ಎಫ್‌ಎಕ್ಯೂ ಗುಣಮಟ್ಟ: ಹೆಸರುಕಾಳು 8682 ರೂ.,ಸೂರ್ಯಕಾಂತಿ 7280 ರೂ.

ಎಫ್‌ಎಕ್ಯೂ ಗುಣಮಟ್ಟ image
ಎಫ್‍ಎಕ್ಯೂ ಗುಣಮಟ್ಟ ದ ಸೂರ್ಯಕಾಂತಿಗೆ 7280 ರೂ. ಬೆಂಬಲ ಬೆಲೆಗೆ ನಿರ್ಧಾರ
ವಿಜಯಪುರ:  ಕನಿಷ್ಠ ಬೆಂಬಲ ಬೆಲೆ ಜಿಲ್ಲಾ ಕಾರ್ಯಪಡೆ ಸಮಿತಿ ಸಭೆಯಲ್ಲಿ ಪ್ರತಿ ಕ್ವಿಂಟಲ್‍ಗೆ  7280 ರೂ. ಬೆಂಬಲ ಬೆಲೆಯಡಿ ಎಫ್‍ಎಕ್ಯೂ ಗುಣಮಟ್ಟ ದ ಸೂರ್ಯಕಾಂತಿ ಖರೀದಿಸಲು ನಿರ್ಧರಿಸಲಾಗಿದೆ.
ಕನಿಷ್ಠ ಬೆಂಬಲೆ ಬೆಲೆ ಜಿಲ್ಲಾ ಕಾರ್ಯಪಡೆ ಸಮಿತಿ ಅಧ್ಯಕ್ಷರೂ ಆದ ಜಿಲ್ಲಾಧಿಕಾರಿ ಟಿ.ಭೂಭಾಲನ್ ಅವರ ಅಧ್ಯಕ್ಷತೆಯಲ್ಲಿ ಆ.26ರಂದು ನಡೆದ ಸಭೆಯಲ್ಲಿ ಈ ನಿರ್ಣಯ ಕೈಗೊಂಡಿದ್ದು, ಜಿಲ್ಲೆಯಲ್ಲಿ 2024-25ನೇ ಸಾಲಿನ ಹಿಂಗಾರು ಹಂಗಾಮಿನಲ್ಲಿ 1745 ಹೆಕ್ಟೇರ್ ಕ್ಷೇತ್ರದಲ್ಲಿ ಸೂರ್ಯಕಾಂತಿ ಬಿತ್ತನೆಯಾಗಿದ್ದು, ಅಂದಾಜು 26175 ಕ್ವಿಂಟಲ್ ಇಳುವರಿ ಅಂದಾಜಿಸಲಾಗಿದೆ. ಪ್ರಸ್ತುತ ಮಾರುಕಟ್ಟೆಯಲ್ಲಿ ಸೂರ್ಯಕಾಂತಿ ರೂ. 4400 ರಿಂದ 4800 ವರೆಗಿನ ದರದಲ್ಲಿ ಮಾರಾಟವಾಗುತ್ತಿದ್ದು, ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಎಫ್‍ಎಕ್ಯೂ ಗುಣಮಟ್ಟದ ಸೂರ್ಯಕಾಂತಿಯನ್ನು ಪ್ರತಿ ಕ್ವಿಂಟಲ್ 7280 ರೂ.ಗೆ ಖರೀದಿಸಲು ತೀರ್ಮಾನಿಸಲಾಗಿದ್ದು, ನ್ಯಾಫೆಡ್ ಸಂಸ್ಥೆಯನ್ನು ಖರೀದಿ ಸಂಸ್ಥೆಯನ್ನಾಗಿ ಹಾಗೂ ಕರ್ನಾಟಕ ಸಹಕಾರಿ ಎಣ್ಣೆಬೀಜ ಬೆಳೆಗಾರರ ಮಹಾಮಂಡಳ ನಿಯಮಿತ ಬೆಂಗಳೂರು ಸಂಸ್ಥೆಯನ್ನು ರಾಜ್ಯದ ವತಿಯಿಂದ ಖರಿದಿ ಸಂಸ್ಥೆಗಳನ್ನಾಗಿ ನೇಮಿಸಲಾಗಿದೆ. ಜಿಲ್ಲೆಯಲ್ಲಿ ಕೆಓಎಫ್ ಸಂಸ್ಥೆಯ ಎಣ್ಣೆಬೀಜ ಬೆಳೆಗಾರರ ಸಹಕಾರಿ ಸಂಘಗಳನ್ನು ಖರೀದಿ ಕೇಂದ್ರಗಳೆಂದು ಪರಿಗಣಿಸಿ ರೈತರ ನೊಂದಣಿಯೊಂದಿಗೆ ಖರೀದಿ ಪ್ರಕ್ರಿಯೆಯನ್ನು ಪ್ರಾರಂಭಿಸಲು ಸಭೆಯಲ್ಲಿ ತೀರ್ಮಾನಿಸಲಾಗಿದೆ.
ಇದನ್ನೂ ಓದಿ:ಜಿಲ್ಲಾಧಿಕಾರಿ: ಗೆಜೆಟೆಡ್ ಪ್ರೊಬೇಷನರ್ ಪರೀಕ್ಷಾ ಕೇಂದ್ರ ಪರಿಶೀಲನೆ
ಜಿಲ್ಲೆಯ ಬಬಲೇಶ್ವರ, ಸವನಹಳ್ಳಿ, ಬೆಳ್ಳುಬ್ಬಿ, ತಾಜಪುರ, ತಂಗಡಗಿ, ಚಡಚಣ, ಹಲಸಂಗಿ, ಸಿಂದಗಿ ಹಾಗೂ ಬಸವನಬಾಗೇವಾಡಿ ಸೇರಿದಂತೆ ಒಟ್ಟು 9 ಖರೀದಿ ಕೇಂದ್ರಗಳನ್ನು ತೆರೆಯಲಾಘಿದೆ. ಪ್ರತಿ ರೈತರಿಂದ ಪ್ರತಿ ಎಕರೆಗೆ ಗರಿಷ್ಠ 3 ಕ್ವಿಂಟಾಲ್‍ನಂತೆ ಹಾಗೂ ಪ್ರತಿ ರೈತರಿಂದ ಗರಿಷ್ಠ 15 ಕ್ವಿಂಟಾಲ್ ಎಪ್‍ಎಕ್ಯೂ ಗುಣಮಟ್ಟದ ಸೂರ್ಯಕಾಂತಿ ಖರೀದಿಸಲು ತೀರ್ಮಾನಿಸಿ, ಹೆಚ್ಚಿನ ಮಾಹಿತಿಗಾಗಿ ಶಾಖಾ ವ್ಯವಸ್ಥಾಪಕರು ಕೆಓಎಫ್ ವಿಜಯಪುರ ಮೊ: 9900553054 ಸಂಖ್ಯೆಗೆ ಸಂಪರ್ಕಿಸಲು ತಿಳಿಸಲಾಗಿದೆ.
ಬೆಂಬಲ ಬೆಲೆ ಯೋಜನೆಯ ಮಾರ್ಗಸೂಚಿಗಳನ್ವಯ ರೈತರಿಗೆ ನಿಗದಿತ ಅವಧಿಯೊಳಗೆ ಖರೀದಿ ಪ್ರಮಾಣದ ಮೌಲ್ಯವನ್ನು ಡಿಬಿಟಿ ಮೂಲಕ ಜಮೆ ಆಗುವಂತೆ ಪಾವತಿ ಮಾಡಬೇಕು. ಆವರ್ತನಿಧಿ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಖರೀದಿ ಕೇಂದ್ರಗಳಲ್ಲಿ ವರ್ತಕರು ತರುವ ಸೂರ್ಯಕಾಂತಿ ಖರೀದಿಸದಂತೆ ಹಾಗೂ ಯಾವುದೇ ರೀತಿಯ ದುರುಪಯೋಗವಾಗದಂತೆ ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಲಾಯಿತು ಎಂದು ಕೃಷಿ ಮಾರಾಟ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಎಫ್‍ಎಕ್ಯೂ ಗುಣಮಟ್ಟದ ಹೆಸರುಕಾಳು 8682 ರೂ. ಬೆಂಬಲ ಬೆಲೆಗೆ ನಿರ್ಧಾರ
ವಿಜಯಪುರ, ಆಗಸ್ಟ್ 27 (ಕರ್ನಾಟಕ ವಾರ್ತೆ):  ಕನಿಷ್ಠ ಬೆಂಬಲ ಬೆಲೆ ಜಿಲ್ಲಾ ಕಾರ್ಯಪಡೆ ಸಮಿತಿ ಸಭೆಯಲ್ಲಿ ಪ್ರತಿ ಕ್ವಿಂಟಲ್‍ಗೆ  8682 ರೂ. ಬೆಂಬಲ ಬೆಲೆಯಡಿ ಎಫ್‍ಎಕ್ಯೂ ಗುಣಮಟ್ಟ ದ ಹೆಸರುಕಾಳು ಉತ್ಪನ್ನವನ್ನು  ಖರೀದಿಸಲು ನಿರ್ಧರಿಸಲಾಗಿದೆ.
ಕನಿಷ್ಠ ಬೆಂಬಲೆ ಬೆಲೆ ಜಿಲ್ಲಾ ಕಾರ್ಯಪಡೆ ಸಮಿತಿ ಅಧ್ಯಕ್ಷರೂ ಆದ ಜಿಲ್ಲಾಧಿಕಾರಿ ಟಿ.ಭೂಭಾಲನ್ ಅವರ ಅಧ್ಯಕ್ಷತೆಯಲ್ಲಿ ಆ.26ರಂದು ನಡೆದ ಸಭೆಯಲ್ಲಿ ಈ ನಿರ್ಣಯ ಕೈಗೊಂಡಿದ್ದು, ಜಿಲ್ಲೆಯಲ್ಲಿ 706 ಹೆಕ್ಟೇರ್ ಕ್ಷೇತ್ರದಲ್ಲಿ ಹೆಸರುಕಾಳು ಬಿತ್ತನೆಯಾಗಿದ್ದು, ಅಂದಾಜು 8805 ಕ್ವಿಂಟಲ್ ಇಳುವರಿ ಅಂದಾಜಿಸಲಾಗಿದೆ. ಪ್ರಸ್ತುತ ಮಾರುಕಟ್ಟೆಗೆ ಆವಕವಾಗದೇ ಸಮೀಪದ ಮಾರುಕಟ್ಟೆಯಲ್ಲಿ ಹೆಸರುಕಾಳು ಕನಿಷ್ಠ 6495 ರಿಂದ ಗರಿಷ್ಠ 7851 ಹಾಗೂ ಸರಾಸರಿ 7002 ರೂ. ಪ್ರತಿ ಕ್ವಿಂಟಾಲ್‍ಗೆ ಮಾರಾಟವಾಗುತ್ತಿದ್ದು, ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಎಫ್‍ಎಕ್ಯೂ ಗುಣಮಟ್ಟ ದ ಹೆಸರುಕಾಳು ಪ್ರತಿ ಕ್ವಿಂಟಲ್ 8682 ರೂ.ಗೆ ಖರೀದಿಸಲು ತೀರ್ಮಾನಿಸಿ, ಜಿಲ್ಲೆಯಲ್ಲಿ ಕೃಷಿ ಪತ್ತಿನ ಸಹಕಾರಿ ಸಂಘಗಳು ಟಿಎಪಿಸಿಎಂಎಸ್ ಸಂಸ್ಥೆಗಳನ್ನು ಖರೀದಿ ಕೇಂದ್ರಗಳೆಂದು ಪರಿಗಣಿಸಿ ಪರಿಗಣಿಸಿ ರೈತರ ನೊಂದಣಿಯೊಂದಿಗೆ ಖರೀದಿ ಪ್ರಕ್ರಿಯೆಯನ್ನು ಪ್ರಾರಂಭಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು.
ಜಿಲ್ಲೆಯ  ವಿಜಯಪುರ, ಬಸವನಬಾಗೇವಾಡಿ, ಮುದ್ದೇಬಿಹಾಳ, ಸಿಂದಗಿ ಹಾಗೂ ಇಂಡಿ ಖರೀದಿ ಕೇಂದ್ರಗಳಲ್ಲಿ ಟಿಎಪಿಸಿಎಂಎಸ್ ಏಜೆನ್ಸಿ ಮೂಲಕ ಖರೀದಿಸಲು ನಿರ್ಣಯಿಸಲಾಯಿತು.  ಪ್ರತಿ ರೈತರಿಂದ ಪ್ರತಿ ಎಕರೆಗೆ ಗರಿಷ್ಠ 2 ಕ್ವಿಂಟಾಲ್‍ನಂತೆ ಹಾಗೂ ಪ್ರತಿ ರೈತರಿಂದ ಗರಿಷ್ಠ 10 ಕ್ವಿಂಟಾಲ್ ಎಪ್‍ಎಕ್ಯೂ ಗುಣಮಟ್ಟದ ಹೆಸರುಕಾಳು ಖರೀದಿಸಲು ನಿರ್ಣಯಿಸಿ,  ಹೆಚ್ಚಿನ ಮಾಹಿತಿಗಾಗಿ ಶಾಖಾ ವ್ಯವಸ್ಥಾಪಕರು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ (ಮಾರ್ಕಫೆಡ್) ಎಪಿಎಂಸಿ ಯಾರ್ಡ, ವಿಜಯಪುರ ಮೊ: 7892095176 ಸಂಖ್ಯೆಗೆ ಸಂಪರ್ಕಿಸಲು ತಿಳಿಸಲಾಗಿದೆ.

ಎಫ್‌ಎಕ್ಯೂ ಗುಣಮಟ್ಟ ಬೆಂಬಲ ಬೆಲೆ ಯೋಜನೆಯ ಮಾರ್ಗಸೂಚಿಗಳನ್ವಯ ರೈತರಿಗೆ ನಿಗದಿತ ಅವಧಿಯೊಳಗೆ ಖರೀದಿ ಪ್ರಮಾಣದ ಮೌಲ್ಯವನ್ನು ಡಿಬಿಟಿ ಮೂಲಕ ಜಮೆ ಆಗುವಂತೆ ಪಾವತಿ ಮಾಡಬೇಕು. ಆವರ್ತನಿಧಿ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಖರೀದಿ ಕೇಂದ್ರಗಳಲ್ಲಿ ವರ್ತಕರು ತರುವ ಹೆಸರುಕಾಳು  ಖರೀದಿಸದಂತೆ ಹಾಗೂ ಯಾವುದೇ ರೀತಿಯ ದುರುಪಯೋಗವಾಗದಂತೆ ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಲಾಯಿತು ಎಂದು ಕೃಷಿ ಮಾರಾಟ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Share the Post:

ಇತ್ತೀಚಿನ ಸುದ್ದಿಗಳು

Senior Students' Association image

Vijayapura News : ಪ್ರಾಚೀನ ಕಾಲದಿಂದ ಪ್ರಸ್ತುತ ಕಾಲದವರೆಗೂ ಪಾವಿತ್ರತೆ ಉಳಿಸಿಕೊಂಡ ವೃತ್ತಿ ಶಿಕ್ಷಕರ ವೃತ್ತಿ; ಅಶೋಕ್ ಹಂಚಲಿ

ವಿಜಯಪುರ: ಬಸವೇಶ್ವರ ವಿದ್ಯಾವರ್ಧಕ ಸಂಘದ ಪ್ರೆಸಿಡೆನ್ಸಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಹಿರಿಯ

Read More »