ವಿಜಯಪುರ: ಜಿಲ್ಲೆಯ 08 ಪರೀಕ್ಷಾ ಕೇಂದ್ರಗಳಲ್ಲಿ ಕರ್ನಾಟಕ ಲೋಕಸೇವಾ ಆಯೋಗ ಅಧಿಸೂಚಿಸಿರುವ ಗೆಜೆಟೆಡ್ ಪ್ರೊಬೇಷನರ್ ಗ್ರೂಪ್ ಎ ಮತ್ತು ಗ್ರೂಪ ಬಿ ವೃಂದದ ಹುದ್ದೆಗಳಿಗೆ ನಡೆಯುತ್ತಿರುವ ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಸರ್ಕಾರಿ ಬಾಲಕರ ಪದವಿಪೂರ್ವ ಕಾಲೇಜ್, ಅಂಜುಮನ್ ಕಾಲೇಜ್, ಪಾಲಿಟೆಕ್ನಿಕ್ ಕಾಲೇಜ್, ಬಿಡಿಇ ಬಾಲಕಿಯರ ಪ್ರೌಢಶಾಲೆ ಪರೀಕ್ಷಾ ಕೇಂದ್ರಕ್ಕೆ ಮಂಳವಾರ ಭೇಟಿ ನೀಡಿ ಪರಿಶೀಲನೆ ನಡೆಸಿದ ಪರೀಕ್ಷೆಗಳು ಅತ್ಯಂತ ಸುಗಮ ಹಾಗೂ ಸುಸೂತ್ರವಾಗಿ ನಡೆಯುವಂತೆ ನೋಡಿಕೊಳ್ಳಬೇಕು. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಕೊಠಡಿ ಮೇಲ್ವಿಚಾರಕರಿಗೆ ಸೂಚಿಸಿದರು. ಪರೀಕ್ಷಾರ್ಥಿಗಳು ಯಾವುದೇ ಗೊಂದಲಗಳಿಗೆ ಕಿವಿಗೊದಡೆ ಉತಮವಾಗಿ ಪರೀಕ್ಷೆ ಬರೆಯಬೇಕು, ಯಾವುದೇ ಲೋಪವಾಗದಂತೆ ಎಚ್ಚರಿಕೆ ವಹಿಸುವಂತೆ ಜಿಲ್ಲಾಧಿಕಾರಿ ಸಂಬಂಧಿಸಿದವರಿಗೆ ಸೂಚನೆ ನೀಡಿದರು.
ಕಾನೂನ ಪದವಿ ಪಡೆದ ಅಲ್ಪಸಂಖ್ಯಾತ ಅಭ್ಯರ್ಥಿಗಳಿಗೆ ತರಬೇತಿ : ಅರ್ಜಿ ಆಹ್ವಾನ
ವಿಜಯಪುರ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಕಾನೂನು ಪದವಿ ಪಡೆದಿರುವ ಅಲ್ಪಸಂಖ್ಯಾತ ಅಭ್ಯರ್ಥಿಗಳಿಗೆ ಸರ್ಕಾರಿ ಅಡ್ವೋಕೇಟ್ ಅಥವಾ 20 ವರ್ಷಗಳಿಗಿಂತ ಹೆಚ್ಚಿನ ಅನುಭವವುಳ್ಳ ವಕೀಲರಿಂದ ತರಬೇತಿ ನೀಡಲಾಗುತ್ತಿದ್ದು, ತರಬೇತಿ ಪಡೆಯಲಿಚ್ಛಿಸುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಬಾರ್ ಕೌನ್ಸಿಲ್‍ನಲ್ಲಿ ನೊಂದಾಯಿಸಿರಬೇಕು. ಕುಟುಂಬದ ವಾರ್ಷಿಕ ಆದಾಯ 3.50ಲಕ್ಷಕ್ಕೆ ಮೀರಿರಬಾರದು. ಅರ್ಜಿ ಸಲ್ಲಿಸುವ ಕೊನೆಯ ದಿನಾಂಕಕ್ಕೆ 30 ವರ್ಷದೊಳಗಿರಬೇಕು. ಅರ್ಜಿ ಸಲ್ಲಿಸುವ ಕೊನೆಯ ದಿನಾಂಕಕ್ಕೆ 2 ವರ್ಷಗಳ ಅವಧಿಯೊಳಗೆ ಕಾನೂನು ಪದವಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿಬೇಕು.
ಅರ್ಜಿ ಸಲ್ಲಿಸಲು ದಿನಾಂಕ : 17-09-2024 ಕೊನೆಯ ದಿನಾಂಕವಾಗಿದ್ದು, ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಕಚೇರಿ, ಮೌಲಾನಾ ಆಝಾದ ಭವನ, ಜಿಲ್ಲಾ ಪಂಚಾಯತ್ ಹತ್ತಿರ, ಕನಕದಾಸ ಬಡಾವಣೆ, ವಿಜಯಪುರ ದೂ: 08352-295523 ಸಂಖ್ಯೆಗೆ ಸಂಪರ್ಕಿಸುವಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಐಟಿಐ ತರಬೇತಿ ಸಂಸ್ಥೆಯಲ್ಲಿ ವಿವಿಧ ವೃತ್ತಿಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ
ವಿಜಯಪುರ: ವಿಜಯಪುರ ನಗರದ ಸರ್ಕಾರಿ ಕೈಗಾರಿಕೆ ತರಬೇತಿ ಸಂಸ್ಥೆಯಲ್ಲಿ ಎನ್.ಸಿ.ವ್ಹಿ.ಟಿ. ಸಂಯೋಜನೆ ಹೊಂದಿರುವ ಒಂದು ಮತ್ತು ಎರಡು ವರ್ಷಗಳ ಸಾಂಪ್ರದಾಯಿಕ ಹಾಗೂ ಅತ್ಯಾಧುನಿಕ ವೃತ್ತಿಗಳಿಗೆ ಆಗಸ್ಟ್-2024ನೇ ಸಾಲಿಗೆ ಆಫ್‍ಲೈನ್ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಪ್ರಾರಂಭವಾಗಿದೆ.
ವೆಲ್ಡರ್, ಟರ್ನರ್, ಇಂಡಸ್ಟ್ರೀಯಲ್ ರೋಬೋಟಿಕ್ಸ್ & ಡಿಜಿಟಲ್ ಮ್ಯಾನುಫ್ಯಾಕ್ಚರಿಂಗ್ ಟೆಕ್ನಿಶಿಯನ್, ಆರ್ಟಿಷಿಯನ್ ಯೂಸಿಂಗ್ ಅಡ್ವಾನ್ಸ್ಡ್ ಟೂಲ್ ವೃತ್ತಿಗಳಿಗೆ 08ನೇ ಹಾಗೂ 10ನೇ ತರಗತಿ ಪಾಸಾದ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಸಲು ದಿನಾಂಕ : 31-08-2024 ಕೊನೆಯ ದಿನಾಂಕವಾಗಿದೆ ಎಂದು ಸರ್ಕಾರಿ ಕೈಗಾರಿಕೆ ತರಬೇತಿ ಸಂಸ್ಥೆ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.