‍ಉಚಿತ: ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ

ಉಚಿತ image
ವಿಜಯಪುರ: ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ವಿಜಯಪುರ ಜಿಲ್ಲೆಯ ನೂರು ಜನ ಪರೀಕ್ಷಾರ್ಥಿಗಳಿಗೆ ದಲಿತ ವಿದ್ಯಾರ್ಥಿ ಪರಿಷತ್ ವತಿಯಿಂದ 3 ತಿಂಗಳ ಉಚಿತ ತರಬೇತಿ ಆಯೋಜಿಸಲಾಗಿದೆ. ಎಂದು ಪರಿಷತ್ ಜಿಲ್ಲಾ ಸಂಚಾಲಕ ಅಕ್ಷಯ್ ಕುಮಾರ್ ಅಜಮನಿ ತಿಳಿಸಿದರು. ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ವಿಜಯಪುರ ಜಿಲ್ಲೆಯ 100 ಪರೀಕ್ಷಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಾದ KAS, PDO, PSI, SDA, FDA, ಬ್ಯಾಂಕಿಂಗ್, ಗ್ರಾಮ ಲೆಕ್ಕಾಧಿಕಾರಿ ಜೊತೆಗೆ ಇನ್ನು ಹಲವು ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ಇರಲಿದೆ. ಉಚಿತ
ಇದನ್ನೂ ಓದಿ:ಶಿಕ್ಷಕ: ರಾಜ್ಯದಾದ್ಯಂತ ಅನಿರ್ದಿಷ್ಟ ಕಾಲಾವಧಿಗೆ ಮುಷ್ಕರ
ನಗರದ ಬಿಡಿಎ ಕ್ರಾಸ್ ಹತ್ತಿರ ಜಿಲ್ಲಾ ಪಂಚಾಯಿತಿ ಮುಖ್ಯ ದ್ವಾರದ ಬಳಿ ಇರುವ ಅನಮೂಲ್ ಟವರ್ ಬಿಲ್ಡಿಗ್ ನಲ್ಲಿರುವ ಡಾ.ಬಿ.ಆರ್ ಅಂಬೇಡ್ಕರ್ ಆಫಿಸರ್ಸ್ ಅಕಾಡೆಮಿ ಮೂಲಕ ಈ  3 ತಿಂಗಳ ಉಚಿತ ತರಬೇತಿ ನೀಡಲು ನಿಯೋಜಿಸಲಾಗಿದೆ. ವಿಜಯಪುರ ಜಿಲ್ಲೆಯ ಪರೀಕ್ಷಾರ್ಥಿಗಳು ಇದರ ಸದುಪಯೋಗವನ್ನು ಪಡೆದುಕೊಳ್ಳಬಹುದು.
ಇದನ್ನೂ ಓದಿ:ಕರ್ನಾಟಕ ಸಂಭ್ರಮ: ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ ಅಭಿಯಾನ
ಪರೀಕ್ಷಾರ್ಥಿಗಳು 9380678859/ 9739396446 ಈ ಮೊಬೈಲ್ ಸಂಖ್ಯೆಗೆ ಕರೆ ಮಾಡುವ ಮೂಲಕ ತಮ್ಮ ಹೆಸರನ್ನು ನೋಂದಾಯಿಸಬಹದು. 100 ಜನ ಪರೀಕ್ಷಾರ್ಥಿಗಳಿಗೆ ತರಬೇತಿಗೆ ಅವಕಾಶ ಇರುವುದರಿಂದ, ಬೇಗನೆ ಹೆಸರನ್ನು ನೋಂದಾಯಿಸುವವರಿಗೆ ತರಬೇತಿಗೆ ಆಯ್ಕೆ ಮಾಡಿಕೊಳ್ಳಲಾಗುವದು ಎಂದು ಅಕ್ಷಯ್ ಕುಮಾರ್ ತಿಳಿಸಿದ್ದಾರೆ.


Share the Post:

ಇತ್ತೀಚಿನ ಸುದ್ದಿಗಳು

Senior Students' Association image

Vijayapura News : ಪ್ರಾಚೀನ ಕಾಲದಿಂದ ಪ್ರಸ್ತುತ ಕಾಲದವರೆಗೂ ಪಾವಿತ್ರತೆ ಉಳಿಸಿಕೊಂಡ ವೃತ್ತಿ ಶಿಕ್ಷಕರ ವೃತ್ತಿ; ಅಶೋಕ್ ಹಂಚಲಿ

ವಿಜಯಪುರ: ಬಸವೇಶ್ವರ ವಿದ್ಯಾವರ್ಧಕ ಸಂಘದ ಪ್ರೆಸಿಡೆನ್ಸಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಹಿರಿಯ

Read More »