ವಿಜಯಪುರ ಎ.24: ಜಿಲ್ಲಾಡಳಿತ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಜಿಲ್ಲಾ ಸರ್ವೇಕ್ಷಣಾಧಿಕಾರಿಗಳ ಸಹಯೋಗದಲ್ಲಿ ಇಂದು ನಗರದ ಜಿಲ್ಲಾ ಸವೇಕ್ಷಣಾಧಿಕಾರಿಗಳ ಕಾರ್ಯಾಲಯದಲ್ಲಿ ಮಾಧ್ಯಮ ಪ್ರತಿನಿಧಿಗಳಿಗಾಗಿ ಕೋವಿಡ್-19 ಮುನ್ನೆಚ್ಚರಿಕೆಯಾಗಿ ವೈದ್ಯಕೀಯ ತಪಾಸಣೆ ಅಂಗವಾಗಿ ಗಂಟಲು ದ್ರವ ಮಾದರಿಗಳನ್ನು ಸಂಗ್ರಹಿಸಲಾಯಿತು.
ಜಿಲ್ಲಾ ಕೇಂದ್ರದ 28 ಜನ ಮಾಧ್ಯಮ ಪ್ರತಿನಿಧಿಗಳ ಗಂಟಲು ದ್ರವ ಮಾದರಿಗಳನ್ನು ಸಂಗ್ರಹಿಸಲಾಗಿದ್ದು, ವೈದ್ಯಕೀಯ ಪರೀಕ್ಷೆಗೆ ಕಳುಹಿಸಲು ಕ್ರಮ ಕೈಗೊಳ್ಳಲಾಗಿದೆ.
ಅದರಂತೆ ನಾಳೆ ಬೆಳಿಗ್ಗೆ 11.30 ರಿಂದ ಸಂಜೆ 4.00 ಗಂಟೆಯವರೆಗೆ ಈ ಶಿಬಿರ ಆಯೋಜಿಸಲಾಗಿದ್ದು, ಜಿಲ್ಲಾ ಕೇಂದ್ರದಲ್ಲಿರುವ ಸಮೂಹ ಮಾಧ್ಯಮದ ಪ್ರತಿನಿಧಿಗಳು ಇದರ ಸದುಪಯೋಗ ಪಡೆಯಬಹುದಾಗಿದೆ. ಸರ್ಕಾರದ ನಿರ್ದೇಶನದಂತೆ ಜಿಲ್ಲಾ ಕೇಂದ್ರದ ಮಾಧ್ಯಮ ಪ್ರತಿನಿಧಿಗಳ ಗಂಟಲು ದ್ರವ ಮಾದರಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗುತ್ತಿದೆ.





