ಹೊರಗುತ್ತಿಗೆ ನೌಕರರ ವೇತನದಲ್ಲಿ ಲೋಪವಾದಲ್ಲಿ ಶಿಸ್ತು ಕ್ರಮ : ತಿಮ್ಮಾಪೂರ

ಹೊರಗುತ್ತಿಗೆ ನೌಕರ image

ಬಾಗಲಕೋಟೆ: ಹೊರಗುತ್ತಿಗೆ ನೌಕರ ರಿಗೆ ಸರಿಯಾದ ವೇತನ, ವಿನಾಕಾರಣ ನೌಕರಿಯಿಂದ ತೆಗೆದು ಹಾಕುವುದಾಗಿ ಹೆದರಿಸುವುದು, ಕಿರುಕುಳ ನೀಡುವುದು ಕಂಡುಬಂದಲ್ಲಿ ಅಧಿಕಾರಿಗಳನ್ನೇ ನೇರ ಹೊಣೆಗಾರರನ್ನಾಗಿ ಮಾಡಲಾಗುವುದೆಂದು ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪೂರ ಸೂಚಿಸಿದರು.

ಜಿಲ್ಲಾ ಪಂಚಾಯತ ಸಭಾಭವನದಲ್ಲಿ ಕಾರ್ಮಿಕ ಇಲಾಖೆ ವತಿಯಿಂದ ಮಂಗಳವಾರ ಸರಕಾರದ ವಿವಿಧ ಇಲಾಖೆಗಳು ಹಾಗೂ ವಿವಿಧ ನಿಗಮ ಮಂಡಳಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹೊರಗುತ್ತಿಗೆ ನೌಕರರಿಗೆ ದೊರಕುವ ಶಾಸನಾತ್ಮಕ ಸೌಲಭ್ಯಗಳ ಕುರಿತು ಅರಿವು ಮೂಡಿಸುವ ಕಾರ್ಯಕ್ರಮನ್ನು ಉದ್ಘಾಟಿಸಿ ಮಾತನಾಡಿದ ಅವರು ಜಿಲ್ಲೆಯ ಎಲ್ಲ ಹೊರಗುತ್ತಿಗೆ ಸಂಸ್ಥೆಗಳು ನೀಡುತ್ತಿರುವ ಹೊರಗುತ್ತಿಗೆ ನೌಕರರ ಮಾಹಿತಿ ಪಡೆದು ಸಮಗ್ರವಾದ ವರದಿಯನ್ನು ಒಂದು ತಿಂಗಳಲ್ಲಿ ಸಲ್ಲಿಸುವಂತೆ ಸೂಚನೆ ನೀಡಿದರು.

ಇದನ್ನೂ ಓದಿ: ಸಿಎಂ ಸಿದ್ದರಾಮಯ್ಯ ರಾಜಿನಾಮೆಗೆ ಆಗ್ರಹಿಸಿ ಬಿಜೆಪಿಯಿಂದ ಪ್ರತಿಭಟನೆ : ರಾಜಿನಾಮೇ ನೀಡುವರೆಗೂ ಹೋರಾಟ

ಹೊರಗುತ್ತಿಗೆ ನೌಕರ ರಿಗೆ ವೇತನ ಪಾವತಿ ಕಾಯ್ದೆ, ಕನಿಷ್ಟ ವೇತನ ಕಾಯ್ದೆ ಹಾಗೂ ಅನ್ವಯಿಸುವ ಇನ್ನೀತರ ಕಾರ್ಮಿಕ ಕಾಯ್ದೆಗಳ ಸರಿಯಾಗಿ ಅನುಷ್ಠಾನಗೊಳಿಸಲು ಸಂಬಂಧಪಟ್ಟ ಅಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಕೆಲಸ ಮಾಡುವ ಹೊರಗುತ್ತಿಗೆ ನೌಕರರಿಗೆ ಸರಿಯಾಗಿ ವೇತನ ಪಾವತಿ, ಇಎಸ್‍ಐ, ಇಪಿಎಫ್ ಕಡಿತಗೊಳಿಸುತ್ತಿರುವ ಬಗ್ಗೆ ಪ್ರತಿ ತಿಂಗಳು ಮಾಹಿತಿ ಪಡೆಯಬೇಕು. ಹೊರಗುತ್ತಿಗೆ ನೌಕರರು ಸರಕಾರದ ಒಂದು ಭಾಗವಾಗಿದ್ದು, ಸಂಕಷ್ಟದಲ್ಲಿದ್ದರು ಅವರನ್ನು ದುಡಿಸಿಕೊಂಡು ಸರಿಯಾಗಿ ವೇತನ ನೀಡದಿದ್ದರೆ ಹೇಗೆ ಎಂದು ಪ್ರಶ್ನಿಸಿದರು.

ಅಧಿಕಾರಿಗಳು ಹೊರಗುತ್ತಿಗೆ ನೌಕರರಿಗೆ ನೀಡುತ್ತಿರುವ ವೇತನದ ಬಗ್ಗೆ ಗಮನ ಹರಿಸುತ್ತಿಲ್ಲ. ಕೆಲಸ ಮಾಡಿಸಿಕೊಳ್ಳುವುದು ಅಷ್ಟೇ ಅಲ್ಲ ಅವರಿಗೆ ಸರಿಯಾಗಿ ಹೊಗುತ್ತಿಗೆ ಸಂಸ್ಥೆಯವರು ವೇತನ ಪಾವತಿಸುತ್ತಿರುವ ಬಗ್ಗೆ ಗಮನ ಹರಿಸದೇ ಇರುವದರಿಂದ ಇಂತಹ ಸಮಸ್ಯೆಗಳು ಉಂಟಾಗುತ್ತಿದೆ. ಆದ್ದರಿಂದ ಈ ಕುರಿತು ನನ್ನ ಬಳಿಗೆ ದೂರುಗಳು ಬಂದಲ್ಲ ಸಂಬಂದಪಟ್ಟ ಅಧಿಕಾರಿಗಳನ್ನೇ ನೇರ ಹೊಣೆಗಾರರನ್ನಾಗಿ ಮಾಡಿ ಶಿಸ್ತುಕ್ರಮ ಕೈಗೊಳ್ಳಲಾಗುವುದು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಇದನ್ನೂ ಓದಿ: ವಿಜಯಪುರ ನಗರದಲ್ಲಿ ಜಲಾವೃತವಾದ ಪ್ರದೇಶಗಳಿಗೆ ಅಗತ್ಯ ಸೌಕರ್ಯ ಒದಗಿಸಿ | ಜಿಲ್ಲಾಧಿಕಾರಿ ಟಿ.ಭೂಬಾಲನ್

ಬೀಳಗಿ ಶಾಸಕ ಜೆ.ಟಿ.ಪಾಟೀಲ ಮಾತನಾಡಿ ತಾತ್ಕಾಲಿಕವಾಗಿ ದುಡಿಯುವ ನೌಕರರಿಗೆ ಕಿರುಕುಳ ನೀಡುತ್ತಿರುವ ಬಗ್ಗೆ ತಿಳಿದಿದ್ದು, ಸಂಬಂಧಿಸಿದ ಅಧಿಕಾರಿಗಳು ಮೌನ ಜಾನತನ ತೋರುತ್ತಿದ್ದಾರೆ. ಅಲ್ಲದೇ ಕಾರ್ಮಿಕ ಇಲಾಖೆಯ ಅಧಿಕಾರಿಗಳು ಈ ಬಗ್ಗೆ ಹೆಚ್ಚಿನ ಗಮನ ಹರಿಸದೇ ಕರ್ತವ್ಯದಲ್ಲಿ ನಿರ್ಲಕ್ಷ ತೋರುತ್ತಿದ್ದು, ಲೋಪ ಎಸಗಿದ ಅಧಿಕಾರಿಗಳ ಮೇಲೆ ಶಿಸ್ತು ಕ್ರಮಕ್ಕೆ ಸಚಿವರಲ್ಲಿ ಮನವಿ ಮಾಡಿಕೊಂಡರು.

ಸಭೆಯಲ್ಲಿ ಬಾಗಲಕೋಟೆ ಶಾಸಕ ಹಾಗೂ ಬಿಟಿಡಿಎ ಅದ್ಯಕ್ಷ ಎಚ್.ವಾಯ್.ಮೇಟಿ, ಬಾದಾಮಿ ಶಾಸಕ ಭೀಮಸೇನ ಚಿಮ್ಮನಕಟ್ಟಿ, ಜಿಲ್ಲಾಧಿಕಾರಿ ಜಾನಕಿ ಕೆ.ಎಂ, ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ, ಯುಕೆಪಿ ಮಹಾವ್ಯವಸ್ಥಾಪಕ ಗಿತ್ತೆ ಮಾಧವ ವಿಠಲರಾವ್ ಸೇರಿದಂತೆ ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮದ ಪೂರ್ವದಲ್ಲಿ ಸಾಂಕೇತಿಕವಾಗಿ ಕಟ್ಟಡ ಕಾರ್ಮಿಕರಿಗೆ ಸಲಕರಣೆಗಳ ಕಿಟ್‍ಗಳನ್ನು ವಿತರಣೆ ಮಾಡಲಾಯಿತು.


Share the Post:

ಇತ್ತೀಚಿನ ಸುದ್ದಿಗಳು

Senior Students' Association image

Vijayapura News : ಪ್ರಾಚೀನ ಕಾಲದಿಂದ ಪ್ರಸ್ತುತ ಕಾಲದವರೆಗೂ ಪಾವಿತ್ರತೆ ಉಳಿಸಿಕೊಂಡ ವೃತ್ತಿ ಶಿಕ್ಷಕರ ವೃತ್ತಿ; ಅಶೋಕ್ ಹಂಚಲಿ

ವಿಜಯಪುರ: ಬಸವೇಶ್ವರ ವಿದ್ಯಾವರ್ಧಕ ಸಂಘದ ಪ್ರೆಸಿಡೆನ್ಸಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಹಿರಿಯ

Read More »