Vijayapura News | ಎಸ್ ಎಸ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಜೂಡೋ ಕ್ರೀಡೆಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ

ಎಸ್ ಎಸ್ ಪದವಿ ಪೂರ್ವ image

ವಿಜಯಪುರ: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ ಇಲಾಖೆ) ಬೆಂಗಳೂರು ವತಿಯಿಂದ ಚಿತ್ರದುರ್ಗ ಜಿಲ್ಲೆಯಲ್ಲಿ 2024 25 ನೇ ಸಾಲಿನ ಪದವಿ ಪೂರ್ವ ಕಾಲೇಜುಗಳ ರಾಜ್ಯಮಟ್ಟದ ಜೂಡೋ ಕ್ರೀಡಾಕೂಟ ನಡೆಯಿತು. ಇದರಲ್ಲಿ ಎಸ್ ಎಸ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಆರತಿ ಸೊನ್ನದ ಭಾಗವಹಿಸಿ 52 ಕೆಜಿ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾಳೆ ಹಾಗೂ ಸಂದೀಪ್ ಲಂಬಾಣಿ ರಾಜ್ಯಮಟ್ಟದಲ್ಲಿ ತೃತೀಯ ಸ್ಥಾನ ಪಡೆದಿದ್ದಾನೆ.

ಇದನ್ನೂ ಓದಿ: Vijayapura News | ಕನ್ನಡ ನಾಮ ಫಲಕ ಬಳಕೆಗೆ ಕಟ್ಟುನಿಟ್ಟಿನ ಸೂಚನೆ – ಜಿಲ್ಲಾಧಿಕಾರಿ ಟಿ.ಭೂಬಾಲನ್

ವಿದ್ಯಾರ್ಥಿಗಳ ಸಾಧನೆಗೆ ಬಿ ಎಲ್ ಡಿ ಈ ಸಂಸ್ಥೆಯ ಅಧ್ಯಕ್ಷರು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲಭೂತ ಸೌಕರ್ಯಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಮ್ ಬಿ ಪಾಟೀಲ, ಸಂಸ್ಥೆಯ ಪ್ರಧಾನ ಕಾರ್ಯದರ್ಶಿಗಳಾದ ಜಿ ಕೆ ಪಾಟೀಲ, ಆಡಳಿತ ಅಧಿಕಾರಿಗಳಾದ ಬಿ ಆರ್ ಪಾಟೀಲ, ಆಯ್ ಎಸ್ ಕಾಳಪ್ಪನವರ, ಕ್ರೀಡಾ ನಿರ್ದೇಶಕರುಗಳಾದ ಎಸ್ ಎಸ್ ಕೋರಿ, ಕೆ ಜಿ ಹಿರೇಮಠ, ಪ್ರಾಚಾರ್ಯ ಡಾ. ಜಿ ಡಿ ಅಕಮಂಚಿ, ದೈಹಿಕ ಉಪನ್ಯಾಸಾಕಿ ಅರುಣಾ ಮಾಲಿಂಗಪುರ ಹಾಗೂ ಸಮಸ್ತ ಸಿಬ್ಬಂದಿಗಳು ಹರ್ಷ ವ್ಯಕ್ತಪಡಿಸಿದ್ದಾರೆ.


Share the Post:

ಇತ್ತೀಚಿನ ಸುದ್ದಿಗಳು

Senior Students' Association image

Vijayapura News : ಪ್ರಾಚೀನ ಕಾಲದಿಂದ ಪ್ರಸ್ತುತ ಕಾಲದವರೆಗೂ ಪಾವಿತ್ರತೆ ಉಳಿಸಿಕೊಂಡ ವೃತ್ತಿ ಶಿಕ್ಷಕರ ವೃತ್ತಿ; ಅಶೋಕ್ ಹಂಚಲಿ

ವಿಜಯಪುರ: ಬಸವೇಶ್ವರ ವಿದ್ಯಾವರ್ಧಕ ಸಂಘದ ಪ್ರೆಸಿಡೆನ್ಸಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಹಿರಿಯ

Read More »