Vijayapura News | ಆಂಗ್ಲ ಮಾಧ್ಯಮ ಮೌಲಾನ ಅಜಾದ್ ಶಾಲೆಯನ್ನು ರದ್ದುಪಡಿಸಿದ್ದಕ್ಕಾಗಿ ಕೆ.ಆರ್.ಎಸ್. ಪಕ್ಷದಿಂದ ಹೋರಾಟ

ಕೆ.ಆರ್.ಎಸ್. ಪಕ್ಷ image

ವಿಜಯಪುರ: ಅಲ್ಪಸಂಖ್ಯಾತ ಶ್ರೇಯೋಭಿವೃದ್ಧಿಗಾಗಿ ರಾಜ್ಯ ಸರ್ಕಾರ ರಾಜ್ಯದ್ಯಂತ 200 ಮೌಲಾನಾ ಆಜಾದ್ ಮಾದರಿ ತೆರೆಯಲಾಗಿತ್ತು. ಅದರಲ್ಲಿ ಒಂದು ಶಾಲೆಯು ದೇವರಹಿಪ್ಪರಗಿ ಮತಕ್ಷೇತ್ರಕ್ಕೆ ಮಂಜೂರು ಮಾಡಲಾಗಿತ್ತು. ಅಧಿಕಾರಿಗಳ ನಿರ್ಲಕ್ಷತನ ಚುನಾಯಿತ ಪ್ರತಿನಿಧಿಗಳ ಮುಂತಾದ ಕಾರಣಗಳಿಂದ ಮಂಜೂರಾಗಿರುವ ಆಂಗ್ಲ ಮಾಧ್ಯಮ ಮೌಲಾನ ಅಜಾದ್ ಶಾಲೆಯನ್ನು ರದ್ದುಪಡಿಸಿ ನಮ್ಮ ಮತಕ್ಷೇತ್ರದ ಅಲ್ಪಸಂಖ್ಯಾತ ಸಮುದಾಯದ ಮಕ್ಕಳಿಗೆ ರಾಜ್ಯ ಸರ್ಕಾರ ಅನ್ಯಾಯವೆಸಗಿದೆ ಎಂದು ಕೆ.ಆರ್.ಎಸ್. ಪಕ್ಷ ವು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ಮತಕ್ಷೇತ್ರದಲ್ಲಿ ಜೆಡಿಎಸ್ ಚುನಾಯಿತ ಶಾಸಕರು ಇರುವುದರಿಂದಾಗಿ ಜಿಲ್ಲೆಯ ಕಾಂಗ್ರೆಸ್ ಪಕ್ಷದ ಶಾಸಕರುಗಳು ತಾಲೂಕಿಗೆ ಬಂದಿರುವ ಮೌಲಾನ ಆಜಾದ್ ಮಾದರಿ ಶಾಲೆಯನ್ನು ಬೇರೆ ಕಡೆಗೆ ಮಂಜೂರಾತಿಯನ್ನು ಪಡದಿರುವುದನ್ನು ಕೆ.ಆರ್.ಎಸ್. ಪಕ್ಷ ವು ಖಂಡಿಸುತ್ತದೆ.

ಇದನ್ನೂ ಓದಿ: Vijayapura News | ಪ್ರತಿಭಾವಂತ ಕ್ರೀಡಾಪಟುಗಳಿಗೆ ತರಬೇತಿಯ ಕೊರತೆ: ಹಾಸಿಂಪೀರ

ಮತಕ್ಷೇತ್ರದಲ್ಲಿ 40 ಸಾವಿರಕಿಂತಲೂ ಹೆಚ್ಚು ಅಲ್ಪಸಂಖ್ಯಾತ ಮತದಾರರು ಇದ್ದಾರೆ ಅದರಲ್ಲೂ ತುಂಬಾ ಬಡತನದ ಜೀವನ ಸಾಗಿಸುವ ಕುಟುಂಬಗಳ ಸಂಖ್ಯೆ ಹೆಚ್ಚಾಗಿದ್ದು ಅವರು ಆರ್ಥಿಕವಾಗಿ ಮತ್ತು ಶೈಕ್ಷಣಿಕವಾಗಿ ಹಲವಾರು ದಶಕಗಳಿಂದ ವಂಚಿತರಾಗಿದ್ದಾರೆ.

ಮಕ್ಕಳು ಉಚಿತವಾಗಿ ಆಂಗ್ಲ ಮಾಧ್ಯಮದಲ್ಲಿ ಶಿಕ್ಷಣ ಪಡೆಯುವುದು ನಾಡಿನ ಮತ್ತು ದೇಶದ ಸಂಪನ್ಮೂಲ ನಾಗರಿಕರಾಗುವುದನ್ನು ತಪ್ಪಿಸುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ನಡೆಯನ್ನು ಕೆ.ಆರ್.ಎಸ್. ಪಕ್ಷವು ಖಂಡಿಸುತ್ತದೆ. ಈ ಕೂಡಲೇ ರಾಜ್ಯ ಸರ್ಕಾರ ಶಾಲೆಯನ್ನು ಮಂಜೂರು ಮಾಡುವುದರ ಮೂಲಕ ನಮ್ಮ ಭಾಗದ ಬಡ ಮಕ್ಕಳಿಗೆ ಅನುಕೂಲ ಮಾಡಿಕೊಡಬೇಕಾಗಿ ಕೆ.ಆರ್.ಎಸ್. ಎಸ್ ಪಕ್ಷವು ಅಗ್ರಹಿಸುತ್ತದೆ. ಒಂದು ವೇಳೆ ಮಂಜೂರಾತಿ ಮಾಡದೆ ಹೋದಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯ ಮುಂದೆ ಧರಣಿ,ಪ್ರತಿಭಟನೆ ಹಮ್ಮಿಕೊಳ್ಳುವುದು ಅನಿವಾರ್ಯವಾಗುತ್ತದೆ.

ಇದನ್ನೂ ಓದಿ: Vijayapura News | ಸಂಗೀತ ವಿದ್ವಾನ್ ದಿ. ಶ್ರೀಮಂತ ಅವಟಿ ಪುಣ್ಯ ಸ್ಮರಣೆ | ಯುವ ಸಂಗೀತ ಪುರಸ್ಕಾರ 2024

ರಾಜ್ಯ ಸಂಘಟನಾ ಕಾರ್ಯದರ್ಶಿ ಶಿವಾನಂದ ಯಡಹಳ್ಳಿ ಮಾತನಾಡಿದರು. ಅವರ ಜೋತೆ ಹಮೀದ್ ಅಬ್ದುಲ್ ಇನಾಮದಾರ, ದುರ್ಗಪ್ಪ ಬೂದಿಹಾಳ, ಶೀನು ಹಿಪ್ಪರಗಿ, ರಾಕೇಶ ಇಂಗಳಗಿ, ಪ್ರವೀಣ ಕನಸೇ, ಸುರೇಂದ್ರ ಕುನಸಲೇ, ಭೀಮಾಶಂಕರ ಕಾಂಬಳೆ ಇತರರು ಇದ್ದರು.


Share the Post:

ಇತ್ತೀಚಿನ ಸುದ್ದಿಗಳು