ಸ್ವಸ್ಥ ಸಮಾಜಕ್ಕೆ ಪೌರಕಾರ್ಮಿಕರು ಪ್ರಮುಖ ಕಾರಣ

ವಿಜಯಪುರ:ಸೆ.23: ಸ್ವಸ್ಥ ಸಮಾಜಕ್ಕೆ ಪೌರಕಾರ್ಮಿಕರು ಪ್ರಮುಖ ಕಾರಣವಾಗಿದ್ದು, ಸಮಾಜಕ್ಕೆ ಇವರ ಕೊಡುಗೆ ಅಪಾರವಾಗಿದೆ ಎಂದು ಜಿಲ್ಲಾಧಿಕಾರಿ ಪಿ ಸುನೀಲ್ ಕುಮಾರ್ ಅವರು ಹೇಳಿದರು.

ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಎಂದು ನಗರಾಭಿವೃದ್ಧಿ ಇಲಾಖೆ ಜಿಲ್ಲಾಡಳಿತ ಹಾಗೂ ಮಹಾನಗರಪಾಲಿಕೆಗಳ ಸಂಯುಕ್ತಾಶ್ರಯದಲ್ಲಿ ಪೌರಕಾರ್ಮಿಕರ ದಿನಾಚರಣೆ ಅಂಗವಾಗಿ ನಡೆದ ಸನ್ಮಾನ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಅದರಂತೆ ಪೌರಕಾರ್ಮಿಕರಿಗೆ ಸರ್ಕಾರದಿಂದ ಸಿಗಬಹುದಾದ ಮನೆ ಸೇರಿದಂತೆ ಶಿಕ್ಷಣ, ಸಾಲ, ಆರೋಗ್ಯ ಹಾಗೂ ಇನ್ನಿತರ ಸೌಲಭ್ಯಗಳನ್ನು ಒದಗಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸಲಾಗುವುದು ಎಂದರು.

ಅದರಲ್ಲೂ ವಿಶೇಷವಾಗಿ ಪೌರ ಕಾರ್ಮಿಕರ ಆರೋಗ್ಯ ಹಾಗೂ ಅವರ ಮಕ್ಕಳ ಶಿಕ್ಷಣಕ್ಕಾಗಿ ಸಮೀಕ್ಷೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು. ಪೌರಕಾರ್ಮಿಕರು ಕೂಡ ತಮ್ಮ ಕೆಲಸವನ್ನು ಕರ್ತವ್ಯದಂತೆ ಭಾವಿಸಿ ಪ್ರಾಮಾಣಿಕತೆಯ ಮೂಲಕ ವೃತ್ತಿ ಘನತೆಯನ್ನು ಹೆಚ್ಚಿಸಬೇಕು ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಪೌರಕಾರ್ಮಿಕರನ್ನು ಸನ್ಮಾನಿಸಲಾಯಿತು ಕಾರ್ಯಕ್ರಮದಲ್ಲಿ ಮಹಾನಗರಪಾಲಿಕೆ ಆಯುಕ್ತ ವಿಜಯ್ ಮೆಕ್ಕಳಕಿ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಈರಪ್ಪ ಆಶಾಪುರೆ ಸೇರಿದಂತೆ ಇನ್ನಿತರ ಅಧಿಕಾರಿಗಳು ಹಾಗೂ ಪೌರಕಾರ್ಮಿಕರು ಉಪಸ್ಥಿತರಿದ್ದರು.


Share the Post:

ಇತ್ತೀಚಿನ ಸುದ್ದಿಗಳು

Senior Students' Association image

Vijayapura News : ಪ್ರಾಚೀನ ಕಾಲದಿಂದ ಪ್ರಸ್ತುತ ಕಾಲದವರೆಗೂ ಪಾವಿತ್ರತೆ ಉಳಿಸಿಕೊಂಡ ವೃತ್ತಿ ಶಿಕ್ಷಕರ ವೃತ್ತಿ; ಅಶೋಕ್ ಹಂಚಲಿ

ವಿಜಯಪುರ: ಬಸವೇಶ್ವರ ವಿದ್ಯಾವರ್ಧಕ ಸಂಘದ ಪ್ರೆಸಿಡೆನ್ಸಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಹಿರಿಯ

Read More »