ಲಾಕ್‌ ಡೌನ್‌ ಜಾರಿಯಾಗುತ್ತಾ ? ಸಂಜೆ 4 ಗಂಟೆಗೆ ಅಧಿಕೃತ ಘೋಷಣೆ

ಬೆಂಗಳೂರು ಮೇ 07: ರಾಜ್ಯದಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ಸಂಪೂರ್ಣ ಲಾಕ್ ಡೌನ್ ಜಾರಿ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಬಗ್ಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ಸಂಜೆ 4 ಗಂಟೆಗೆ ಅಧಿಕೃತ ಘೋಷಣೆ ಮಾಡಲಿದ್ದಾರೆ.

ಕೊರೊನಾ ನಿಯಂತ್ರಣಕ್ಕೆ ಲಾಕ್‌ ಡೌನ್‌ ಒಂದೇ ಪರಿಹಾರ ಎಂದು ತಜ್ಞರು ವರದಿ ನೀಡಿದ್ದಾರೆ. ಎಲ್ಲೆಡೆಯಿಂದಲೂ ಲಾಕ್‌ ಡೌನ್‌ ಮಾಡಬೇಕೆಂಬ ಆಗ್ರಹ ಕೇಳಿಬಂದಿದೆ. ಸಿಎಂ ನೇತೃತ್ವದಲ್ಲಿ ಅಧಿಕಾರಿಗಳ ಸಭೆ ನಡೆದಿದ್ದು, 15 ದಿನಗಳ ಕಾಲ ಲಾಕ್‌ ಡೌನ್‌ ಮಾಡುವ ಸಾಧ್ಯತೆ ಇದೆ. ಈ ಕುರಿತು ಅಧಿಕೃತ ಘೋಷಣೆ ಮಾತ್ರ ಬಾಕಿಯಿದೆ.ಕೊರೋನಾ ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ಸರಕಾರ ಅನಿವಾರ್ಯವಾಗಿ ಈ ನಿರ್ಧಾರಕ್ಕೆ ಬಂದಿದೆ.


 

Share the Post:

ಇತ್ತೀಚಿನ ಸುದ್ದಿಗಳು