ವಿಜಯಪುರ: ಭಾರತೀಯ ಜನತಾ ಪಾರ್ಟಿ ವಿಜಯಪುರ ಬಿಜೆಪಿ ಜಿಲ್ಲಾ ಘಟಕದ ವತಿಯಿಂದ ಮಹಾತ್ಮಾ ಗಾಂಧೀಜಿ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರೀಜಿ ಅವರ ಜನ್ಮ ದಿನಾಚರಣೆಯನ್ನು ನಗರದ ಛತ್ರಪತಿ ಶಿವಾಜಿ ಮಹಾರಾಜರ ವೃತ್ತದಲ್ಲಿ ಆಚರಿಸಲಾಯಿತು.
ವಿಜಯಪುರ ಬಿಜೆಪಿ ಜಿಲ್ಲಾಧ್ಯಕ್ಷ ಆರ್. ಎಸ್. ಪಾಟೀಲ ಕೂಚಬಾಳ ಮಾತನಾಡಿ, ಮಹಾತ್ಮಾ ಗಾಂಧೀಜಿ, ಶಾಸ್ತ್ರೀಜಿಯವರ ಆದರ್ಶಗಳನ್ನು ಪ್ರತಿಯೊಬ್ಬರು ಮೈಗೂಡಿಸಿಕೊಳ್ಳಬೇಕು. ಗಾಂಧೀಜಿಯವರು ಅಹಿಂಸಾವಾಧಿಯಾಗಿದ್ದರು. ಗಾಂಧೀಜಿಯವರು ಸ್ವಚ್ಛತೆಗೆ ಬಹಳ ಮಹತ್ವ ನೀಡಿದ್ದಾರೆ. ಶಾಸ್ತ್ರೀಜಿಯವರ ಕೊಡುಗೆ ಅನನ್ಯವಾಗಿದೆ ಎಂದರು.
ಇದನ್ನೂ ಓದಿ: ವಿಜಯಪುರ | ಪರಿಸರವನ್ನು ಸ್ವಚ್ಛ ಹಸಿರು ಸ್ಥಳವನ್ನಾಗಿ ಮಾಡೋಣ – ಜಿಲ್ಲಾಧಿಕಾರಿ ಟಿ.ಭೂಬಾಲನ್ ಕರೆ
ಸಂಸದ ರಮೇಶ ಜಿಗಜಿಣಗಿ ಅವರು ಮಾತನಾಡಿ, ಗಾಂಧೀಜಿ, ಶಾಸ್ತ್ರೀಜಿಯವರು ದೇಶಕ್ಕೆ ಅನನ್ಯ ಕೊಡುಗೆ ನೀಡಿದ್ದಾರೆ. ಇಂತಹ ಸಂದರ್ಭಗಳಲ್ಲಿ ಮಹಾತ್ಮರ ನೆನಯುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಬಡತನದಲ್ಲಿಯೇ ಹುಟ್ಟಿ ಬಡತನಲ್ಲಿಯೇ ಬೆಳೆದು ಕೊನೆಗೆ ಬಡತನದಲ್ಲಿಯೇ ನಿಧನರಾದ ಭಾರತದ ಏಕೈಕ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರೀಯವರಾಗಿದ್ದಾರೆ ಎಂದರು. ಈ ಸಂದರ್ಭದಲ್ಲಿ ಮಹಾತ್ಮಾ ಗಾಂಧೀಜಿ, ಲಾಲ್ಬಹಾದ್ದೂರ ಶಾಸ್ತ್ರಿ ವೃತ್ತಕ್ಕೆ ತೆರಳಿ ಪುಷ್ಪಾರ್ಪಣೆ ಮಾಡಲಾಯಿತು.
ಇದನ್ನೂ ಓದಿ: Vijayapur News | ಮಹಾತ್ಮ ಗಾಂಧಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರೀ ಅವರ ಕೊಡುಗೆ ಅಪಾರ – T. Bhubalan
ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ರಮೇಶ ಭೂಸನೂರ, ಬಿಜೆಪಿ ಮುಖಂಡರಾದ ವಿಜುಗೌಡ ಪಾಟೀಲ, ಮಹಾನಗರ ಪಾಲಿಕೆ ಸದಸ್ಯರಾದ ರಾಹುಲ ಜಾಧವ, ಮಲ್ಲಿಕಾರ್ಜುನ ಗಡಗಿ, ಎಸ್.ಎ. ಪಾಟೀಲ, ಜಿಲ್ಲೆಯ ಪ್ರಧಾನ ಕಾರ್ಯದರ್ಶಿಗಳಾದ ಈರಣ್ಣ ರಾವೂರ, ಮಳುಗೌಡ ಪಾಟೀಲ, ಸಾಬು ಮಾಶ್ಯಾಳ, ನಗರ ಅಧ್ಯಕ್ಷರಾದ ಶಂಕರ ಹೂಗಾರ, ಮಹಿಳಾ ಮೋರ್ಚಾ ನಗರ ಅಧ್ಯಕ್ಷರಾದ ಲಕ್ಷ್ಮೀ ಕನ್ನೊಳ್ಳಿ, ಓಬಿಸಿ ಮೋರ್ಚಾ ರಾಜ್ಯ ಉಪಾಧ್ಯಕ್ಷರಾದ ವಿವೇಕಾನಂದ ಡಬ್ಬಿ, ಸೇರಿದಂತೆ ಮುಂತಾದವರು ಉಪಸ್ಥಿತಿರದ್ದರು.






