ವಿಜಯಪುರ : ಬಸವ ಜಯಂತಿ ಉತ್ಸವ ಸಮಿತಿ ಹಾಗೂ ವಿಜಯಪುರ ಜಿಲ್ಲಾಡಳಿತದಿಂದ ನಗರದ ಕಂದಗಲ್ಲ ಹಣಮಂತರಾಯ ರಂಗಮಂದಿರದಲ್ಲಿ ಏಪ್ರಿಲ್ 19, ಮತ್ತು 20ರಂದು ಎರಡು ದಿನಗಳ ಕಾಲ ಹಮ್ಮಿಕೊಂಡಿರುವ ವಿಶ್ವಗುರು ಬಸವಣ್ಣನವರ 893 ನೇ ಜಯಂತಿ ಉತ್ಸವದ ಎರಡನೇ ದಿನ ತಿಡಗುಂದಿಯ ಕಾಯಕಯೋಗಿ ಗ್ರಾಮೀಣ ಶಿಕ್ಷಣ ಸಂಸ್ಥೆ ಮಕ್ಕಳಿಂದ ಶಾಲಾ ಆಡಳಿತಾಧಿಕಾರಿ ಕುಮಾರಗೌಡ ಪಾಟೀಲ, ಉಪ ಪ್ರಾಚಾರ್ಯ ಪ್ರವೀಣಗೌಡ ಪಾಟೀಲ ನೇತೃತ್ವದಲ್ಲಿ ಕಾಯಕಯೋಗಿ ಗ್ರಾಮೀಣ ಶಿಕ್ಷಣ ಸಂಸ್ಥೆ ಮಕ್ಕಳಿಂದ ಯೋಗ ಮತ್ತು ಮಲ್ಲಗಂಬ Mallakhamb ವಿಶೇಷ ಪ್ರದರ್ಶನ ಕಾರ್ಯಕ್ರಮ ಜರುಗಿತು. ಈ ಸಂದರ್ಭದಲ್ಲಿ ಉತ್ಸವ ಸಮಿತಿ ಪ್ರಮುಖರು ಉಪಸ್ಥಿತರಿದ್ದರು.






