ದನಕ್ಕೆ ಬಡಿದಂತೆ ಬಡಿಯುವ ಲಾಕ್‌ ಡೌನ್‌ ಎಷ್ಟು ಸರಿ ? ಎಚ್.ಡಿ.ಕುಮಾರಸ್ವಾಮಿ ಗರಂ

ಹೊರಗೆ ಬಂದ ಜನಕ್ಕೆ ದನಕ್ಕೆ ಬಡಿದಂತೆ ಬಡಿಯುವ ಲಾಕ್‌ ಡೌನ್‌ ಎಷ್ಟು ಸರಿ ಎಂದು ಜೆಡಿಎಸ್‌ ನಾಯಕ ಎಚ್.ಡಿ.ಕುಮಾರಸ್ವಾಮಿ ಬಿಜೆಪಿ ಸರಕಾರವನ್ನು ಪ್ರಶ್ನಿಸಿದ್ದಾರೆ. ಜನಸಾಮಾನ್ಯರ ಅಗತ್ಯತೆಗಳಿಗೆ ಸ್ಪಂದಿಸಬೇಕೇ ಹೊರತು ಈ ರೀತಿ ಜನರ ಮೇಲೆ ಲಾಠಿ ಬಿಸುವದು ಸರಿ ಅಲ್ಲ ಎಂದು ಎಚ್.ಡಿ. ಕುಮಾರಸ್ವಾಮಿ ಟ್ವಿಟ್‌ ಮಾಡಿದ್ದಾರೆ.

ಮಹಾರಾಷ್ಟ್ರ, ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಕೇಂದ್ರ ಸರ್ಕಾರಕ್ಕೆ ಕಾಯದೇ ಲಾಕ್ ಡೌನ್ ಮಾಡಿವೆ. ಜನರಿಗೆ ಆಹಾರ ಸೇರಿದಂತೆ ಪರಿಹಾರ ಘೋಷಿಸಿವೆ. ಆಂಧ್ರದಲ್ಲಿ ಸೋಂಕಿತರಿಗೆ ಉಚಿತ ಚಿಕಿತ್ಸೆ ಸಿಗುತ್ತಿದೆ. ಇದು ಸರ್ಕಾರಗಳ ಜವಾಬ್ದಾರಿಯುತ ನಡೆ. ಆದರೆ, ಜವಾಬ್ದಾರಿಯಿಂದ ನುಣುಚಿಕೊಳ್ಳುವ ಕೇಂದ್ರದ ದುರ್ನಡೆಯನ್ನು ರಾಜ್ಯ ಅನುಸರಿಸಬಾರದು.

ಮನೆಗಳಿಂದ ಹೊರ ಬರುವ ಜನರ ಮೇಲೆ ದರ್ಪ ಪ್ರದರ್ಶಿಸುವುದನ್ನು ಬಿಟ್ಟು, ಜನ ಹೊರಗೆ ಬಾರದಂತೆ ಅವರ ಅಗತ್ಯಗಳನ್ನು ಪೂರೈಸುವ, ಪರಿಹಾರ ಒದಗಿಸುವ ಕ್ರಮಗಳತ್ತ ಸರ್ಕಾರ ಗಮನಹರಿಸಬೇಕು. ಈ ವಿಚಾರದಲ್ಲಿ ನೆರೆ ರಾಜ್ಯಗಳು ಅನುಸರಿಸುತ್ತಿರುವ ಕ್ರಮಗಳನ್ನು ರಾಜ್ಯ ಅವಲೋಕಿಸಬೇಕು. ಜನರ ಆರೋಗ್ಯ ಎಷ್ಟು ಮುಖ್ಯವೋ ಜನರ ಬದುಕೂ ಅಷ್ಟೇ ಮುಖ್ಯವಾಗಬೇಕು.

Share the Post:

ಇತ್ತೀಚಿನ ಸುದ್ದಿಗಳು