ಈರುಳ್ಳಿ ಬೆಳೆಗಾರರಿಗೆ ಪರಿಹಾರ ನೀಡಿ: ಅರವಿಂದ ಕುಲಕರ್ಣಿ

ವಿಜಯಪುರ : ಕೊಳೆ ರೋಗಭಾದೆಗೆ ಹಾಳಾದ ಈರುಳ್ಳಿ ಪರಿಹಾರಕ್ಕೆ ಆಗ್ರಹ ಕೊಳೆ ರೋಗ ಭಾದೆಯಿಂದ ರೈತರು ಬೆಳೆದ ಈರುಳ್ಳಿ ಸಂಪೂರ್ಣ ಹಾಳಾಗಿದ್ದು ಸರ್ಕಾರ ಸಮೀಕ್ಷೆ ಮಾಡಿ ಸೂಕ್ತ ಪರಿಹಾರ ಒದಗಿಸಬೇಕೆಂದು ಅಖಂಡ ಕರ್ನಾಟಕ ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅರವಿಂದ ಕುಲಕರ್ಣಿ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

ಶುಕ್ರವಾರದಂದು ಕರ್ನಾಟಕ ರಾಜ್ಯ ಈರುಳ್ಳಿ ಬೆಳೆಗಾರರ ಒಕ್ಕೂಟ ಹಾಗೂ ಅಖಂಡ ಕರ್ನಾಟಕ ರೈತ ಸಂಘದ ಜಂಟಿಯಾಗಿ ಅಪರ ಜಿಲ್ಲಾಧಿಕಾರಿ ರಮೇಶ ಕಳಸದ ಅವರಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅರವಿಂದ ಕುಲಕರ್ಣಿ ಮಾತನಾಡಿ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕ ಕೊಲ್ಲಾರ ತಾಳಿಕೋಟಿ ಸಿಂದಗಿ ದೇವರ ಹಿಪ್ಪರಗಿ ತಿಕೋಟ ಮುದ್ದೇಬಿಹಾಳ ಸೇರಿದಂತೆ ಜಿಲ್ಲೆಯ ಬಹುತೇಕ ಭಾಗಗಳಲ್ಲಿ ರೈತರು ಬೆಳೆದ ಈರುಳ್ಳಿ ಸಂಪೂರ್ಣ ಕೊಳೆ ರೋಗದ ಭಾದೆಗೆ ತುತ್ತಾಗಿದ್ದು ಸರ್ಕಾರ ಕೂಡಲೇ ಸಮೀಕ್ಷೆ ನಡೆಸಿ ಸೂಕ್ತ ಪರಿಹಾರ ನೀಡಬೇಕು ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿರುವ ರೈತರು ಪ್ರತಿ ವರ್ಷವು ಒಂದಿಲ್ಲ ಒಂದು ಸಮಸ್ಯೆಗೆ ಸಿಲುಕುತ್ತಿದ್ದಾರೆ ಆದ್ದರಿಂದ ಸರ್ಕಾರ ಶೀಘ್ರದಲ್ಲಿ ಪರಿಹಾರ ಘೋಷಿಸಬೇಕೆಂದು ಆಗ್ರಹಿಸಿದ್ದಾರೆ ಈ ಸಂದರ್ಭದಲ್ಲಿ ವಿರುಪಾಕ್ಷ ಮುತ್ತತಿ’ ಮುತ್ತಪ್ಪ ಇಟಗಿ ಶಿವಯೋಗೆಪ್ಪ ಬಿರಾದಾರ ಮೈಬೂಬ ತಿಳಗೂಳ ಚಂದಪ್ಪ ಮುರಡಿ ಮಹಾದೇವಪ್ಪ ಮುತ್ತತ್ತಿ ಅಬ್ದುಲಸಾಬ ಕೆಳಗಿನಮನಿ ಸೇರಿದಂತೆ ಇತರರು ಇದ್ದರು.


Share the Post:

ಇತ್ತೀಚಿನ ಸುದ್ದಿಗಳು

Senior Students' Association image

Vijayapura News : ಪ್ರಾಚೀನ ಕಾಲದಿಂದ ಪ್ರಸ್ತುತ ಕಾಲದವರೆಗೂ ಪಾವಿತ್ರತೆ ಉಳಿಸಿಕೊಂಡ ವೃತ್ತಿ ಶಿಕ್ಷಕರ ವೃತ್ತಿ; ಅಶೋಕ್ ಹಂಚಲಿ

ವಿಜಯಪುರ: ಬಸವೇಶ್ವರ ವಿದ್ಯಾವರ್ಧಕ ಸಂಘದ ಪ್ರೆಸಿಡೆನ್ಸಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಹಿರಿಯ

Read More »