ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯ ದ ಪ್ರಸಕ್ತ ಸಾಲಿನ (2024-25) ಸ್ನಾತಕೋತ್ತರ ಮತ್ತು ವ್ಯಾಲ್ಯು ಆಡೆಡ್ ಡಿಪ್ಲೋಮಾ/ಅಡ್ವಾನ್ಸ್ ಡಿಪ್ಲೋಮಾ ಹಾಗೂ ಸರ್ಟಿಫಿಕೇಟ್ ಕೋರ್ಸ್‍ಗಳ ಖಾಲಿ ಉಳಿದ ಸೀಟುಗಳ ಭರ್ತಿಗಾಗಿ ನವೆಂಬರ್ 15ರ ವರೆಗೆ ಪ್ರವೇಶಾತಿ ಪಡೆಯಬಹುದು ಎಂದು ಕುಲಸಚಿವ ಶಂಕರಗೌಡ ಸೋಮನಾಳ ಅವರು ತಿಳಿಸಿದ್ದಾರೆ.
ಇದನ್ನೂ ಓದಿ: Vijayapura News | ಅಕ್ಕಮಹಾದೇವಿ ಮಹಿಳಾ ವಿವಿಯಲ್ಲಿ ಸ್ನಾತಕೋತ್ತರ ಪ್ರವೇಶಾತಿ ಆರಂಭ | ಅರ್ಜಿ ಆಹ್ವಾನ
ಕನ್ನಡ, ಇಂಗ್ಲಿಷ್, ಹಿಂದಿ, ಉರ್ದು, ಮಹಿಳಾ ಅಧ್ಯಯನ, ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ, ಅರ್ಥಶಾಸ್ತ್ರ, ಸಮಾಜಶಾಸ್ತ್ರ, ಸಮಾಜ ಕಾರ್ಯ, ಎಂ.ಎಸ್‍ಸಿ ಇನ್ ಬಯೋಇನ್ಫಾರ್ಮೆಟಿಕ್ಸ್, ಬಯೋಟೆಕ್ನಾಲಜಿ, ಭೌತಶಾಸ್ತ್ರ, ಕಂಪ್ಯೂಟರ್ ಸೈನ್ಸ್, ಸಂಖ್ಯಾಶಾಸ್ತ್ರ, ಆಹಾರ ಸಂಸ್ಕರಣೆ ಮತ್ತು ಪೋಷಣೆ, ಔಷಧೀಯ ರಸಾಯನಶಾಸ್ತ್ರ, ಮತ್ತು ಎಂಎಡ್, ಎಂಪಿಎಡ್, ಬಿಪಿಎಡ್, ಸಂಗೀತ ವಿಷಯಗಳ ಸ್ನಾತಕೋತ್ತರ ಕೋರ್ಸ್‍ಗಳಿಗೆ ಮತ್ತು ಪಿಜಿಡಿಸಿಯಲ್ಲಿ ಸೀಟುಗಳು ಲಭ್ಯವಿವೆ. ನವೆಂಬರ್ 15ರ ವರೆಗೆ ಈ ಕೋರ್ಸ್‍ಗಳಿಗೆ ಮಾತ್ರ ಪ್ರವೇಶ ನೀಡಲಾಗುವುದು.
ಇದನ್ನೂ ಓದಿ: Vijayapura News | ವಿಜಯಪುರ ಮಹಾನಗರ ಪಾಲಿಕೆ ವಾರ್ಡ-29ರ ಉಪ ಚುನಾವಣೆಗೆ ಅಧಿಸೂಚನೆ
ಈ ಮೇಲೆ ಹೇಳಿರುವ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯ ದ ಯಾವುದೇ ವಿಭಾಗಗಳಲ್ಲಿ ಪ್ರವೇಶ ಪಡೆಯಲು ಈಗಾಗಲೇ ಯುಯುಸಿಎಂಎಸ್ ಮೂಲಕ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಿ ಇಲ್ಲಿಯ ವರೆಗೆ ಪ್ರವೇಶ ಪಡೆಯದೇ ಇರುವವರು ಮತ್ತು ಈಗಾಗಲೇ ಅರ್ಜಿ ಸಲ್ಲಿಸದೇ ಇರುವವರು ಸಹ ಅರ್ಜಿ ಸಲ್ಲಿಸಲು ನವೆಂಬರ್ 15 ಕೊನೆಯ ದಿನವಾಗಿದ್ದು ಯುಯುಸಿಎಂಎಸ್ https://uucms.karnataka.gov.in/Login/Index ತಂತ್ರಾಂಶದಲ್ಲಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಿದ ನಂತರ ನೇರವಾಗಿ ಖಾಲಿ ಸೀಟುಗಳು ಲಭ್ಯವಿರುವ ಯಾವುದೇ ವಿಭಾಗ, ಸ್ನಾತಕೋತ್ತರ ಕೇಂದ್ರಗಳಿಗೆ ಭೇಟಿ ನೀಡಿ ಪ್ರವೇಶ ಪಡೆಯಬಹುದಾಗಿದೆ ಎಂದು ವಿವಿ ಪ್ರಕಟಣೆ ತಿಳಿಸಿದೆ. ಹೆಚ್ಚಿನ ಮಾಹಿತಿಗಾಗಿ ವಿವಿಯ website: www.kswu.ac.in ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.






