Vijayapura News | ಸಂವಿಧಾನ ಧರ್ಮ ಪಾಲನೆಗೆ ಕುಲಪತಿ ಪ್ರೊ.ಬಿ.ಕೆ.ತುಳಸಿಮಾಲ ಕರೆ

ಸಂವಿಧಾನ ಧರ್ಮ image

ವಿಜಯಪುರ: ಸಂವಿಧಾನ ಒಂದು ಶ್ರೇಷ್ಠ ಧರ್ಮ. (ಸಂವಿಧಾನ ಧರ್ಮ) ಈ ಸಂವಿಧಾನ ಧರ್ಮವನ್ನು ನಾವೆಲ್ಲರೂ ಶ್ರದ್ಧೆ, ಪ್ರಾಮಾಣಿಕತೆಯಿಂದ ಪಾಲನೆ ಮಾಡಿದಾಗ ಮಾತ್ರ ದೇಶದ ಪ್ರಜಾಪ್ರಭುತ್ವ ಗಟ್ಟಿಯಾಗಿರುತ್ತದೆ ಎಂದು ಮಹಿಳಾ ವಿವಿಯ ಕುಲಪತಿ ಬಿ.ಕೆ.ತುಳಸಿಮಾಲ ಹೇಳಿದರು.

ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಡಾ.ಬಿ.ಆರ್.ಅಂಬೇಡ್ಕರ ಅಧ್ಯಯನ ಕೇಂದ್ರ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಘಟಕದ ವತಿಯಿಂದ ಮಂಗಳವಾರ ಆಯೋಜಿಸಿದ್ದ “ಭಾರತದ ಸಂವಿಧಾನ ದಿನಾಚರಣೆ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಇದನ್ನೂ ಓದಿ: Vijayapura News | ಭಾರತದ ಸಂವಿಧಾನ ವಿಶ್ವದ ಶ್ರೇಷ್ಠ ಸಂವಿಧಾನ | ಡಾ. ಆರ್.ಎಸ್. ಕಲ್ಲೂರಮಠ ಅಭಿಮತ

ಸಂವಿಧಾನ ಧರ್ಮ ಸಂವಿಧಾನದಲ್ಲಿರುವ ಪೀಠಿಕೆಯನ್ನು ನಾವು ಸರಿಯಾಗಿ ಗ್ರಹಿಸಿಕೊಂಡಾಗ ಅದು ನಮ್ಮ ವ್ಯಕ್ತಿತ್ವದ ವಿಕಾಸಕ್ಕೆ ಮತ್ತು ದೈನಂದಿನ ಚಟುವಟಿಕೆಗಳಿಗೆ ಮಾರ್ಗಸೂಚಿಯಾಗುತ್ತದೆ. ಸಂವಿಧಾನದ ಆಶಯಗಳು ಹಾಗೂ ಆಶೋತ್ತರಗಳನ್ನು ನಾವು ಹೇಗೆ ಅನುಸರಿಸುತ್ತೇವೆ ಮತ್ತು ಅದನ್ನು ಪಾಲಿಸುತ್ತೇವೆ ಎಂಬುದು ನಮಗೆ ಮುಖ್ಯವಾಗÀಬೇಕು ಎಂದರು.

ಸಂವಿಧಾನದ ಮೌಲ್ಯಗಳನ್ನು ಕೇವಲ ವಿದ್ಯಾರ್ಥಿಗಳಲ್ಲ, ಶಿಕ್ಷಕರೂ ಪಾಲಿಸಬೇಕು. ಭಾರತೀಯ ಪ್ರಜೆಗಳಾದ ನಾವೆಲ್ಲರೂ ಸಂವಿಧಾನದ ಆದರ್ಶಗಳನ್ನು ಅಳವಡಿಸಿಕೊಂಡು, ಅದರ ಮಾರ್ಗಸೂಚಿಗಳನ್ನು ಜೀವನದಲ್ಲಿ ಪಾಲಿಸುವ ಜವಾಬ್ದಾರಿಯನ್ನು ಹೊತ್ತಿರಬೇಕು. ಇದರಿಂದ ಮಾತ್ರ ನಾವು ಸಮಾನತೆ, ನ್ಯಾಯ ಮತ್ತು ಸ್ವಾತಂತ್ರ್ಯದಂತೆ ಸಂವಿಧಾನದಲ್ಲಿ ಹೊಂದಿರುವ ಮೂಲಭೂತ ಮೌಲ್ಯಗಳನ್ನು ಕಾಪಾಡಲು ಮತ್ತು ನಮ್ಮ ದೇಶದ ಪ್ರಜಾಪ್ರಭುತ್ವವನ್ನು ಸಶಕ್ತಗೊಳಿಸಲು ಸಾಧ್ಯವಾಗುತ್ತದೆ ಎಂದರು.

ಇದನ್ನೂ ಓದಿ: Vijayapura News | 2023ನೇ ಸಾಲಿನ ತೋಂಟದ ಸಿದ್ಧಲಿಂಗಶ್ರೀ ಪ್ರಶಸ್ತಿ | ರಾಜ್ಯದ ಐದು ಜನರಿಗೆ ಪುರಸ್ಕಾರ

ಕಾರ್ಯಕ್ರಮದಲ್ಲಿ ವಿವಿಯ ಕುಲಸಚಿವ ಶಂಕರಗೌಡ ಸೋಮನಾಳ ಸಂವಿಧಾನದ ಪೀಠಿಕೆಯನ್ನು ಬೋಧಿಸಿದರು. ಮೌಲ್ಯಮಾಪನ ಕುಲಸಚಿವ ಪ್ರೊ.ಎಚ್.ಎಂ.ಚಂದ್ರಶೇಖರ, ಡಾ.ಬಿ.ಆರ್.ಅಂಬೇಡ್ಕರ್ ಅಧ್ಯಯನ ಕೇಂದ್ರದ ನಿರ್ದೇಶಕ ಡಾ.ಸಂಜೀವಕುಮಾರ ಗಿರಿ ಮತ್ತು ವಿವಿಧ ವಿಭಾಗಗಳ ಮುಖ್ಯಸ್ಥರು, ಪ್ರಾಧ್ಯಾಪಕರು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಹಾಗೂ ಸಂಶೋಧನಾ ವಿದ್ಯಾರ್ಥಿನಿಯರು, ಸ್ನಾತಕ ಮತ್ತು ಸ್ನಾತಕೋತ್ತರ ವಿದ್ಯಾರ್ಥಿನಿಯರು ಭಾಗವಹಿಸಿ ಸಂವಿಧಾನದ ಪ್ರಸ್ತಾವನೆ ಓದಿ ಪ್ರತಿಜ್ಞೆ ಮಾಡುವ ಮೂಲಕ ಸಂವಿಧಾನಕ್ಕೆ ಗೌರವ ಸಲ್ಲಿಸಿದರು.

ಕಾರ್ಯಕ್ರಮವನ್ನು ದೈಹಿಕ ಶಿಕ್ಷಣ ವಿಭಾಗದ ಪ್ರಾಧ್ಯಾಪಕ ಡಾ.ಹನುಮಂತಯ್ಯ ಪೂಜಾರಿ ನಿರೂಪಿಸಿ ವಂದಿಸಿದರು.
ರಾಜ್ಯಶಾಸ್ತ್ರ ವಿಭಾಗ: ರಾಜ್ಯಶಾಸ್ತ್ರ ವಿಭಾಗ ಹಾಗೂ ಎನ್.ಎಸ್.ಎಸ್.ಸ್ನಾತಕ. ಘಟಕದ ವತಿಯಿಂದ ಮಂಗಳವಾರ ಆಯೋಜಿಸಿದ್ದ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಸಂವಿಧಾನದ ಪೀಠಿಕೆಯನ್ನು ಬೋಧಿಸಿ ಪ್ರತಿಜ್ಞಾ ವಿಧಿ ಸ್ವೀಕರಿಸಲಾಯಿತು.

ಕಾರ್ಯಕ್ರಮದಲ್ಲಿ ಮಹಿಳಾ ವಿವಿಯ ಮಹಿಳಾ ಅಧ್ಯಯನ ವಿಭಾಗದ ಮುಖ್ಯಸ್ಥೆ ಪ್ರೊ.ಲಕ್ಷ್ಮೀದೇವಿ ವೈ, ಸಮಾಜಕಾರ್ಯ ಅಧ್ಯಯನ ವಿಭಾಗದ ಸಹ-ಪ್ರಾಧಾಪಕ ಡಾ.ರಮೇಶ, ಎಂ. ಸೋನಕಾಂಬಳೆ, ರಾಜ್ಯಶಾಸ್ತ್ರ ವಿಭಾಗದ ಉಪನ್ಯಾಸಕ ಡಾ.ಯಲ್ಲಪ್ಪ ಕೊಂಬಿನೂರ್, ಡಾ.ಬಸಪ್ಪ ಮಾದರ, ವಿದ್ಯಾರ್ಥಿನಿಯರು, ಸಂಶೋಧನಾ ವಿದ್ಯಾರ್ಥಿನಿಯರು ಹಾಗೂ ಮತ್ತಿತರು ಉಪಸ್ಥಿತರಿದ್ದರು.


Share the Post:

ಇತ್ತೀಚಿನ ಸುದ್ದಿಗಳು

Senior Students' Association image

Vijayapura News : ಪ್ರಾಚೀನ ಕಾಲದಿಂದ ಪ್ರಸ್ತುತ ಕಾಲದವರೆಗೂ ಪಾವಿತ್ರತೆ ಉಳಿಸಿಕೊಂಡ ವೃತ್ತಿ ಶಿಕ್ಷಕರ ವೃತ್ತಿ; ಅಶೋಕ್ ಹಂಚಲಿ

ವಿಜಯಪುರ: ಬಸವೇಶ್ವರ ವಿದ್ಯಾವರ್ಧಕ ಸಂಘದ ಪ್ರೆಸಿಡೆನ್ಸಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಹಿರಿಯ

Read More »