ವಿಜಯಪುರ: SSLC ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್

ವಿಜಯಪುರ ಜೂನ್ 23: ನಗರದ ಖ್ವಾಜಾ ನಗರದ ಅಂಜುಮನ್ ಶಾಲೆಯಲ್ಲಿ ಓದುತ್ತಿದ್ದ 16 ವರ್ಷದ ಎಸ್.ಎಸ್.ಎಲ್.ಸಿ ವಿದ್ಯಾರ್ಥಿನಿಗೆ ಇಂದು ಕೋವಿಡ್-19 ಸೋಂಕು ತಗುಲಿರುವುದು ದೃಢಪಟ್ಟಿದ್ದು, ಈ ರೋಗಿ ಸಂಖ್ಯೆ 9708 ಗೆ ನಿಗದಿತ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ ಅವರು ತಿಳಿಸಿದ್ದಾರೆ.

ಅದರಂತೆ ಈ ವಿದ್ಯಾರ್ಥಿನಿಗೆ ಪ್ರಸಕ್ತ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಅವಕಾಶ ನೀಡದೆ ಮುಂದಿನ ಎಸ್.ಎಸ್.ಎಲ್.ಸಿ ಪರೀಕ್ಷೆಯನ್ನು ಪ್ರಥಮ ಪರೀಕ್ಷೆ ಎಂದು ಪರಿಗಣಿಸಿ ಅವಕಾಶ ಕಲ್ಪಿಸಲಾಗುವುದೆಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.


advertisement

Share the Post:

ಇತ್ತೀಚಿನ ಸುದ್ದಿಗಳು

Senior Students' Association image

Vijayapura News : ಪ್ರಾಚೀನ ಕಾಲದಿಂದ ಪ್ರಸ್ತುತ ಕಾಲದವರೆಗೂ ಪಾವಿತ್ರತೆ ಉಳಿಸಿಕೊಂಡ ವೃತ್ತಿ ಶಿಕ್ಷಕರ ವೃತ್ತಿ; ಅಶೋಕ್ ಹಂಚಲಿ

ವಿಜಯಪುರ: ಬಸವೇಶ್ವರ ವಿದ್ಯಾವರ್ಧಕ ಸಂಘದ ಪ್ರೆಸಿಡೆನ್ಸಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಹಿರಿಯ

Read More »