ಸ್ವಾತಂತ್ರ್ಯೋತ್ಸವ ದಿನಾಚರಣೆ: ಜಿಲ್ಲೆಯ ಕೊಡುಗೆ ಅನನ್ಯ MB Patil

ಫುಡ್ ಪಾರ್ಕ್ image

ವಿಜಯಪುರ: ಸಾಮಾಜಿಕ ನ್ಯಾಯ, ಶೈಕ್ಷಣಿಕ ಅಭಿವೃದ್ಧಿ ಮತ್ತು ಮಹಿಳಾ ಸಬಲೀಕರಣ ಒಳಗೊಂಡಂತೆ ರಾಜ್ಯದ ಸಮಗ್ರ ಅಭಿವೃದ್ಧಿಗೆ ಕಂಕಣಬದ್ಧವಾಗಿರುವ ನಮ್ಮ ಸರ್ಕಾರವು ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀಯುತ ಸಿದ್ದರಾಮಯ್ಯನವರ ನೇತೃತ್ವದಲ್ಲಿ ಜನಪರ ಕಾಳಜಿಯೊಂದಿಗೆ ಕಾರ್ಯನಿರ್ವಹಿಸುತ್ತಿದೆ. ದೇಶದಾದ್ಯಂತ ಸಂಚಲನ ಉಂಟುಮಾಡಿರುವ ನಮ್ಮ ಸರ್ಕಾರದ ಗ್ಯಾರಂಟಿ ಯೋಜನೆಗಳು ಫಲಾನುಭವಿಗಳ ಬದುಕಿನಲ್ಲಿ ಬೆಳಕು ಮತ್ತು ಭರವಸೆ ತುಂಬುವಲ್ಲಿ ಸಫಲವಾಗಿವೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ದಿ ಖಾತೆ ಸಚಿವರಾದ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ಹೇಳಿದರು. ಸ್ವಾತಂತ್ರ್ಯೋತ್ಸವ ದಿನಾಚರಣೆ

ಗುರುವಾರ ನಗರದ ಡಾ.ಬಿ.ಆರ್.ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಸ್ವಾತಂತ್ರ‍್ಯ ದಿನಾಚರಣೆ ಅಂಗವಾಗಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿ, ನಾಡಿನ- ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಜಿಲ್ಲೆ ಸೇರಿದಂತೆ ರಾಷ್ಟ್ರದ ವಿವಿಧ ಮಹನೀಯರನ್ನು ಸ್ಮರಿಸಿ ಸಂದೇಶ ನೀಡಿ, ಮಾತನಾಡಿದ ಅವರು, ವಿಜಯಪುರ ನಗರದಲ್ಲಿ ಜಿಲ್ಲಾ ಕಚೇರಿಗಳ ಸಂಕೀರ್ಣ ಅನುಮೋದನೆಯಾಗಿದ್ದು, ಸರ್ಕಾರದಿಂದ 49 ಕೋಟಿ ಅನುದಾನಕ್ಕೆ ಆಡಳಿತಾತ್ಮಕ ಅನುಮೋದನೆಯಾಗಿದೆ. ಅಂದಾಜು ಪತ್ರಿಕೆ ಅನುಮೋದನೆ ಪಡೆದುಕೊಂಡು ಅತೀಶೀಘ್ರದಲ್ಲಿಯೇ ಕಾಮಗಾರಿಯನ್ನು ಪ್ರಾರಂಭಿಸಲಾಗುವುದು ಎಂದು ಅವರು ಹೇಳಿದರು.

ಇದನ್ನೂ ಓದಿ: ಬಿಪಿಎಲ್ ಪಡಿತರ ಚೀಟಿ: ಅನರ್ಹರು ಎಷ್ಟು ಗೋತ್ತಾ?

ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಇಲಾಖೆ ಸಿ.ಎಸ್.ಆರ್. ಅನುದಾನದಲ್ಲ್ಲಿ ವಿಜಯಪುರ ನಗರದಲ್ಲಿರುವ ತಾಜ್‌ಬಾವಡಿ, ಗೋಲಗುಮ್ಮಟ, ಬಬಲೇಶ್ವರ ತಾಲೂಕಿನಲ್ಲಿರುವ ಮಮದಾಪುರ ಕೆರೆ ಮತ್ತು ಅದರ ಸುತ್ತಲಿನ ಅರಣ್ಯ ಪ್ರದೇಶ, ಕುಮಟಗಿಯಲ್ಲಿರುವ ಬೇಸಿಗೆ ಅರಮನೆ, ಕಪ್ಪು ತಾಜ್‌ಮಹಲ್ ಎಂದು ಪ್ರಸಿದ್ಧಿಯಾಗಿರುವ ಇಬ್ರಾಹಿಂ ರೋಜಾ ಹಾಗೂ ಇನ್ನಿತರ ಸ್ಮಾರಕಗಳನ್ನು ಮತ್ತು ಅವುಗಳ ಆವರಣದಲ್ಲಿರುವ ಉದ್ಯಾನವನಗಳನ್ನು ಅಭಿವೃದ್ಧಿ ಪಡಿಸುವ ಮತ್ತು ಸೌಂದರ್ಯೀಕರಣಗೊಳಿಸುವ ಕಾರ್ಯವನ್ನು ಕೈಗೆತ್ತಿಕೊಳ್ಳಲಾಗಿದೆ ಎಂದು ಹೇಳಿದರು. ಸ್ವಾತಂತ್ರ್ಯೋತ್ಸವ ದಿನಾಚರಣೆ

ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಲ್ಲೊಂದಾದ ಅನ್ನಭಾಗ್ಯ ಯೋಜನೆಯಡಿ 5 ಕೆ.ಜಿ ಅಕ್ಕಿ ಹಾಗೂ ಇನ್ನೂ 5 ಕೆ.ಜಿ ಬದಲಾಗಿ ನೀಡುತ್ತಿರುವ ತಲಾ ರೂಪಾಯಿ 170 ರ ಲೆಕ್ಕಾಚಾರದಲ್ಲಿ ಜೂನ್ ಮಾಹೆಯ ಅಂತ್ಯಕ್ಕೆ 15,82,022 ಫಲಾನುಭವಿಗಳಿಗೆ 26.10 ಕೋಟಿ ಮೊತ್ತವನ್ನು ಡಿ.ಬಿ.ಟಿ ಮೂಲಕ ಜಮೆ ಮಾಡಲಾಗಿದೆ ಎಂದು ಹೇಳಿದರು.

Remove term: ಸ್ವಾತಂತ್ರ್ಯೋತ್ಸವ ದಿನಾಚರಣೆ ಸ್ವಾತಂತ್ರ್ಯೋತ್ಸವ ದಿನಾಚರಣೆ image

ಲಿಂಗ ತಾರತಮ್ಯ ಮೀರಿ ಮಹಿಳೆಯರು ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ಸಶಕ್ತರಾಗಬೇಕಬೇಕೆಂಬ ಡಾ.ಬಾಬಾಸಾಹೇಬ ಅಂಬೇಡ್ಕರ್ ಅವರ ಆಶಯದಂತೆ ನಮ್ಮ ಸರ್ಕಾರ ಮಹಿಳಾ ಸಬಲೀಕರಣಕ್ಕಾಗಿ ಶಕ್ತಿ ಯೋಜನೆಯನ್ನು ರೂಪಿಸಿದೆ. ಶಕ್ತಿ ಯೋಜನೆಯಡಿ ಇಲ್ಲಿಯವರೆಗೂ 732 ಲಕ್ಷ ವಯಸ್ಕ ಮಹಿಳೆಯರ ಟಿಕೆಟ್‌ಗಳು ಹಾಗೂ 20 ಲಕ್ಷ ಬಾಲಿಕೆಯರ ಟಿಕೆಟ್‌ಗಳು ಸೇರಿ ಒಟ್ಟು 750 ಲಕ್ಷ ಮಹಿಳಾ ಪ್ರಯಾಣಿಕರು ವಿಜಯಪುರ ವಿಭಾಗದ ಸಾರಿಗೆ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಿದ್ದಾರೆ. ಈ ಪ್ರಯಾಣಕ್ಕಾಗಿ ಒಟ್ಟ್ಟು 23,153 ಲಕ್ಷ ರೂಪಾಯಿಗಳ ಮೌಲ್ಯದ ಉಚಿತ ಟಿಕೆಟ್‌ಗಳನ್ನು ವಿತರಣೆ ಮಾಡಲಾಗಿದೆ ಎಂದು ಹೇಳಿದರು.

ಇದನ್ನೂ ಓದಿ: ಬಿ.ಎಸ್.ಪಾಟೀಲ: ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಿ.

ಗೃಹಲಕ್ಷ್ಮೀ ಯೋಜನೆಯಡಿ ಕುಟುಂಬದ ಯಜಮಾನಿ ಮಹಿಳೆಯ ಖಾತೆಗೆ ಪ್ರತಿ ತಿಂಗಳು 2000 ರೂಪಾಯಿಗಳ ಮೊತ್ತದ ಹಣವನ್ನು ಡಿ.ಬಿ.ಟಿ. ಮೂಲಕ ಜಮೆ ಮಾಡಲಾಗುತ್ತಿದೆ. ಜನವರಿ -2024 ರಿಂದ ಮೇ-2024 ರವರೆಗಿನ ಅವಧಿಯಲ್ಲಿ ಒಟ್ಟು 4,84,632 ಫಲಾನುಭವಿಗಳಿಗೆ 472 ಕೋಟಿ ಮೊತ್ತದ ಹಣವನ್ನು ಡಿ.ಬಿ.ಟಿ ಮೂಲಕ ಜಮೆ ಮಾಡಲಾಗಿದೆ. ಜೂನ್ ಮತ್ತು ಜುಲೈ 2024 ರ ಡಿ.ಬಿ.ಟಿ ಪ್ರಕ್ರಿಯೆಯು ಪ್ರಗತಿಯಲ್ಲಿದೆ. ಉಚಿತ ವಿದ್ಯುತ್ ಪೂರೈಸುವ ಗೃಹಜ್ಯೋತಿ ಯೋಜನೆಯಡಿ ಜನವರಿ-2024 ರಿಂದ ಜುಲೈ-2024 ರವರೆಗಿನ ಅವಧಿಯಲ್ಲಿ ಒಟ್ಟು 4 ಲಕ್ಷ 30 ಸಾವಿರ ಫಲಾನುಭವಿಗಳಿಗೆ 11,343 ಲಕ್ಷ ರೂ.ಮೊತ್ತದ ಉಚಿತ ವಿದ್ಯುತ್ತನ್ನು ಪೂರೈಸಲಾಗಿದೆ ಎಂದು ಹೇಳಿದರು.

Remove term: ಸ್ವಾತಂತ್ರ್ಯೋತ್ಸವ ದಿನಾಚರಣೆ ಸ್ವಾತಂತ್ರ್ಯೋತ್ಸವ ದಿನಾಚರಣೆ image

ಯುವನಿಧಿ ಯೋಜನೆಯಡಿ ಇದುವರೆಗೆ 8,100 ಅಭ್ಯರ್ಥಿಗಳು ನೋಂದಣಿಯಾಗಿದ್ದು, ಪದವೀಧರರು ಹಾಗೂ ಡಿಪ್ಲೋಮಾ ಅಭ್ಯರ್ಥಿಗಳು ಸೇರಿ 2 ಕೋಟಿ 63 ಲಕ್ಷ ಮೊತ್ತವನ್ನು ಡಿ.ಬಿ.ಟಿ ಮೂಲಕ ಫಲಾನುಭವಿಗಳ ಖಾತೆಗಳಿಗೆ ಜಮೆ ಮಾಡಲಾಗಿದೆ. ರಾಜ್ಯದಲ್ಲಿಯೇ ಹೆಚ್ಚಿನ ಸಂಖ್ಯೆಯಲ್ಲಿ 2,76,064 ರೈತರಿಗೆ 442.20 ಕೋಟಿ ಮೊತ್ತದ ಬರ ಪರಿಹಾರ ಧನವನ್ನು ರೈತರ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಜಮೆ ಮಾಡಲಾಗಿದೆ.

ಪ್ರಸಕ್ತ ಸಾಲಿನ ಮಳೆಗಾಲದಲ್ಲಿ ಸುರಿದ ಮಳೆಯಿಂದಾಗಿ ಪ್ರಕೃತಿ ವಿಕೋಪದಲ್ಲಿ 7 ಜನರು ದುರಂತಕ್ಕೀಡಾಗಿದ್ದು ಇವರ ಕುಟುಂಬಗಳಿಗೆ ತಲಾ 5 ಲಕ್ಷ ರೂಪಾಯಿಗಳ ಪರಿಹಾರವನ್ನು ವಿತರಿಸಲಾಗಿದೆ. ಮಳೆಯ ಅನಾಹುತದಿಂದಾಗಿ 95 ಜಾನುವಾರುಗಳ ಜೀವಹಾನಿಯಾಗಿದ್ದು, ಈ ಬಾಬತ್ತಿನಲ್ಲಿ 15 ಲಕ್ಷ ರೂಪಾಯಿಗಳ ಪರಿಹಾರ ಧನವನ್ನು ವಿತರಿಸಲಾಗಿದೆ. 129.20 ಹೆಕ್ಟೇರ್ ಪ್ರದೇಶದಲ್ಲಿ ಬೆಳೆದು ನಿಂತಿದ್ದ ತೋಟಗಾರಿಕೆ ಬೆಳೆಗಳು ಹಾನಿಗೀಡಾಗಿದ್ದು ಇದಕ್ಕಾಗಿ 323 ರೈತರ ಖಾತೆಗಳಿಗೆ ನೇರವಾಗಿ ಹಣ ಜಮೆ ಮಾಡಲಾಗುವುದು ಎಂದು ಅವರು ಹೇಳಿದರು.

ವಿಜಯಪುರ ಜಿಲ್ಲೆಯ ನಿಡಗುಂದಿ ಪಟ್ಟಣದಲ್ಲಿ 18 ಕೋಟಿ ರೂ. ವೆಚ್ಚದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ ಕಾಮಗಾರಿ ಪ್ರಾರಂಭಿಸಲಾಗಿದೆ. ಕರ್ನಾಟಕವು ಸ್ಟಾರ್ಟಪ್ಸ್, ಸಂಶೋಧನೆ, ಹೂಡಿಕೆ, ಬಂಡವಾಳ ಆಕರ್ಷಣೆ, ಉದ್ಯಮಕ್ಕೆ ಸಂಬAಧಿಸಿದ ಹೊಸ-ಹೊಸ ನೀತಿಗಳು ಹೀಗೆ ಎಲ್ಲದರಲ್ಲೂ ಇಡೀ ದೇಶಕ್ಕೆ ಪ್ರಥಮ ಸ್ಥಾನದಲ್ಲಿದೆ. ಕಳೆದ ಒಂದೂವರೆ ವರ್ಷದಲ್ಲಿ ನಾನು ನಮ್ಮ ತವರು ಜಿಲ್ಲೆಗೆ ಹಲವು ಯೋಜನೆಗಳನ್ನು ತಂದಿದ್ದು, ಜಾರಿಯ ವಿವಿಧ ಹಂತದಲ್ಲಿವೆ.

ಇದನ್ನೂ ಓದಿ: Achievement: ಶಿಸ್ತಿನಿಂದ ಸಾಧನೆ ಮಾಡಲು ಸಾಧ್ಯ.

ಇವೆಲ್ಲವೂ ಜಿಲ್ಲೆಯಲ್ಲಿ ಉದ್ಯೋಗ ಸೃಷ್ಟಿ, ಆರ್ಥಿಕ ಅಭಿವೃದ್ದಿ, ವಲಸೆ ನಿಯಂತ್ರಣ, ಕೃಷಿಗೆ ಪೂರಕವಾದ ವ್ಯಾಪಾರ ವಹಿವಾಟು ಇತ್ಯಾದಿಗಳಿಗೆ ನಿರ್ಣಾಯಕ ನೆರವು ನೀಡಲಿವೆ. ಕೆ.ಐ.ಎ.ಡಿ.ಬಿ ಅಲಿಯಾಬಾದ ಹಂತ-3 ಹೊಸ ಕೈಗಾರಿಕಾ ಪ್ರದೇಶ ಸ್ಥಾಪನೆಗಾಗಿ 1870 ಎಕರೆ ಜಮೀನು ಭೂಸ್ವಾಧೀನಪಡಿಸಿಕೊಳ್ಳುವ ಪ್ರಕ್ರಿಯೆಯು ಪ್ರಗತಿಯಲ್ಲಿದೆ ಎಂದು ಹೇಳಿದರು.

ಕೈಗಾರಿಕೆ ಅಭಿವೃದ್ಧಿಗಾಗಿ ಒಟ್ಟು 3239 ಎಕರೆ ಕೈಗಾರಿಕಾ ಪ್ರದೇಶ ಅಭಿವೃದ್ಧಿಗಾಗಿ ಕ್ರಮವಹಿಸಲಾಗಿದ್ದು, ಈಗಾಗಲೆ 245 ಕೋಟಿ ರೂಪಾಯಿಗಳ ಬಂಡವಾಳ ಹೂಡಿ ಕೊಲ್ಹಾರ ತಾಲೂಕಿನಲ್ಲಿ 614 ಎಕರೆ ಕೈಗಾರಿಕಾ ಪ್ರದೇಶವನ್ನು ಅಭಿವೃದ್ಧಿ ಪಡಿಸಲಾಗಿದ್ದು, ಹೊಸ ಕೈಗಾರಿಕೆಗಳ ಸ್ಥಾಪನೆಗಾಗಿ 411 ನಿವೇಶನಗಳು ಲಭ್ಯವಿರುತ್ತವೆ. ಅದರಂತೆಯೇ ಇಂಡಿ ತಾಲೂಕಿನ ಬೂದಿಹಾಳ ಹಾಗೂ ಮುದ್ದೇಬಿಹಾಳ ತಾಲೂಕಿನಲ್ಲಿ ಕ್ರಮವಾಗಿ 19 ಹಾಗೂ 06 ಎಕರೆ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಹಂತದಲ್ಲಿದೆ ಎಂದು ಹೇಳಿದರು.


Share the Post:

ಇತ್ತೀಚಿನ ಸುದ್ದಿಗಳು