ಡಿಸೆಬರ್ ಅಂತ್ಯದವರೆಗೂ ಶಾಲೆ ಆರಂಭವಿಲ್ಲ: ಬಿ.ಎಸ್.ಯಡಿಯೂರಪ್ಪ

ಬೆಂಗಳೂರು ನ. 23: ಕೊವೀಡ್-19 ತಾಂತ್ರಿಕ ಸಲಹಾ ಸಮಿತಿ ನೀಡಿದ ವರದಿ ಆಧರಿಸಿ ರಾಜ್ಯ ಸರಕಾರ  ಡಿಸೆಬರ್ ಅಂತ್ಯದವರೆಗೂ ಶಾಲೆ ಆರಂಭವಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ಶಾಲೆ ಆರಂಭದ ಕುರಿತಾಗಿ ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ಇಂದು ಮಹತ್ವದ ಸಭೆ ನಡೆದಿದ್ದು, ಸಭೆ ಬಳಿಕ ಮಾತನಾಡಿದ ಸಿಎಂ, ಸಧ್ಯಕ್ಕೆ ಶಾಲೆ ಆರಂಭ ಬೇಡ ಎಂದು ತಜ್ಞರು ಸಲಹೆ ನೀಡಿದ್ದಾರೆ. ಹಾಗಾಗಿ ಡಿಸೆಂಬರ್ ಅಂತ್ಯದವರೆಗೂ ಶಾಲೆ ಆರಂಭಿಸುವುದಿಲ್ಲ. ಬಳಿಕ ಮತ್ತೊಮ್ಮೆ ಸಭೆ ನಡೆಸಿ ಚರ್ಚೆ ನಡೆಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.


Share the Post:

ಇತ್ತೀಚಿನ ಸುದ್ದಿಗಳು