ಜಿಲ್ಲಾ ಮಟ್ಟದ ಯುವಜನೋತ್ಸವ

ವಿಜಯಪುರ ಡಿ.23: 2020-21 ನೇ ಸಾಲಿನ ವಿಜಯಪುರ ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮವನ್ನು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ ತೊರವಿ ವಿಜಯಪುರ ಇವರ ಸಹಯೋಗದೊಂದಿಗೆ ದಿನಾಂಕ : 29-12-2020 ರಂದು ಬೆಳಿಗ್ಗೆ 10-00 ಗಂಟೆಗೆ ಕೋವಿಡ್ ಮುನ್ನೆಚ್ಚರಿಕೆಗಳೊಂದಿಗೆ ತೊರವಿಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಲ್ಲಿ ಸಂಘಟಿಸಲು ತೀರ್ಮಾನಿಸಲಾಗಿದೆ ಎಂದು ವಿಜಯಪುರ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಎಸ್.ಜಿ ಲೋಣಿ ಅವರು ತಿಳಿಸಿದ್ದಾರೆ.

ಕಾರ್ಯಕ್ರಮದಲ್ಲಿ 15 ರಿಂದ 29 ವರ್ಷದೊಳಗಿನ ಶಾಲಾ, ಕಾಲೇಜು ಯುವಕ, ಯುವತಿಯರು, ಯುವ ಕಲಾವಿದರು ವಿವಿಧ ಸ್ಫರ್ಧೆಗಳಲ್ಲಿ ಭಾಗವಹಿಸಬಹುದಾಗಿದೆ. ಭಾಗವಹಿಸಲಿಚ್ಚಿಸುವ ಯುವಜನರು ತಮ್ಮ ಹೆಸರು, ವಿಳಾಸ ವಯಸ್ಸಿನ ಪ್ರಮಾಣ ಪತ್ರ ಸಹಿತ ಭಾಗವಹಿಸುವ ಸ್ಫರ್ಧೆ ವಿವರಗಳನ್ನು ದಿನಾಂಕ : 28-12-2020 ರೊಳಗೆ ಕಚೇರಿಯಲ್ಲಿ ಖುದ್ದಾಗಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಕಚೇರಿಯ ದೂರವಾಣಿ ಸಂ : 08352-251085/9449070816 ನ್ನು ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Share the Post:

ಇತ್ತೀಚಿನ ಸುದ್ದಿಗಳು

Senior Students' Association image

Vijayapura News : ಪ್ರಾಚೀನ ಕಾಲದಿಂದ ಪ್ರಸ್ತುತ ಕಾಲದವರೆಗೂ ಪಾವಿತ್ರತೆ ಉಳಿಸಿಕೊಂಡ ವೃತ್ತಿ ಶಿಕ್ಷಕರ ವೃತ್ತಿ; ಅಶೋಕ್ ಹಂಚಲಿ

ವಿಜಯಪುರ: ಬಸವೇಶ್ವರ ವಿದ್ಯಾವರ್ಧಕ ಸಂಘದ ಪ್ರೆಸಿಡೆನ್ಸಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಹಿರಿಯ

Read More »