ಇಂಡಿ ತಾಲೂಕು ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷದಿಂದ ಸಾವು: ವೈದ್ಯರು-ಸಂಬಂಧಿಕರ ನಡುವೆ ವಾಗ್ವಾದ

ವಿಜಯಪುರ ಮೇ 07: ಇಂಡಿ ತಾಲೂಕು ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷದಿಂದ ರೋಗಿ ಸಾವಿಗೀಡಾಗಿದ್ದಾನೆ ಎಂದು ಆರೋಪಿಸಿ, ಮೃತರ ಸಂಬಂಧಿಕರು ವೈದ್ಯರೊಂದಿಗೆ ವಾಗ್ವಾದ ನಡೆಸಿದ್ದಾರೆ.

ನಿಮ್ಮ ಪೇಶೆಂಟ್ ಸಿರಿಯಸ್ ಇದೆ. ಬದುಕುವುದಿಲ್ಲ ಎಂದು ರೋಗಿ ಹಾಗೂ ಸಂಬಂಧಿಕರಲ್ಲಿ ಅಧೈರ್ಯ ತುಂಬುತ್ತಿದ್ದಾರೆ ಎಂದು ಆರೋಪ ಮಾಡಿದ್ದಾರೆ. ಆಸ್ಪತ್ರೆಗೆ ಬರುವ ರೋಗಿಗಳಿಗೆ ಧೈರ್ಯ ತುಂಬುವ ಮಾತನಾಡುವದನ್ನು ಬಿಟ್ಟು ಅಧೈರ್ಯ ತುಂಬುತ್ತಿದ್ದಾರೆ. ಇದರಿಂದ ರೋಗಿಗಳು ಭಯಗೊಂಡು ಬಲಿಯಾಗುತ್ತಿದ್ದಾರೆ ಎಂದು ಆರೋಪ ಮಾಡಿದ್ದಾರೆ.

ಇಂಡಿ ತಾಲೂಕು ಆಸ್ಪತ್ರೆ ವೈದ್ಯ ಡಾ. ಅಮೀತ ಕೋಳೆಕರ ಅವರೊಂದಿಗೆ ವಾಗ್ವಾದ ನಡೆಸಿದ್ದು, ಕಳೆದ ಮೂರ್ನಾಲ್ಕು ದಿನದ ಹಿಂದೆ ಇಂಡಿ ಆಸ್ಪತ್ರೆಯಲ್ಲಿ ದಾಖಲಾಗಿದ್ದರು, ಕೊರೊನಾ ರೋಗಿಗಳಿಗೆ ಸರಿಯಾಗಿ ಚಿಕಿತ್ಸೆ ನೀಡದ ಕಾರಣ ರೋಗಿ ಸಾವಿಗೀಡಾಗಿದ್ದಾರೆ ಎಂದು ಸಂಬಂಧಿಕರು ಆರೋಪಿಸಿದ್ದಾರೆ.


 

Share the Post:

ಇತ್ತೀಚಿನ ಸುದ್ದಿಗಳು