7ನೇ ವೇತನ ಆಯೋಗ ಶೀಘ್ರ ಜಾರಿ: ಮುಖ್ಯಮಂತ್ರಿ ‌ಬಸವರಾಜ ಬೊಮ್ಮಾಯಿ

ಬೆಂಗಳೂರು : ರಾಜ್ಯ ಸರಕಾರಿ ನೌಕರರ ವೇತನ ಪರಿಷ್ಕರಣೆಗೆ ಸಂಬಂಧಿಸಿದಂತೆ ಈಗಾಗಲೇ ಹಿಂದಿನ ಮುಖ್ಯ ಕಾರ್ಯದರ್ಶಿ ಸುಧಾಕರ್ ಅವರ ಅಧ್ಯಕ್ಷತೆಯಲ್ಲಿ 7ನೇ ವೇತನ ಆಯೋಗ ರಚಿಸಲಾಗಿದ್ದು, ಬಜೆಟ್ ನಲ್ಲಿಯೇ 6 ಸಾವಿರ ಕೋಟಿ ರೂ.ಮೀಸಲಿಡಲಾಗಿದೆ ಎಂದು ಮುಖ್ಯಮಂತ್ರಿ ‌ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಹೆಚ್ಚುವರಿ ಹಣ ಅವಶ್ಯವಿದ್ದಲ್ಲಿ ಪೂರಕ ಬಜೆಟ್ ನಲ್ಲಿ ಒದಗಿಸಲಾಗುವುದು ಎಂದು ವರದಿ ಶೀಘ್ರ ಬರಲಿದ್ದು, ಅದರನುಸಾರ ಕ್ರಮವಹಿಸಲಾಗುವುದು ಎಂದ ಮುಖ್ಯಮಂತ್ರಿಗಳು, 2023-24ನೇ ಸಾಲಿನಲ್ಲಿಯೇ ವೇತನ ಆಯೋಗದ ವರದಿಗಳನ್ನು ಅನುಷ್ಠಾನಗೊಳಿಸಲಾಗುವುದು ಎಂದರು.

ಆಯೋಗ ಮಧ್ಯಂತರ ವರದಿ ನೀಡುವುದೋ ಅಥವಾ ಪೂರ್ಣ ವರದಿ ಸಲ್ಲಿಸುವುದೋ ಅದರನುಸಾರ ಸರಕಾರ ಶೀಘ್ರ ಕ್ರಮ ಕೈಗೊಳ್ಳಲಿದೆ.ಇದಕ್ಕಾಗಿ ಅನುದಾನ ಮೀಸಲಿಟ್ಟಿರುವುದರಿಂದ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಯಾವುದೇ ಸಮಸ್ಯೆ ಉದ್ಭವಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು.

Share the Post:

ಇತ್ತೀಚಿನ ಸುದ್ದಿಗಳು

Senior Students' Association image

Vijayapura News : ಪ್ರಾಚೀನ ಕಾಲದಿಂದ ಪ್ರಸ್ತುತ ಕಾಲದವರೆಗೂ ಪಾವಿತ್ರತೆ ಉಳಿಸಿಕೊಂಡ ವೃತ್ತಿ ಶಿಕ್ಷಕರ ವೃತ್ತಿ; ಅಶೋಕ್ ಹಂಚಲಿ

ವಿಜಯಪುರ: ಬಸವೇಶ್ವರ ವಿದ್ಯಾವರ್ಧಕ ಸಂಘದ ಪ್ರೆಸಿಡೆನ್ಸಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಹಿರಿಯ

Read More »