ವಿಜಯಪುರ: ಜಿಲ್ಲಾ ಉದ್ಯೋಗ udyoga mela ವಿನಿಮಯ ಕೇಂದ್ರ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ನವಬಾಗ ಇವರ ಸಂಯುಕ್ತಾಶ್ರಯದಲ್ಲಿ ನಗರದ ನವಬಾಗದಲ್ಲಿನ ಸರಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಮೇ.09ರ ಬೆಳಿಗ್ಗೆ 10ಗಂಟೆಗೆ ಉದ್ಯೋಗ ಮೇಳ ಆಯೋಜಿಸಲಾಗಿದೆ. ಈ ಮೇಳದಲ್ಲಿ 20ಕ್ಕೂ ಹೆಚ್ಚು ಸ್ಥಳೀಯ ಹಾಗೂ ವಿವಿಧ ಎಂ.ಎನ್.ಸಿ ಕಂಪನಿಗಳು ಭಾಗವಹಿಸಲಿವೆ.
ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐಟಿಐ, ಡಿ.ಇಡಿ, ಬಿ.ಇಡಿ ಹಾಗೂ ಯಾವುದೇ ಪದವಿಯಲ್ಲಿ ತೇರ್ಗಡೆಯಾಗಿರುವ 35 ವರ್ಷದೊಳಗಿನ ಆಸಕ್ತ ಅಭ್ಯರ್ಥಿಗಳು ತಮ್ಮ ಶೈಕ್ಷಣಿಕ ದಾಖಲಾತಿ ಸಹಿತ ಸ್ವ-ವಿವರ (ಬಯೋಡೆಟಾ)ದ ಕನಿಷ್ಟ 10 ಪ್ರತಿಗಳನ್ನು ಅಗತ್ಯದಾಖಲೆಯೊಂದಿಗೆ ಈ ಉದ್ಯೋಗ ಮೇಳದಲ್ಲಿ udyoga mela ಭಾಗವಹಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಅಥವಾ ಮೊ.ಸಂ: 8722780767 ಹಾಗೂ 9945000793ಗೆ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ: Vijayapura News : ಸಂಯಮ ಕಳೆದುಕೊಂಡ ಮುಖ್ಯಮಂತ್ರಿ ; ಶರಣು ಸಬರದ