ವಿಜಯಪುರದಲ್ಲಿ ಬಸವ ಜಯಂತಿ : ಪ್ರತಿಮೆಗೆ ಸಚಿವರಿಂದ ಮಾಲಾರ್ಪಣೆ

BasavaJayanti

ವಿಜಯಪುರ: ಬಸವ ಜಯಂತಿ ಅಂಗವಾಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಂ.ಬಿ.ಪಾಟೀಲ ಅವರು ಸೋಮವಾರ ಬೆಳಿಗ್ಗೆ ಇಲ್ಲಿನ ಬಸವೇಶ್ವರ ವೃತ್ತದಲ್ಲಿರುವ ವಿಶ್ವಗುರು ಬಸವೇಶ್ಚರ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಗೌರವ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ವಿಶ್ವ ಗುರು ಬಸವಣ್ಣನವರು ಜನಿಸಿದ ವಿಜಯಪುರ ಜಿಲ್ಲೆಯಲ್ಲಿ ಬಸವಣ್ಣನವರ ಜಯಂತಿಯನ್ನು ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಆಚರಿಸಲಾಗುತ್ತಿದೆ. ಇವರ ಜಯಂತಿಯನ್ನು ಎಲ್ಲ ಸಮುದಾಯದವರೆಲ್ಲ ಸೇರಿ ವಿಜೃಂಭಣೆಯಿಂದ ಆಚರಿಸುತ್ತಿದ್ದೇವೆ. ಬಸವನಬಾಗೇವಾಡಿಯಿಂದ ಬಸವಜ್ಯೋತಿ ಯಾತ್ರೆಯೂ ಆಗಮಿಸುತ್ತಿದೆ ಎಂದರು.

ನಗರದಲ್ಲಿ ಬಸವಣ್ಣನವರ ಭವ್ಯ ಮೆರವಣಿಗೆಯೂ ನಡೆಯಲಿದೆ.
ಇಡೀ ವಿಶ್ವಕ್ಕೆ ತಮ್ಮ ವಚನಗಳ ಮೂಲಕ ಉತ್ತಮ ಸಂದೇಶ ನೀಡಿದ ಬಸವಣ್ಣನವರು ಶ್ರೇಷ್ಠ ದಾರ್ಶನಿಕರು, ಅವರಿಗೆ ಜನ್ಮನೀಡಿದ ಹಾಗೂ ಅವರ ಕರ್ಮಭೂಮಿ ಬಸವಕಲ್ಯಾಣ ಸೇರಿದಂತೆ ಎಲ್ಲೆಡೆಯೂ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ ಎಂದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ.ಆನಂದ.ಕೆ, ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಲಕ್ಷ್ಮಣ ನಿಂಬರಗಿ, ಮಹಾನಗರ ಪಾಲಿಕೆ ಆಯುಕ್ತ ವಿಜಯ ಮೆಕ್ಕಳಕಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು,ವಿವಿಧ ಸಮಾಜದ ಮುಖಂಡರು, ಸಾರ್ವಜನಿಕರು ಉಪಸ್ಥಿತರಿದ್ದರು.

Share the Post:

ಇತ್ತೀಚಿನ ಸುದ್ದಿಗಳು