ವಿಜಯಪುರ: ನವರಸ ಪ್ರದರ್ಶಕ ಮಹಾವಿದ್ಯಾಲಯ ಉದ್ಘಾಟನೆ

ವಿಜಯಪುರ: ಕರ್ನಾಟಕ ರಾಜ್ಯ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯ ಮೈಸೂರು ಇವರಿಂದ ಮಾನ್ಯತೆ ಪಡೆದುಕೊಂಡಿರುವ ಉತ್ತರ ಕರ್ನಾಟಕದ ಹೆಮ್ಮೆಯ ಸಂಸ್ಥೆ ಖ್ಯಾತ ಅಂತಾರಾಷ್ಟ್ರೀಯ ನೃತ್ಯ ಕಲಾವಿದ ದಂಪತಿಗಳಾದ ಶ್ರೀ ರಂಗನಾಥ ಹಾಗೂ ಸುನಂದಾ ಬತ್ತಾಸಿ ದಂಪತಿಗಳ ಸಾರಥ್ಯಲ್ಲಿ ನೂತನವಾಗಿ ಪ್ರಾರಂಭವಾಗುತ್ತಿರುವ ವಿಜಯಪುರ ನಗರದ ನವರಸ ಪ್ರದರ್ಶಕ ಕಲೆಗಳ ಮಹಾವಿದ್ಯಾಲಯದ ಉದ್ಘಾಟನಾ ಸಮಾರಂಭ ಶನಿವಾರ ದಿನಾಂಕ : 03-08-2024 ರಂದು ಸಂಜೆ 5 ಗಂಟೆಗೆ ವಿಜಯಪುರದ ಜಲನಗರ ಕಾಲೋನಿಯ ಬುದ್ಧ ವಿಹಾರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ನವರಸ ನೃತ್ಯ ಕಲಾ ಸಂಸ್ಥೆಯ, ನವರಸ ಪ್ರದರ್ಶಕ ಕಲೆಗಳ ಮಹಾವಿದ್ಯಾಲಯ ವಿಜಯಪುರ ಸಂಸ್ಥಾಪಕ ಹಾಗೂ ನಿರ್ದೇಶಕರಾದ ರಂಗನಾಥ ವಿ ಬತ್ತಾಸಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ವಿಜಯಪುರ:ಅತಿಕ್ರಮಣ ತೆರವು ಕಾರ್ಯಾಚರಣೆ

ಕಾರ್ಯಕ್ರಮವನ್ನು ಮಾನ್ಯ ಜಿಲ್ಲಾಧಿಕಾರಿಗಳಾದ ಶ್ರೀ ಟಿ. ಭೂಬಾಲನ್ ಉದ್ಘಾಟಿಸಲಿದ್ದಾರೆ. ಪ್ರೊ. ಬಿ.ಕೆ. ತುಳಸಿಮಾಲ ಅಧ್ಯಕ್ಷತೆ ವಹಿಸಲಿದ್ದಾರೆ. ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಂತೋಷ ಭೋವಿ, ವಿದೂಶಿಲತಾ ಜಹಾಗಿರದಾರ, ಡಾ. ಹರೀಶ ಹೆಗಡೆ ಸೇರಿದಂತೆ ಗಣ್ಯರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.

ಇದೇ ಸಂದರ್ಭದಲ್ಲಿ ನವರಸ ನೃತ್ಯ ಕಲಾ ಸಂಸ್ಥೆ (ರಿ) ವತಿಯಿಂದ ಹಿಂದುಸ್ತಾನಿ ಸಂಗೀತ, ಕರ್ನಾಟಕ ಸಂಗೀತ ಹಾಗೂ ತಬಲಾ ವಾದನ, ಕಥಕ್, ಭರತನಾಟ್ಯ ಹಾಗೂ ನಾಟಕ ಪ್ರದರ್ಶನ ಸಾಂಸ್ಕೃತಿಕ ಕಾರ್ಯಕ್ರಮ ಜರುಗಲಿವೆ.

ಇದನ್ನೂ ಓದಿ: ಉಜ್ವಲ್‌ಕುಮಾರ ಘೋಷ್:ಅರ್ಹರಿಗೆ ಸೌಲಭ್ಯ ದೊರಕಿಸಿ.


Share the Post:

ಇತ್ತೀಚಿನ ಸುದ್ದಿಗಳು

Senior Students' Association image

Vijayapura News : ಪ್ರಾಚೀನ ಕಾಲದಿಂದ ಪ್ರಸ್ತುತ ಕಾಲದವರೆಗೂ ಪಾವಿತ್ರತೆ ಉಳಿಸಿಕೊಂಡ ವೃತ್ತಿ ಶಿಕ್ಷಕರ ವೃತ್ತಿ; ಅಶೋಕ್ ಹಂಚಲಿ

ವಿಜಯಪುರ: ಬಸವೇಶ್ವರ ವಿದ್ಯಾವರ್ಧಕ ಸಂಘದ ಪ್ರೆಸಿಡೆನ್ಸಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಹಿರಿಯ

Read More »