ವಿಜಯಪುರ: ಸಂವಿಧಾನಿಕ ಹುದ್ದೆಯಲ್ಲಿರುವ ಗೌರವಾನ್ವಿತ ರಾಜ್ಯಪಾಲರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಕಾಂಗ್ರೆಸ್ ಸಚಿವರು, ಶಾಸಕರು, ಮುಖಂಡರ ವರ್ತನೆ ಖಂಡಿಸಿ, ವಾಲ್ಮೀಕಿ ಹಗರಣ, ಮುಡಾ ಹಗರಣದ ಸೇರಿದಂತೆ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ, ದುರಾಡಳಿತ ವಿರೋಧಿಸಿ ಹಾಗೂ ಕಾರಣಿಕರ್ತರಾದ ಸಿಎಂ ಸಿದ್ದರಾಮಯ್ಯ ನವರ ರಾಜೀನಾಮೆಗೆ ಒತ್ತಾಯಿಸಿ ನಗರದಲ್ಲಿ ಗುರುವಾರ ಭಾರತೀಯ ಜನತಾ ಪಾರ್ಟಿ ಜಿಲ್ಲಾ ಘಟಕದ ವತಿಯಿಂದ ಬೃಹತ್ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಲಾಯಿತು.

ನಗರದ ಸಿದ್ದೇಶ್ವರ ದೇವಸ್ಥಾನ ಆವರಣದಿಂದ ಆರಂಭಗೊಂಡ ಪ್ರತಿಭಟನಾ ಮೆರವಣಿಗೆ, ಮಹಾತ್ಮ ಗಾಂಧಿ ಚೌಕ್, ಬಸವೇಶ್ವರ ವೃತ್ತ, ಡಾ.ಬಿ.ಆರ್.ಅಂಬೇಡ್ಕರ್ ವೃತ್ತದ ಮಾರ್ಗವಾಗಿ ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ, ಪ್ರತಿಭಟನೆ ನಡೆಸಿ, ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು.
ಇದನ್ನೂ ಓದಿ: ಲಂಚ ಪಡೆದವನಿಗೆ ನ್ಯಾಯಾಲಯದಿಂದ 40 ಸಾವಿರ ದಂಡ
ಜಿಲ್ಲಾಧ್ಯಕ್ಷ ಆರ್.ಎಸ್.ಪಾಟೀಲ ಕೂಚಬಾಳ ಮಾತನಾಡಿ, ದಲಿತ ರಾಜ್ಯಪಾಲರು ಎನ್ನುವ ಕಾರಣಕ್ಕೆ ಕಾಂಗ್ರೆಸ್ ಸರ್ಕಾರದ ಸಚಿವರು, ಶಾಸಕರು, ಮುಖಂಡರು ಮನಸ್ಸಿಗೆ ಬಂದಂತೆ ಅವಹೇಳನಕಾರಿಯಾಗಿ ಹಾಗೂ ಏಕವಚನ ಪ್ರಯೋಗ ಮಾಡುವ ಮೂಲಕ ಸಂವಿಧಾನ ಹುದ್ದೆಯಲ್ಲಿರುವ ಗೌರವಾನ್ವಿತ ರಾಜ್ಯಪಾಲರನ್ನು ನಿಂದಿಸಿರುವುದು ಖಂಡನೀಯ. ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗಳ ಎದುರಲ್ಲೇ ಈ ರೀತಿಯ ಹೀನ ವರ್ತನೆ ನಡೆದರೂ, ಅವರ ವಿರುದ್ಧ ಕ್ರಮಗೊಂಡಿಲ್ಲ. ಇದರಿಂದ ತಿಳಿಯುತ್ತದೆ ನಿಜವಾದ ದಲಿತ ವಿರೋಧಿಗಳು, ಸಂವಿಧಾನ ವಿರೋಧಿಗಳು ಯಾರು ಎನ್ನುವುದು. ಕೂಡಲೇ ಅವಮಾನಿಸಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಇದನ್ನೂ ಓದಿ: ಆಲಮಟ್ಟಿ ಜಲಾಶಯಕ್ಕೆ ಬಾಗಿನ ಅರ್ಪಣೆ- ಸಿದ್ಧರಾಮಯ್ಯ
ಎಸ್.ಟಿ ಸಮುದಾಯದ ಜನರಿಗೆ ಕಲ್ಪಿಸಬೇಕಾದ ರೂ. 187 ಕೋಟಿ ಹಣವನ್ನು, ಭ್ರಷ್ಟ ಕಾಂಗ್ರೆಸ್ ಸರ್ಕಾರ ಅನೇಕ ನಕಲಿ ಖಾತೆಗಳಿಗೆ ವರ್ಗಾವಣೆ ಮಾಡುವ ಮೂಲಕ ಕೊಳ್ಳೆ ಹೊಡೆದು, ಆ ಸಮುದಾಯಕ್ಕೆ ಅನ್ಯಾಯದ ಜೊತೆಗೆ ಅಮಾಯಕ ನೌಕರನ ಸಾವಿಗೂ ಕಾರಣವಾಗಿದೆ. ಅಲ್ಲದೆ, ದಲಿತರು, ಹಿಂದುಳಿದವರ ಪರವೆಂದು ಭಾಷಣ ಮಾಡಿ ಅಧಿಕಾರಕ್ಕೆ ಬಂದು, ಎಸ್.ಸಿ, ಎಸ್.ಟಿ ಸಮುದಾಯಕ್ಕೆ ಸಿಗಬೇಕಾದ ಎಸ್.ಸಿ.ಪಿ, ಟಿ.ಎಸ್.ಪಿ ರೂ.25 ಸಾವಿರ ಕೋಟಿ ಹಣವನ್ನು ಬಿಟ್ಟಿ ಭಾಗ್ಯಗಳಿಗೆ ಬಳಸಿಕೊಳ್ಳುವ ಮೂಲಕ ದಲಿತ ಸಮುದಾಯಕ್ಕೆ ಅನ್ಯಾಯ ಮಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸ್ವತಃ ಸಿಎಂ ಸಿದ್ದರಾಮಯ್ಯ ವಾಲ್ಮೀಕಿ ಹಗರಣದಲ್ಲಿ ಅವ್ಯವಹಾರ ಆಗಿರುವುದು ನಿಜವೆಂದು ಒಪ್ಪಿಕೊಂಡಿದ್ದಾರೆ. ಇನ್ನೂ ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಗಳ ಕುಟುಂಬವೇ ಸಿಲುಕಿರುವುದು ದಾಖಲೆಗಳಿಂದ ಸ್ಪಷ್ಟವಾಗಿದೆ. ಈ ಮೂಲಕ ಸಿದ್ದರಾಮಯ್ಯನವರ ಅಸಲಿ ಮುಖ ಹೊರ ಬಂದಿದೆ. ಹೀಗಾಗಿ ಕೂಡಲೇ ರಾಜೀನಾಮೆ ನೀಡಿ, ತನಿಖೆಗೆ ಸಹಕಾರ ನೀಡಬೇಕು. ರಾಜ್ಯಪಾಲರಿಗೆ ಗೌರವ ನೀಡುವ ಪದ್ಧತಿ ಬೆಳೆಸಿಕೊಳ್ಳಬೇಕು ಎಂದು ಆಗ್ರಹಿಸಿದರು.
ಇದನ್ನೂ ಓದಿ: ಹೆಣ್ಣು: ಹೆಣೆಯಲೇಬೇಕು ನೂರಾರು ಕಾಲಿನ ಜಡೆ..
ಮುಖಂಡರಾದ ವಿಜುಗೌಡ ಪಾಟೀಲ, ಎಸ್.ಕೆ.ಬೆಳ್ಳುಬ್ಬಿ ಮಾತನಾಡಿ, ವಾಲ್ಮೀಕಿ, ಮುಡಾ ಹಗರಣಗಳ ಬಗ್ಗೆ ದಾಖಲೆಗಳು ಕಾಂಗ್ರೆಸ್ ಸರ್ಕಾರ ಮತ್ತು ಮುಖ್ಯಮಂತ್ರಿಗಳು ತಪ್ಪು ಮಾಡಿದ್ದಾರೆ ಎಂದು ಹೇಳುತ್ತಿದ್ದರೂ, ಮುಖಮಂತ್ರಿಗಳು ಸೇರಿ ಇಡೀ ಸರ್ಕಾರ ಏನು ಮಾಡೇ ಇಲ್ಲವೆಂದು ಬಂಡತನ ಪ್ರದರ್ಶಿಸುವುದು ಸರಿಯಲ್ಲ. ಇಡೀ ರಾಜ್ಯಕ್ಕೆ ಕಾಂಗ್ರೆಸ್ ಬಣ್ಣ ಬಯಲಾಗಿದೆ.

ಮುಖಂಡರಾದ ರಮೇಶ ಭೂಸನೂರ, ಅರುಣ ಶಹಾಪುರ, ಈರಣ್ಣ ಪಟ್ಟಣಶೆಟ್ಟಿ, ಪ್ರಭುಗೌಡ ಅಸ್ಕೆ,ಅನಿಲ್ ಜಮಾದಾರ್ ಸಿದ್ದು ಬುಳ, ಮಂಜುನಾಥ್ ಮೀಸೆ, ಗುರುಲಿಂಗಪ್ಪ ಅಂಗಡಿ, ಮಲ್ಲಿಕಾರ್ಜುನ್ ಪಟ್ಟಣಶೆಟ್ಟಿ , ಉಮೇಶ್ ಕೊಲ್ಕರ್, ಕಾಸುಗೌಡ ಬಿರಾದಾರ, ಸಂಜು ಐಹೊಳಿ, ಮಳುಗೌಡ ಬಿರಾದಾರ, ಮಹೇಂದ್ರ ನಾಯಕ, ಶಂಕರ ಹೂಗಾರ, ಎಂ.ಎಸ್.ಕರಡಿ, ರಾಜಶೇಖರ ಮಗಿಮಠ, ಶಿವರುದ್ರ ಬಾಗಲಕೋಟ, ಪ್ರೇಮಾನಂದ ಬಿರಾದಾರ, ರಾಜಶೇಖರ ಕುರಿಯವರ, ವಿಠ್ಠಲ ಹೊಸಪೇಟ, ಸ್ವಪ್ನಾ ಕಣಮುಚನಾಳ, ಕುಮಾರ ಗಡಗಿ, ಮಹೇಶ ಒಡೆಯರ, ವಿಕ್ರಮ ಗಾಯಕವಾಡ, ವಿಜಯ ಜೋಶಿ, ಮಡಿವಾಳ ಯಾಳವಾರ, ಅಶೋಕ ಬೆಲ್ಲದ, ದತ್ತಾ ಗೊಲಂಡೆ, ಲಕ್ಷ್ಮಣ ಜಾಧವ, ಪಾಂಡು ಸಾಹುಕಾರ ದೊಡಮನಿ, ರಾಹುಲ ಜಾಧವ, ಬಾಬು ಶಿರಶ್ಯಾಡ, ಲಕ್ಷ್ಮೀ ಕನ್ನೊಳ್ಳಿ, ಚಂದ್ರು ಚೌದರಿ, ಬಸ್ ಹೂಗಾರ್, ಮಲ್ಲಿಕಾರ್ಜುನ್ ಕಿವ್ಡಿ, ಸಂತೋಷ್ ಪಾಟೀಲ್, ಸಂಜೆ ಪಾಟೀಲ್ ಕನಮಡಿ, ಕೃಷ್ಣ ಗುನಾಲ್ಕರ್ ರಾಜೇಶ್ ತೋಸೆ ಕಾಂತು ಸಿಂಧೆ ಸೇರಿದಂತೆ ಮತ್ತಿತರರು ಇದ್ದರು.





