍ಜಿಮ್ ವ್ಯವಸ್ಥೆ ಕಲ್ಪಿಸಲು ಮಹಾನಗರ ಪಾಲಿಕೆ ಆಯುಕ್ತರಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಕೆ.ಕೆ.ಚವ್ಹಾಣ, ಬಸವರಾಜ ಜಿಗಳೂರು ಸೇರಿದಂತೆ ಅಧಿಕಾರಿ,ಸಿಬ್ಬಂದಿ ಉಪಸ್ಥಿತರಿದ್ದರು.