SSLC ವಿಧ್ಯಾರ್ಥಿಗಳಿಗೆ ಶುಭ ಹಾರೈಸಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

ಬೆಂಗಳೂರು ಜೂನ್.24: ಕೊರೋನಾ ಹಿನ್ನೆಲೆ ಲಾಕ್ ಡೌನ್ ದಿಂದ ಮುಂದೂಡಲ್ಪಟ್ಟಿದ್ದ ಎಸ್.ಎಸ್.ಎಲ್.ಸಿ ಪರೀಕ್ಷೆಗಳನ್ನು ನಡೆಸಲು ಸರಕಾರ ಎಲ್ಲ ಸಿದ್ದತೆಗಳನ್ನು ಮಾಡಿದೆ. ವಿದ್ಯಾರ್ಥಿಗಳು ಮಾಸ್ಕ, ಸ್ಯಾನಿಟೈಜರ್ ಗಳನ್ನು ಕಡ್ಡಾಯವಾಗಿ ಬಳಸಿ ವ್ಯಕ್ತಿಗತ ಅಂತರ ಕಾಪಾಡಿಕೊಳ್ಳಿ, ಸರಕಾರ ಪರೀಕ್ಷೆ ನಡೆಸಲು ಹೊರಡಿಸಿರುವ ಮಾರ್ಗಸೂಚಿಗಳನ್ನು ಪಾಲಿಸಿ. ಶೈಕ್ಷಣಿಕ ಜೀವನದ ಮಹತ್ವದ ಘಟ್ಟವಾದ ಪರೀಕ್ಷೆಯನ್ನು ಭಯ ಮತ್ತು ಆತಂಕವಿಲ್ಲದೆ ಆತ್ಮವಿಶ್ವಾಸದಿಂದ ಎದುರಿಸಿ ಯಶಸ್ಸು ಪಡೆಯಿರಿ ಉಜ್ವಲ ಭವಿಷ್ಯ ನಿಮ್ಮದಾಗಲಿ ಎಂದು ಟ್ವಿಟ್ ಮೂಲಕ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

Share the Post:

ಇತ್ತೀಚಿನ ಸುದ್ದಿಗಳು