ವಿಜಯಪುರ: ಜಿಲ್ಲಾಡಳಿತದಿಂದ ಇದೇ ನವೆಂಬರ್ 1ರಂದು ಆಚರಿಸಲಾಗುವ ಜಿಲ್ಲಾ ಮಟ್ಟದ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಜಿಲ್ಲೆಯ ಎಲ್ಲ ಅಧಿಕಾರಿ-ಸಿಬ್ಬಂದಿಗಳು ಕರ್ತವ್ಯ ನಿಷ್ಠೆಯೊಂದಿಗೆ ಕಡ್ಡಾಯವಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಕನ್ನಡಾಭಿಮಾನ ಮೆರೆಯಬೇಕು ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಹೇಳಿದರು.
ಶುಕ್ರವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡ ಕರ್ನಾಟಕ ರಾಜ್ಯೋತ್ಸವ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ನಾಡಿನ ಅತಿ ಮುಖ್ಯವಾದ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಜಿಲ್ಲೆಯ ಎಲ್ಲ ಅಧಿಕಾರಿ-ಸಿಬ್ಬಂದಿಗಳು, ವಿವಿಧ ಕನ್ನಡ ಪರ ಸಂಘಟನೆಗಳು, ಸೇರಿದಂತೆ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸಿ ರಾಜ್ಯೋತ್ಸವ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಮನವಿ ಮಾಡಿಕೊಂಡರು.
ಇದನ್ನೂ ಓದಿ: Bagalkote News | ಪಟಾಕಿಗಳ ಮಾರಾಟ ಮತ್ತು ಬಳಕೆಯಲ್ಲಿ ಸುರಕ್ಷತಾ ಕ್ರಮಗಳನ್ನು ಅನುಸರಿಸಿ : ಡಿ.ಸಿ.ಜಾನಕಿ
ಗೈರಹಾಜರಾಗುವ ಅಧಿಕಾರಿಗಳಿಗೆ ನೋಟಿಸ್ : ಜಿಲ್ಲಾ ಹಾಗೂ ತಾಲೂಕಾ ಮಟ್ಟದ ಅಧಿಕಾರಿಗಳು ರಾಜ್ಯೋತ್ಸವ ಕಾರ್ಯಕ್ರಮದ ಅಂಗವಾಗಿ ಹಮ್ಮಿಕೊಳ್ಳುವ ತಾಯಿ ಭುವನೇಶ್ವರ ಭಾವಚಿತ್ರ ಮೆರವಣಿಗೆ ಹಾಗೂ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಕಡ್ಡಾಯವಾಗಿ ಭಾಗವಹಿಸುವಂತೆ ಸೂಚಿಸಿದ ಅವರು, ಕಾರ್ಯಕ್ರಮದಕ್ಕೆ ಗೈರ ಹಾಜರಾಗುವ ಅಧಿಕಾರಿಗಳಿಗೆ ನೋಟಿಸ್ ನೀಡಿ, ಗೈರಾದ ಅಧಿಕಾರಿಗಳ ಹೆಸರನ್ನು ಪತ್ರಿಕೆಗಳಲ್ಲಿ ಪ್ರಕಟಿಸುವ ಮೂಲಕ ಅಂತಹ ಅಧಿಕಾರಿಗಳ ಮೇಲೆ ಸೂಕ್ತ ಕ್ರಮ ವಹಿಸಲಾಗುವುದು ಎಂದು ಅವರು ಎಚ್ಚರಿಕೆ ನೀಡಿದರು.
ರಾಜ್ಯೋತ್ಸವ ಕಾರ್ಯಕ್ರಮದ ವಿವಿಧ ಸಿದ್ಧತೆಗಳ ವ್ಯವಸ್ಥೆಗೆ ವಿವಿಧ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ ಅವರು, ರಾಜ್ಯೋತ್ಸವ ಸಂದೇಶ ತಯಾರಿಗಾಗಿ ವಿವಿಧ ಇಲಾಖೆಗಳ ಪ್ರಗತಿ ವರದಿಯನ್ನು ಅಕ್ಟೋಬರ್ 25ರೊಳಗಾಗಿ ಸಲ್ಲಿಸುವಂತೆ ಅವರು ಸೂಚನೆ ನೀಡಿದರು.
ಇದನ್ನೂ ಓದಿ: Bagalkote News | ಸಹಕಾರ ರತ್ನ ಪ್ರಶಸ್ತಿಗೆ ಅರ್ಜಿ
ರಾಜ್ಯೋತ್ಸವ ಕಾರ್ಯಕ್ರಮದ ಅಂಗವಾಗಿ ಜಿಲ್ಲೆಯ ವಿವಿಧ ಶಾಲೆಗಳಲ್ಲಿ ಕನ್ನಡ ಭಾಷೆ, ನೆಲ, ಜಲ ಕುರಿತು ಜಿಲ್ಲಾ ಮಟ್ಟದ ಹಾಗೂ ತಾಲೂಕಾ ಮಟ್ಟದ ಕ್ವೀಜ್ ಸ್ಪರ್ಧೆಗಳನ್ನು ವಿದ್ಯಾರ್ಥಿಗಳಿಗೆ ಏರ್ಪಡಿಸಿ, ಅತ್ಯುತ್ತಮ 3 ಜಿಲ್ಲಾ ಮಟ್ಟದ ವಿಜೇತರಿಗೆ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪತ್ರ ನೀಡಲು ತೀರ್ಮಾನಿಸಲಾಯಿತು.






