ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟಕ್ಕೆ ಸಚಿವ ತಿಮ್ಮಾಪೂರ ಚಾಲನೆ

ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ image

ಬಾಗಲಕೋಟೆ:: ನವನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಹಮ್ಮಿಕೊಂಡ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ ಗಳಿಗೆ ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪೂರ ಕ್ರೀಡಾ ಧ್ವಜಾರೋಹಣ ನೆರವೇರಿಸಿ ಚಾಲನೆ ನೀಡಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಧ್ವಜಾರೋಹಣದ ನಂತರ ಕ್ರೀಡಾ ಜ್ಯೋತಿಯನ್ನು ಸ್ವೀಕರಿಸಲಾಯಿತು. ಈ ಸಂದರ್ಭದಲ್ಲಿ ಶಾಸಕ ಹಾಗೂ ಬಿಟಿಡಿಎ ಅಧ್ಯಕ್ಷ ಎಚ್.ವಾಯ್.ಮೇಟಿ, ಬೀಳಗಿ ಶಾಸಕ ಹಟ್ಟಿ ಚಿನ್ನದ ಗಣಿ ನಿಯಮಿತದ ಅಧ್ಯಕ್ಷ ಜೆ.ಟಿ.ಪಾಟೀಲ ಉಪಸ್ಥಿತರಿದ್ದರು.

ಇದನ್ನೂ ಓದಿ: ಐದನೆಯ ಥಾಂಗ್ -ತಾ ಕ್ರೀಡಾಕೂಟ

ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಜಿಲ್ಲಾಧಿಕಾರಿ ಜಾನಕಿ ಕೆ.ಎಂ ಅವರು ದಸರಾ ಕ್ರೀಡಾಕೂಟದ ಪೂರ್ವಭಾವಿಯಾಗಿ ಜಿಲ್ಲಾ ಮಟ್ಟದಲ್ಲಿ ಕ್ರೀಡಾಕೂಟಗಳನ್ನು ಹಮ್ಮಿಕೊಳ್ಳಲಾಗಿದೆ. ಇದರಲ್ಲಿ ಸಕ್ರಿಯವಾಗಿ ಪಾಲ್ಗೊಂಡು ನಿಮ್ಮ ಸಾಮಥ್ರ್ಯವನ್ನು ತೋರಿಸಿ ವಿಜೇತರಾಗಬೇಕು. ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿ ಮೈಸೂರಿನಲ್ಲಿ ನಡೆಯುವಂತ ಕ್ರೀಡೆಗಳಲ್ಲಿ ತಮ್ಮ ಸಾಮರ್ಥ್ಯವನ್ನು ತೋರಿಸಿ ವಿಜೇತರಾಗಿ ಜಿಲ್ಲೆಯ ಕೀರ್ತಿ ತರಲು ತಿಳಿಸಿದರು.

ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕ್ರೀಡಾಕೂಟಗಳು ಗ್ರಾಮೀಣ ಮಟ್ಟದಿಂದ ರಾಜ್ಯ ಮಟ್ಟಕ್ಕೆ ಹೋಗಬೇಕಾದರೆ ದಸರಾ ಕ್ರೀಡಾಕೂಟಗಳ ಪಾತ್ರ ಬಹಳ ಮುಖ್ಯವಾಗಿದೆ. ಆಯಾ ತಾಲೂಕಿನ ಗ್ರಾಮೀಣ ಮಟ್ಟದಿಂದ ಆಗಮಿಸಿದ್ದು, ಜಿಲ್ಲಾ ಮಟ್ಟದಲ್ಲಿ ವಿಜೇತರಾಗಿ ರಾಜ್ಯ ಆಯ್ಕೆಯಾಗಿ ಯಶಸ್ವಿಯಾಗಿರಿ. ನಮ್ಮ ಜಿಲ್ಲೆಯಲ್ಲಿ ವಿಶೇಷವಾಗಿ ಸೈಕ್ಲಿಂಗ್, ಕುಸ್ತಿ ಹಾಗೂ ಕಬಡ್ಡಿ ಉತ್ತಮ ಪ್ರಾಮುಖ್ಯತೆ ಪಡೆದುಕೊಂಡಿವೆ ಎಂದರು.

ಇದನ್ನೂ ಓದಿ: ಸೆ.30ರ ಕರ್ನಾಟಕ ಸಂಭ್ರಮ-50 ಕಾರ್ಯಕ್ರಮ – ಸೋಮಣ್ಣ ಬೇವಿನಮರದ

ಈ ಸಂದರ್ಭದಲ್ಲಿ ಸೈಕ್ಲಿಂಗ್‍ನಲ್ಲಿ ಸಾಧನೆ ಮಾಡಿದ ಕು.ಕೀರ್ತಿನಾಯಕ, ಮಲ್ಲೇಶ ಬಡಿಗೇರ, ಕುಸ್ತಿ ಪಡುಗಳಾದ ಜ್ಯೋತಿಬಾ ಜಾಂಬರೆ, ಸೋನಿಯಾ ಜಾಧವ ಕ್ರೀಡಾಪಟುಗಳಿಗೆ ಕ್ರೀಡಾ ಕಿಟ್‍ಗಳನ್ನು ವಿತರಿಸಿ ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಅಲ್ಪಸಂಖ್ಯಾತರ ಜಿಲ್ಲಾ ಅಧಿಕಾರಿ ಶಿವಾನಂದ ಪಟ್ಟಣಶೆಟ್ಟಿ, ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಗುರುಪಾದ ಡೂಗನವರ ಸೇರಿದಂತೆ ಇತರರು ಉಪಸ್ಥಿತರಿದ್ದರು.


Share the Post:

ಇತ್ತೀಚಿನ ಸುದ್ದಿಗಳು

Senior Students' Association image

Vijayapura News : ಪ್ರಾಚೀನ ಕಾಲದಿಂದ ಪ್ರಸ್ತುತ ಕಾಲದವರೆಗೂ ಪಾವಿತ್ರತೆ ಉಳಿಸಿಕೊಂಡ ವೃತ್ತಿ ಶಿಕ್ಷಕರ ವೃತ್ತಿ; ಅಶೋಕ್ ಹಂಚಲಿ

ವಿಜಯಪುರ: ಬಸವೇಶ್ವರ ವಿದ್ಯಾವರ್ಧಕ ಸಂಘದ ಪ್ರೆಸಿಡೆನ್ಸಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಹಿರಿಯ

Read More »