ಬಾಲಿವುಡ್ ನಟ ಸುಶಾಂತ್ ಸಿಂಗ್ ಮರಣೋತ್ತರ ಪರೀಕ್ಷೆ ವರದಿಯಲ್ಲಿರುವುದೇನು ?

ಮುಂಬೈ ಜೂ.15: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ ಮುಂಬೈನ ತಮ್ಮ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಬಾಲಿವುಡ್‍ನಲ್ಲಿ ಹೆಸರು ಮಾಡಿದ್ದ ಸುಶಾಂತ್ ಸಿಂಗ್ ಅಪಾರ ಅಭಿಮಾನಿ ಬಳಗಕ್ಕೆ ಆಘಾತ ಉಂಟುಮಾಡಿತ್ತು. ಸಾವಿನ ಸುತ್ತ ಹಲವಾರು ಅನುಮಾನಗಳು ಕಾಡಿದ್ದವು. ಈಗ ಅವರ ಅಭಿಮಾನಿಗಳಿಗೆ ಅವರ ಮರಣೋತ್ತರ ಪರೀಕ್ಷೆ ವರದಿ ಉತ್ತರ ನೀಡಿದೆ.

ಸುಶಾಂತ್ ಸಿಂಗ್ ತಮ್ಮ ಮನೆಯ ಬೆಡ್‍ರೂಂನಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಅವರ ಮನೆಯ ಕೆಲಸದವರು ಬಂದು ನೋಡಿದಾಗ ವಿಷಯ ಗೋತ್ತಾಗಿತ್ತು. ವಿಷಯ ಪೊಲೀಸರಿಗೆ ತಿಳಿದು ಸ್ಥಳ ಪರಿಶೀಲನೆ ಮಾಡಿ ಅವರ ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿತ್ತು. ಸುಶಾಂತ್ ಸಿಂಗ್ ರಜಪೂತ ಸುಮಾರ ದಿನಗಳಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು. ಈ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಅಂದಾಜಿಸಲಾಗಿತ್ತು.

ಮರಣೋತ್ತರ ಪರೀಕ್ಷೆ ವರದಿಯಲ್ಲಿ ನೇಣು ಬಿಗಿದುಕೊಂಡ ಕಾರಣ ಸಾವು ಸಂಭವಿಸಿದೆ ಎಂದು ವರದಿ ಬಂದಿದೆ. ಸುಶಾಂತ್ ಸಿಂಗ್ ರಜಪೂತ್‍ರವರ ದೇಹದ ಮೇಲೆ ಯಾವುದೇ ರೀತಿಯ ಗಾಯಗಳು ಕಂಡುಬಂದಿಲ್ಲ. ಹೀಗಾಗಿ ಆತ್ಮಹತ್ಯೆ ಎಂದು ಪೋಸ್ಟ ಮಾರ್ಟಮ್ ರಿಪೋರ್ಟ್‍ನಲ್ಲಿ ಹೇಳಲಾಗಿದೆ.


 

Share the Post:

ಇತ್ತೀಚಿನ ಸುದ್ದಿಗಳು

Senior Students' Association image

Vijayapura News : ಪ್ರಾಚೀನ ಕಾಲದಿಂದ ಪ್ರಸ್ತುತ ಕಾಲದವರೆಗೂ ಪಾವಿತ್ರತೆ ಉಳಿಸಿಕೊಂಡ ವೃತ್ತಿ ಶಿಕ್ಷಕರ ವೃತ್ತಿ; ಅಶೋಕ್ ಹಂಚಲಿ

ವಿಜಯಪುರ: ಬಸವೇಶ್ವರ ವಿದ್ಯಾವರ್ಧಕ ಸಂಘದ ಪ್ರೆಸಿಡೆನ್ಸಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಹಿರಿಯ

Read More »